ಭಟ್ಕಳ: ವೆಂಕಟಾಪುರ ಹೊಳೆಯಲ್ಲಿ ಮೊಸಳೆ ಪ್ರತ್ಯಕ್ಷ, ಆತಂಕ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ವೆಂಕಟಾಪುರ ಹೊಳೆಯ ನೀರಕಂಠದ ಸಮೀಪದಲ್ಲಿ ಹೊಳೆ ನಡುವೆ ದಿಬ್ಬದಲ್ಲಿ ಮೊಸಳೆಯೊಂದು ಕಾಣಿಸಿಕೊಂಡಿದ್ದು ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ. ವೆಂಕಟಾಪುರ ನದಿಯ ಈ ಪ್ರದೇಶದಲ್ಲಿ ಇದು ಮೊದಲ ಬಾರಿಗೆ ಕಾಣಿಸಿಕೊಂಡಿದೆ. ಶುಕ್ರವಾರ ಸಂಜೆಯ ಸಮಯ ಮರಳು ದಿಬ್ಬದ ಮೇಲೆ ಮಲಗಿದ್ದ ಮೊಸಳೆಯನ್ನು ಕಂಡಿದ್ದ ಸ್ಥಳೀಯರು ಪೋಟೋ ಕ್ಲಿಕ್ಕಿಸಿದ್ದು, ಶನಿವಾರ ಮಧ್ಯಾಹ್ನದ … Continued

ಕಾರವಾರ: ಕದ್ರಾ ನೆರೆ ಪೀಡಿತ ಪ್ರದೇಶಕ್ಕೆ ಸಿದ್ದರಾಮಯ್ಯ ಭೇಟಿ

ಕಾರವಾರ:ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾರವಾರ ತಾಲೂಕಿನ ಕದ್ರಾದ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸಿದರು. ಕದ್ರಾ ಜಲಾಶಯದಿಂದ ಸತತ ನೀರು ಬಿಟ್ಟು ಹಾನಿಯಾಗಿರುವ ಸ್ಥಳಗಳಿಗೆ ತೆರಳಿ, ಜನರ ಆಸ್ತಿ-ಪಾಸ್ತಿ, ಮನೆ ಹಾನಿಯಾಗಿರುವುದನ್ನು ಪರಿಶೀಲನೆ ನಡೆಸಿದರು. ಸ್ಥಳದಲ್ಲಿದ್ದ ಜನರು ಕದ್ರಾ ಜಲಾಶಯದಿಂದ ಸತತವಾಗಿ ನೀರು ಬಿಟ್ಟಿರುವುದರಿಂದ ತೀವ್ರ ತೊಂದರೆ ಆಗಿದೆ. … Continued

ಭಟ್ಕಳ: ಸಮುದ್ರದ ಅಲೆಗಳ ಅಬ್ಬರಕ್ಕೆ ಮಗುಚಿದ ದೋಣಿಗಳು, 10ಕ್ಕೂ ಹೆಚ್ಚು ಮೀನುಗಾರರ ರಕ್ಷಣೆ

ಕಾರವಾರ: ಅರಬ್ಬಿ ಸಮುದ್ರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದಾಗ ಅಲೆಯ ರಭಸಕ್ಕೆ ಸಿಲುಕಿದ್ದ 10ಕ್ಕೂ ಹೆಚ್ಚು ಮೀನುಗಾರರನ್ನು ಭಟ್ಕಳ ಬಂದರು ಸಮೀಪದ ಅಳಿವೆ ಪ್ರದೇಶದಲ್ಲಿ ರಕ್ಷಿಸಲಾಗಿದೆ. ಅಬ್ಬರದ ಮಳೆಯಿಂದಾಗಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಲು ನಿರ್ಬಂಧವಿದ್ದರೂ, ಮೀನುಗಾರರು ಪಾತಿದೋಣಿ ಮೂಲಕ ಮೀನುಗಾರಿಕೆಗೆ ತೆರಳಿದ್ದರು ಎನ್ನಲಾಗಿದೆ. ಅರಬ್ಬೀ ಸಮುದ್ರದಲ್ಲಿ ಬಾರೀ ಗಾಳಿ ಸಹಿತ ಅಬ್ಬರದ ಮಳೆಯಾಗಿದ್ದರಿಂದ ಮೀನುಗಾರರು ಅಲೆಯ ರಭಸಕ್ಕೆ … Continued