ಶಿರಸಿ: ಕಾಡುಬೆಕ್ಕು ಹಿಡಿಯಲು ವಿದ್ಯುತ್ ಕಂಬ ಏರಿದ ಚಿರತೆ, ವಿದ್ಯುತ್ ತಗುಲಿ ಎರಡೂ ಸಾವು

ಶಿರಸಿ: ಕಾಡು ಬೆಕ್ಕು ಹಿಡಿಯಲು ವಿದ್ಯುತ್‌ ಕಂಬ ಏರಿದ ಚಿರತೆಯೊಂದು ವಿದ್ಯುತ್ ತಂತಿ ತಗುಲಿ ಮೃತಪಟ್ಟ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿ ಸಮೀಪದ ಬೆಳಗಲ ಮನೆ ಬಳಿ ಶುಕ್ರವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಚಿರತೆ ಬೇಟೆಗೆಂದು ಅಟ್ಟಿಸಿಕೊಂಡು ಬಂದಾಗ ಜೀವ ಉಳಿಸಿಕೊಳ್ಳಲು ಕಾಡು ಬೆಕ್ಕು ವಿದ್ಯುತ್‌ ಕಂಬ ಏರಿ ಕುಳಿತಿತ್ತು. ತನ್ನ ಬೇಟೆ ಹಿಡಿಯುವ … Continued

ಕುಮಟಾ: ಮಹಿಳೆ ಸಮುದ್ರಕ್ಕೆ ಹಾರಿದ್ದ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ; ಮಹಿಳೆ ಪತ್ತೆ ಹಚ್ಚಿದ ಪೊಲೀಸರು, ಸಾವಿನ ನಾಟಕವಾಡಿದ್ದು ಬಯಲಾಯ್ತು…!

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಸಾಂತಗಲ್ ಗ್ರಾಮದ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳಲು ಕುಮಟಾದ ಹೆಡ್‌ಬಂದರಿನಲ್ಲಿ ಸಮುದ್ರಕ್ಕೆ ಹಾರಿದ್ದಳು ಎಂಬ ಪ್ರಕರಣಕ್ಕೆ ಈಗ ದೊಡ್ಡ ಟ್ವಿಸ್ಟ್‌ ಸಿಕ್ಕಿದೆ. ತನ್ನ ಎರಡು ಮಕ್ಕಳನ್ನ ನಡು ರಸ್ತೆಯಲ್ಲಿ ಬಿಟ್ಟು ಸಮುದ್ರದಲ್ಲಿ ಮುಳುಗಿದ ನಾಟಕವಾಡಿದ್ದ ಸಾಂತಗಲ್ ಗ್ರಾಮದ ನಿವೇದಿತಾ ಭಂಡಾರಿ ಹೊನ್ನಾವರದ ಬಾಡಿಗೆ ಮನೆಯಲ್ಲಿರುವಾಗ ಪೊಲೀಸರ ಕೈಗೆ ಸಿಕ್ಕಿ … Continued

ಯಲ್ಲಾಪುರ ಬಳಿ ಬಸ್‌ ಪಲ್ಟಿ; ಚಾಲಕ ಸಾವು, 25 ಪ್ರಯಾಣಿಕರಿಗೆ ಗಾಯ

ಯಲ್ಲಾಪುರ : ರಾಷ್ಟ್ರೀಯ ಹೆದ್ದಾರಿ 63ರ ಹುಬ್ಬಳ್ಳಿ ರಸ್ತೆ ಮಿಲನ್ ಹೋಟೆಲ್ ಬಳಿ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆ ಪಕ್ಕದಲ್ಲಿ ಉರುಳಿದ ಪರಿಣಾಮ ಚಾಲಕ ಸಾವಿಗೀಡಾಗಿ, 25 ಪ್ರಯಾಣಿಕರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ಸಂಭವಿಸಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಖಾಸಗಿ ಬಸ್ … Continued

ಕಾರವಾರ : ಬೈತ್‌ಕೋಲದಲ್ಲಿ ಗುಡ್ಡ ಕುಸಿತ, ಮನೆಗಳಿಗೆ ನುಗ್ಗಿದ ನೀರು | ವೀಡಿಯೊ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಭಾರೀ ಮಳೆ ಪರಿಣಾಮ ಕಾರವಾರದ ಬೈತ್‌ಕೋಲದಲ್ಲಿ ಗುಡ್ಡ ಕುಸಿದು ಮನೆಗಳಿಗೆ ಮಳೆ (Rain) ನೀರು ನುಗ್ಗಿದೆ. ಗುಡ್ಡದ ಮೇಲಿಂದ ಹರಿದು ಬರುತ್ತಿರುವ ಮಳೆ ನೀರು ಮನೆಗಳಿಗೆ ನುಗ್ಗಿದೆ. ಗುಡ್ಡ ಕೊರೆದು ನೌಕಾಪಡೆ ರಸ್ತೆ ನಿರ್ಮಿಸುತ್ತಿದ್ದುದರಿಂದ ಹೀಗಾಗಿದೆ ಎನ್ನಲಾಗಿದೆ. ಗುಡ್ಡ ಕುಸಿದು ಮಣ್ಣುಗಳು ರಸ್ತೆಮೇಲೆ ಬಿದ್ದಿದೆ. … Continued

ಹಳಿಯಾಳ: ಹೆಂಡತಿ ಕೊಂದು ಬ್ಯಾರಲ್‌ನಲ್ಲಿ ಮುಚ್ಚಿಟ್ಟಿದ್ದ ಪತಿರಾಯ…!

ಹಳಿಯಾಳ: ಹೆಂಡತಿಯನ್ನ ಕೊಲೆ ಮಾಡಿ ನೀರಿನ ಖಾಲಿ ಬ್ಯಾರಲ್‌ನಲ್ಲಿ ಬಚ್ಚಿಟ್ಟಿದ್ದ ಗಂಡನನ್ನ ಹಳಿಯಾಳ ಹಾಗೂ ರಾಮನಗರ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ತೆರಗಾಂವ ಗ್ರಾಮದ ತುಕಾರಾಮ ಮಡಿವಾಳ ತನ್ನ ಹೆಂಡತಿ ಶಾಂತಕುಮಾರಿ ಮಡಿವಾಳ (38) ಎಂಬವರನ್ನು ಕತ್ತುಹಿಸುಕಿ ಕೊಂದಿದ್ದಾನೆ. ಬೇರೆ ಹೆಣ್ಣು ಮಕ್ಕಳೊಂದಿಗೆ ಮಾತನಾಡುತ್ತಾನೆಂದು ಶಾಂತಕುಮಾರಿ … Continued

ಭಟ್ಕಳ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಬಳಿ ಇಂದು, ಶುಕ್ರವಾರ (ಫೆ.24) ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಭಟ್ಕಳ:ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಭಟ್ಕಳ ತಾಲೂಕಿನ ಹಾಡುವಳ್ಳಿಯ ಓಣಿಬಾಗಿಲು ಎನ್ನುವ ಗ್ರಾಮದಲ್ಲಿ ಬರ್ಬರ ಹತ್ಯೆ ನಡೆದ ಘಟನೆ ಶುಕ್ರವಾರ ನಡೆದಿದೆ. ನಾಲ್ವರನ್ನು ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಹತ್ಯೆ ಮಾಡಲಾಗಿದೆ. ತಾಲೂಕಿನ ಹಾಡುವಳ್ಳಿ … Continued

ಶಿರಸಿಯಲ್ಲಿ ಕರ್ನಾಟಕದ ಮೊದಲ ಪರಿಸರ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಬೊಮ್ಮಾಯಿ ಘೋಷಣೆ

ಶಿರಸಿ: ಕರ್ನಾಟಕದ ಮೊದಲ ಪರಿಸರ ವಿಶ್ವವಿದ್ಯಾಲಯವನ್ನು ಶಿರಸಿಯಲ್ಲಿ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಶಿರಸಿಗೆ ಭಾನುವಾರ ಭೇಟಿ ನೀಡಿದ ವೇಳೆ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ಬಜೆಟ್‌ನಲ್ಲಿ ಇದಕ್ಕಾಗಿ ಅನುದಾನ ಮೀಸಲಿಡಲಾಗುವುದು. ಈಗಾಗಲೇ ತೋಟಗಾರಿಕೆ, ಅರಣ್ಯ ಕಾಲೇಜು ಶಿರಸಿಯಲ್ಲಿದೆ. ಇವುಗಳನ್ನು ವಿಲೀನಗೊಳಿಸಿ … Continued

ಪರೇಶ ಮೇಸ್ತ ಸಾವು ಪ್ರಕರಣ: ಆಕ್ಷೇಪಣೆ ಸಲ್ಲಿಸುವುದಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ

ಹೊನ್ನಾವರ: ಪರೇಶ ಮೇಸ್ತ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (CBI) ಹೊನ್ನಾವರ ನ್ಯಾಯಾಲಯಕ್ಕೆ ಸಲ್ಲಿಸಿರುವ ʼಬಿʼ ರಿಪೋರ್ಟ್‌ಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿ ಪರೇಶ ಮೇಸ್ತಾ ತಂದೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಪರೇಶ್ ಮೇಸ್ತ ಸಾವಿನ ಪ್ರಕರಣದಲ್ಲಿ ಸಿಬಿಐ ತನಿಖಾ ತಂಡವು ಅಕ್ಟೋಬರ್ 6ರಂದು ಹೊನ್ನಾವರದ ನ್ಯಾಯಾಲಯಕ್ಕೆ ʼಬಿ‌ʼ ರಿಪೋರ್ಟ್ … Continued

ಗೋಕರ್ಣ: ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಪ್ರವಾಸಿಗ ಸಾವು

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣಕ್ಕೆ (Gokarna)ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿಯೊಬ್ಬರು ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಗೋಕರ್ಣದ ಮುಖ್ಯ ಕಡಲತೀರದ ರುದ್ರಪಾದ ಬಳಿ ಈ ದುರಂತ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಬೆಂಗಳೂರಿನಿಂದ ನಾಲ್ವರು ಸ್ನೇಹಿತರೊಂದಿಗೆ ಗೋಕರ್ಣ ಪ್ರವಾಸಕ್ಕೆ ಬಂದಿದ್ದರು. ಸಮುದ್ರದಲ್ಲಿ ಈಜಲು … Continued

ಯಲ್ಲಾಪುರ ಅರೆಬೈಲ್‌ ಘಟ್ಟದಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಅಡ್ಡಗಟ್ಟಿ 2 ಕೋಟಿ ರೂ.ಗಳಿಗೂ ಹೆಚ್ಚು ಹಣ ದರೋಡೆ ..!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಸ್ವಿಫ್ಟ್ ಕಾರು ಸಮೇತ ಕಾರಿನಲ್ಲಿದ್ದ ಕೋಟ್ಯಾಂತರ ರೂ ಹಣವನ್ನು ದರೋಡೆ ಮಾಡಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಡ್ಡಗಟ್ಟಿ 2 ಕೋಟಿ ರೂ.ಗಳಿಗೂ ಹೆಚ್ಚು ಹಣ ದೋಚಿಕೊಂಡು ಹೋಗಿದ್ದಾರೆ ಎಂದು ಹೇಳಲಾಗಿದೆ. ಅಕ್ಟೋಬರ್ 1ರ ಶನಿವಾರ ರಾತ್ರಿ ಘಟ್ಟದ ನಿರ್ಜನ ಪ್ರದೇಶದಲ್ಲಿ ಈ ಘಟನೆ … Continued