ವೀಡಿಯೊ…| ಕಾರವಾರ: ಕೊಡಸಳ್ಳಿ ಡ್ಯಾಂ ರಸ್ತೆಯಲ್ಲಿ ಗುಡ್ಡ ಕುಸಿತ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಕಾರವಾರ (Karwar) ತಾಲೂಕಿನ ಕದ್ರಾ ಬಳಿಯ ಬಾಳೆಮನೆ ಗ್ರಾಮದ ಬಳಿ ದೊಡ್ಡ ಪ್ರಮಾಣದ ಭೂ ಕುಸಿತವಾಗಿದೆ. ಕಾರವಾರ ತಾಲೂಕಿನ ಕದ್ರಾದಿಂದ ಬಾಳೆಮನಿ, ಸುಳಗೇರಿ ಮಾರ್ಗವಾಗಿ ಕೂಡಸಳ್ಳಿ ಅಣೆಕಟ್ಟಿಗೆ ಹಾದುಹೋಗುವ ರಸ್ತೆಯ ಮೇಲೆಯೇ ಭಾರಿ ಪ್ರಮಾನದಲ್ಲಿ ಗುಡ್ಡ ಕುಸಿತವಾಗಿದೆ. ಹೀಗಾಗಿ ಕದ್ರಾ ಭಾಗದ ಬಾಳೆಮನೆ, ಸುಳಗೇರಿ … Continued

ಕಾರ್ಮಿಕರನ್ನು ಒಯ್ಯುತ್ತಿದ್ದ ವಾಹನದ ಮೇಲೆ ಬಿದ್ದ ವಿದ್ಯುತ್‌ ಕಂಬ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹಾಗೂ ಮುಂಡಗೋಡ ತಾಲೂಕುಗಳಿಗೆ ಹೊಂದಿಕೊಂಡಿರುವ ಗಡಿ ಭಾಗದ ಬೆಡಸಗಾಂವನಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನದ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಯಾವುದೇ ಅಪಾಯ ಸಂಭವಿಸಿದ ವರದಿಯಾಗಿಲ್ಲ. ರಾಮಾಪುರದಿಂದ ಹುಲೆಕಲ್‌ಗೆ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರನ್ನು ಒಯ್ಯುತ್ತಿದ್ದ ವಾಹನದ ಮೇಲೆ ವಿದ್ಯುತ್‌ ಕಂಬ ಮುರಿದು … Continued

ಯಲ್ಲಾಪುರ | ಅರೆಬೈಲ್‌ ಘಟ್ಟದ ಪ್ರಪಾತದ ಬಳಿ ಖಾಸಗಿ ಬಸ್ ಪಲ್ಟಿ

ಯಲ್ಲಾಪುರ : ಪ್ರಪಾತದ ಬಳಿ ಖಾಸಗಿ ಬಸ್ಸೊಂದು ಲಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ ಘಟ್ಟದಲ್ಲಿ ಬುಧವಾರ  ಬೆಳಿಗ್ಗೆ  ನಡೆದಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್‌ ಬಸ್ಸಿನಲ್ಲಿದ್ದ 25 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಲಾರಿಗೆ ಡಿಕ್ಕಿಯಾಗಿ ಅಪಘಾತಕ್ಕೀಡಾಗಿದೆ. … Continued

ಶಿರಸಿ | ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ: ಶಿರಸಿ- ಕುಮಟಾ ರಸ್ತೆ ಸಂಪರ್ಕ ಕಡಿತ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ- ಕುಮಟಾ ಸಂಪರ್ಕ ರಸ್ತೆಯ ದೇವಿಮನೆ ಘಟ್ಟ ಪ್ರದೇಶದಲ್ಲಿ ಇಂದು (ಭಾನುವಾರ) ನಸುಕಿನಲ್ಲಿ ಭೂಕುಸಿತ ಉಂಟಾಗಿದೆ ಎಂದು ವರದಿಯಾಗಿದೆ. ಶಿರಸಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 766 (ಇ) ರ ದೇವಿಮನೆ ಘಟದಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ಹೆದ್ದಾರಿ ಮೇಲೆ ಕಲ್ಲು, ಮರಗಳು ಬಂದು … Continued

ಭಾರಿ ಮಳೆ ; ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ಇಂದು (ಜೂನ್ 13) ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ, ಅದರಲ್ಲಿಯೂ ವಿಶೇಷವಾಗಿ ಕರಾವಳಿ ತಾಲೂಕುಗಳಲ್ಲಿ ಶುಕ್ರವಾರ (ಜೂನ್ 13) ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ (ಜೂನ್ 13) ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ … Continued

ಅಂಕೋಲಾ | ವಿದ್ಯುತ್ ತಂತಿ ತಗುಲಿ ಯುವಕ ಸಾವು

ಅಂಕೋಲಾ: ನಡೆದುಕೊಂಡು ಹೋಗುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ (Electric Shock)‌ ಯುವಕನೊಬ್ಬ ಸಾವಿಗೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾದ ದಂಡೆಭಾಗದಲ್ಲಿ ನಡೆದಿದೆ ಎಂದು ವರದಿಯಾಗಿದೆ. ತಾಲೂಕಿನ ಅವರ್ಸಾ ದಂಡೇಬಾಗ ಬೇಟೆನಾಸ ದೇವಾಲಯದ ಸಮೀಪದ ನಿವಾಸಿ ಮಹಾಂತೇಶ ದೇವೇಂದ್ರ ಬಾನಾವಳಿಕರ(25) ಮೃತ ಯುವಕ ಎಂದು ಗುರುತಿಸಲಾಗಿದೆ. ಗುರುವಾರ ಅವರ್ಸಾದ … Continued

ಭಾರಿ ಮಳೆ ಮುನ್ನೆಚ್ಚರಿಕೆ : ಉತ್ತರ ಕನ್ನಡ ಜಿಲ್ಲೆ ಅಂಗನಾಡಿಗಳಿಗೆ ಮೇ 21 ರಂದು ರಜೆ ಘೋಷಣೆ

ಕಾರವಾರ: ಹವಾಮಾನ ಇಲಾಖೆಯು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಬೀಳುವ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಜಿಲ್ಲೆಯಾದ್ಯಂತ ಇರುವ ಎಲ್ಲ ಅಂಗನವಾಡಿಗಳಿಗೆ ಮೇ 21 ರಂದು ಬುಧವಾರ ರಜೆ ಘೋಷಣೆ ಮಾಡಿದ್ದಾರೆ. ಭಾರತೀಯ ಹವಾಮಾನ ಇಲಾಖೆಯಿ ಮೇ 22ರ ಬೆಳಿಗ್ಗೆ 8:30 ವರೆಗೂ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸದ್ಯ ಕಿರಿಯ … Continued

ಭಟ್ಕಳ | ಆಸ್ತಿಗಾಗಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ; ಮಗನಿಗೆ ಗಲ್ಲು ಶಿಕ್ಷೆ, ಅಪ್ಪನಿಗೆ ಜೀವಾವಧಿ ಶಿಕ್ಷೆ ಪ್ರಕಟ

ಕಾರವಾರ: ಉತ್ತರ ಜಿಲ್ಲೆಯ ಭಟ್ಕಳ ತಾಲೂನಿಲ್ಲಿ ನಡೆದ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಯೊಬ್ಬನಿಗೆ ಮರಣ ದಂಡನೆ, ಇನ್ನೊಬ್ಬ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ಭಟ್ಕಳ ತಾಲೂಕಿನ ಹಾಡವಳ್ಳಿಯ ಗ್ರಾಮದ ವಿನಯ ಶ್ರೀಧರ ಭಟ್ಟನಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಆತನ ತಂದೆ ಶ್ರೀಧರ ಭಟ್ಟನಿಗೆ … Continued

ಎಸ್‌ ಎಸ್‌ ಎಲ್‌ ಸಿ ; ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಪ್ರೌಢಶಾಲೆ ಶೇ.100 ಫಲಿತಾಂಶ; ಟಾಪ್‌ 10 ರ‍್ಯಾಂಕ್‌ ಪಟ್ಟಿಯಲ್ಲಿ 18 ವಿದ್ಯಾರ್ಥಿಗಳು

 ಕುಮಟಾ : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಿ.ವಿ.ಎಸ್.ಕೆ ಪ್ರೌಢಶಾಲಾ ವಿದ್ಯಾರ್ಥಿಗಳು ಅನುಪಮ ಸಾಧನೆ ತೋರಿದ್ದಾರೆ. ಶಾಲೆ ಶೇಕಡಾ ನೂರರ ಫಲಿತಾಂಶ ಪಡೆದಿದ್ದು, ರಾಜ್ಯದ ಟಾಪ್ 10 ರ‍್ಯಾಂಕ್‌ ನಲ್ಲಿ ಶಾಲೆಯ 18 ವಿದ್ಯಾರ್ಥಿಗಳು ಗುರುತಿಸಿಕೊಳ್ಳುವ ಮೂಲಕ ಶಾಲೆಯ ಹಾಗೂ … Continued

ಕುಮಟಾ | ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದನ್ನು ಖಂಡಿಸಿ ಪ್ರತಿಭಟನೆ ; ಇದು ಷಡ್ಯಂತ್ರ-ದಿನಕರ ಶೆಟ್ಟಿ

ಕುಮಟಾ : ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿ ಅವಮಾನ ಮಾಡಿದ್ದನ್ನು ಖಂಡಿಸಿ ಉತ್ತರ ಕನ್ನಡದ ಕುಮಟಾದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು. ನಂತರ ತಪ್ಪಿತಸ್ಥರನ್ನು ತಕ್ಷಣವೇ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಮಿನಿ ವಿಧಾನಸೌಧಕ್ಕೆ ತೆರಳಿ ತಹಶೀಲ್ದಾರರ ಮೂಲಕ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕುಮಟಾ ಶಾಸಕ ದಿನಕರ ಶೆಟ್ಟಿ ಾವರು, … Continued