ಸಂವಿಧಾನ ತಿದ್ದುಪಡಿ ಹೇಳಿಕೆ ಸಂಸದ ಅನಂತರಕುಮಾರ ಹೆಗಡೆ ವೈಯಕ್ತಿಕ ಅಭಿಪ್ರಾಯ, ಇದು ಪಕ್ಷದ ನಿಲುವಲ್ಲ: ಬಿಜೆಪಿ ಸ್ಪಷ್ಟನೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನ ಗೆದ್ದರೆ ಸಂವಿಧಾನ ತಿದ್ದುಪಡಿ ಮಾಡಬಹುದು ಎಂಬ ಉತ್ತರಕನ್ನಡ ಸಂಸದ ಅನಂತಕುಮಾರ ಹೆಗಡೆ (Anantkumar Hegde) ಹೇಳಿಕೆಗೆ ಬಿಜೆಪಿ ಸ್ಪಷ್ಟನೆ ನೀಡಿದ್ದು, ಅದು ಸಂಸದ ಅನಂತಕುಮಾರ ಹೆಗಡೆ ಅವರ ವೈಯಕ್ತಿಕ ಅಭಿಪ್ರಾಯವಾಗಿದೆಯೇ ಹೊರತು ಪಕ್ಷದ ಅಭಿಪ್ರಾಯವಲ್ಲ ಎಂದು ಸ್ಪಷ್ಟ ಪಡಿಸಿದೆ. ಈ ಸಂಬಂಧ ಎಕ್ಸ್ ನಲ್ಲಿ ಬಿಜೆಪಿ ಸ್ಪಷ್ಟನೆ ನೀಡಿದೆ. … Continued

ವೀಡಿಯೊ…| ಭಟ್ಕಳ : ಸಮುದ್ರಕ್ಕೆ ಜಿಗಿದು ಈಜಿದ ಸಚಿವ ಮಂಕಾಳ ವೈದ್ಯ…!

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಸಮೀಪ ಅರಬ್ಬಿ ಸಮುದ್ರದಲ್ಲಿ ಕೃತಕ ಬಂಡೆಸಾಲು ಅಳವಡಿಕೆ ಕಾಮಗಾರಿಗೆ ಚಾಲನೆ ನೀಡಲು ಆಗಮಿಸಿದ್ದ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ ಸಮುದ್ರದಲ್ಲಿ ಈಜಿ ಗಮನ ಸೆಳೆದಿದ್ದಾರೆ. ಬೆಳಕೆಯ ಸಮುದ್ರ ತೀರದಲ್ಲಿ ಕೃತಕ ಬಂಡೆಗಳನ್ನು ಸ್ಥಾಪಿಸುವ ಕಾರ್ಯಕ್ರಮಕ್ಕೆ … Continued

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಸಾವು

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ(KFD)ಗೆ ಮತ್ತೊಬ್ಬ ವ್ಯಕ್ತಿ ಸಾವಿಗೀಡಾಗಿದ್ದಾರೆ. ಜಿಲ್ಲೆಯ ಶಿರಸಿ ತಾಲೂಕಿನ 68 ವರ್ಷದ ವ್ಯಕ್ತಿಯೊಬ್ಬರು ಮಂಗನಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿದೆ. ಶಿರಸಿ ತಾಲೂಕಿನ ಹತ್ತರಗಿಯ ನವಿಲಗಾರ ಗ್ರಾಮದ 68 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಫೆ.22ರಂದು‌ … Continued

ಹೊನ್ನಾವರ: ಬಸ್ಸಿನಡಿ ಸಿಲುಕಿ ತಾಯಿ- ಮಗಳು ಸಾವು

ಹೊನ್ನಾವರ : ಮಂಗಳೂರಿನಿಂದ ಬೆಳಗಾವಿಗೆ ಹೋಗುತ್ತಿದ್ದ ಬಸ್ಸಿನಡಿ ಆಕ್ಟಿವಾ ಹೊಂಡಾ ಸಿಲುಕಿ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ-ಮಗಳು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿಯ ಗುಳದಕೇರಿ ಬಳಿ‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ. ಮೃತರನ್ನು ಮುರ್ಡೇಶ್ವರದ ಮಾವಳ್ಳಿಯ ನಾಡವರಕೇರಿ ನಿವಾಸಿ ಸವಿತಾ ರಾಜು ಆಚಾರಿ(40) ಮತ್ತು ಮಗಳು ಅಂಕಿತಾ(17) ಎಂದು ಗುರುತಿಸಲಾಗಿದೆ. … Continued

ರಾಜ್ಯಸಭೆ ಚುನಾವಣೆ | ನನಗೆ ಅನಾರೋಗ್ಯ ಇದ್ದ ಕಾರಣ ಮತದಾನ ಮಾಡ್ಲಿಕ್ಕೆ ಆಗ್ಲಿಲ್ಲ ; ಶಿವರಾಮ ಹೆಬ್ಬಾರ

ಯಲ್ಲಾಪುರ: ‘ಅನಾರೋಗ್ಯದ ಕಾರಣಕ್ಕೆ ರಾಜ್ಯಸಭೆ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಆಸ್ಪತ್ರೆಯಲ್ಲಿ‌ ಚಿಕಿತ್ಸೆಗೆಂದು ದಾಖಲಾಗಿದ್ದೆ, ಮತದಾನ ಮಾಡಲು ಆಗದೇ ಇರುವುದಕ್ಕೆ ನನಗೆ ಬೇಸರವಿದೆ. ಮಂಗಳವಾರ ಮುಂಜಾನೆ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದೆ. ಅವರು ಮಧ್ಯಾಹ್ನದ ಒಳಗೆ … Continued

ಮಂಗನ ಕಾಯಿಲೆಗೆ ಉತ್ತರ ಕನ್ನಡದಲ್ಲಿ ಮತ್ತೊಬ್ಬ ಮಹಿಳೆ ಸಾವು

ಕಾರವಾರ : ಮಂಗನ ಕಾಯಿಲೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡನೇ ಸಾವು ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊರ್ಲಕೈ ಗ್ರಾಮದ 60 ವರ್ಷದ ವೃದ್ಧೆ ಮಂಗನ ಕಾಯಿಲೆಯಿಂದ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. 20 ದಿನಗಳಿಂದ ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆಗೆ ಜ್ವರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿತ್ತು. ಜ್ವರ ತೀವ್ರವಾದ ಕಾರಣ ಮೂರು ದಿನಗಳ … Continued

ಸಿಎಂ ನಿಂದನೆ : ಅನಂತಕುಮಾರ​ ಹೆಗಡೆ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲು

ಕಾರವಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಮುಂಡಗೋಡ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಮುಂಡಗೋಡ ತಾಲೂಕಿನ ಪಾಳಾದಲ್ಲಿ ಶುಕ್ರವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಅನಂತಕುಮಾರ ಹೆಗಡೆ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು … Continued

ವೀಡಿಯೊ..| ಸ್ವರ್ಣವಲ್ಲೀ ಮಠದಲ್ಲಿ ಶಿಷ್ಯ ಸ್ವೀಕಾರ ಸಂಪನ್ನ; 55ನೇ ಯತಿಗಳಾಗಿ ಶ್ರೀ ಆನಂದ ಬೋಧೇಂದ್ರ ಸರಸ್ವತೀ ಸ್ವಾಮೀಜಿ ನಿಯೋಜನೆ

ಶಿರಸಿ: 1300 ವರ್ಷಗಳ ಇತಿಹಾಸವಿರುವ ಶಂಕರಾಚಾರ್ಯರ ಪರಂಪರೆಯ ಶ್ರೀ ಸೋಂದಾ ಸ್ವರ್ಣವಲ್ಲೀ‌ ಮಹಾ‌ಸಂಸ್ಥಾನಕ್ಕೆ (Swarnavalli Mutt) ಉತ್ತರಾಧಿಕಾರಿಗಳ ಸನ್ಯಾಸ ಸ್ವೀಕಾರ ಕಾರ್ಯಕ್ರಮ ಗುರುವಾರ ನಡೆಯಿತು. ಶ್ರೀಮಠಕ್ಕೆ 55ನೇ ಯತಿಗಳಾಗಿ‌ ವಿದ್ವಾನ್ ನಾಗರಾಜ್ ಭಟ್ಟ ಗಂಗೆಮನೆ ಅವರು ಗುರುವಾರ ಸನ್ಯಾಸ ಗ್ರಹಣ‌ ಮಾಡಿದರು. ನಂತರ ಅವರಿಗೆ ಸ್ವರ್ಣವಲ್ಲೀ ಮಹಾಸಂಸ್ಥಾನದ 55ನೇ ಯತಿಗಳಾಗಿ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ … Continued

ಉತ್ತರ ಕನ್ನಡದಲ್ಲಿ ಮಂಗನ ಕಾಯಿಲೆಗೆ ಮೊದಲ ಸಾವು

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಜಿಡ್ಡಿಯಲ್ಲಿ ಮಂಗನಕಾಯಿಲೆಗೆ ಮಹಿಳೆಯೊಬ್ಬರು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜಿಡ್ಡಿಯ 65 ವರ್ಷದ ಮಹಿಳೆಯ ಸ್ಥಿತಿ ಗಂಭೀರವಾಗಿತ್ತು. ಚಿಕಿತ್ಸೆ ಫಲಿಸದೇಾವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ಮಹಿಳೆಗೆ ಕೆಲದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಡಿಮೆಯಾಗಿ ಅವರನ್ನು ಕರೆದುಕೊಂಡು … Continued

ಶಿರಸಿ: ಶಂಕರ ಪರಂಪರೆಯ ಸ್ವರ್ಣವಲ್ಲೀ‌ ಮಠದಲ್ಲಿ ಗುರುವಾರ ʼಶಿಷ್ಯ ಸ್ವೀಕಾರʼ

ಶಿರಸಿ: ಸೋಂದಾ‌ ಸ್ವರ್ಣವಲ್ಲೀ‌ ಮಹಾ ಸಂಸ್ಥಾನದಲ್ಲಿ ಶ್ರೀ ಗಂಗಾಧರೇಂದ್ರ ಸರಸ್ವತೀ ‌ಮಹಾ‌ಸ್ವಾಮೀಜಿ ಅವರ ಉತ್ತರಾಧಿಕಾರಿ ಹಾಗೂ ಶಿಷ್ಯ ಸ್ವೀಕಾರ ಕಾರ್ಯಕ್ರಮ ಗುರುವಾರ ಫೆ.೨೨ರಂದು‌ ನಡೆಯಲಿದೆ. ಶಿಷ್ಯ ಸ್ವೀಕಾರ ಕಾರ್ಯಕ್ರಮ ಫೆ.೧೮ರಿಂದ ಆರಂಭವಾಗಿರುವ ವಿವಿಧ ಧಾರ್ಮಿಕ‌ ಕಾರ್ಯಕ್ರಮಗಳ‌‌ ಮೂಲಕ ನಡೆಯುತ್ತಿದ್ದು, ಗುರುವಾರ (ಫೆ.೨೨) ಯಲ್ಲಾಪುರದ ಈರಾಪುರದ ಗಂಗೆಮನೆಯ ಬ್ರಹ್ಮಚಾರಿ ನಾಗರಾಜ ಭಟ್ಟ ಅವರು ಸಂಸ್ಥಾನದ ೫೫ನೇ ಯತಿಗಳಾಗಿ … Continued