4 ಲಕ್ಷ ರೂ.ಮೌಲ್ಯದ ಬಂಗಾರದ ಸರ, ಮೊಬೈಲ್‌ ಕಳೆದುಕೊಂಡ ಅಂಗನವಾಡಿ ಶಿಕ್ಷಕಿ: ತಕ್ಷಣವೇ ಕಾರ್ಯಪ್ರವೃತ್ತರಾಗಿ ಪತ್ತೆ ಮಾಡಿ ಮರಳಿಸಿದ ಪೊಲೀಸರು

ಸಿದ್ದಾಪುರ: ಅಂಗನವಾಡಿ ಶಿಕ್ಷಕಿಯೊಬ್ಬರು ಶಾಲೆಗೆ ಹೋಗುವಾಗ ಸುಮಾರು 4 ಲಕ್ಷ ರೂ. ಮೌಲ್ಯದ ಬಂಗಾರದ ಸರ ಹಾಗೂ ಮೊಬೈಲ್‌ ಕಳೆದುಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಲೂಕಿನಲ್ಲಿ ನಡೆದಿತ್ತು. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ ತಕ್ಷಣವೇ ಕಾರ್ಯಪ್ರವೃತ್ತರಾದ ಸಿದ್ದಾಪುರ ಪೊಲೀಸರು ಸೊರಬಾ ಬಳಿ ಪತ್ತೆ ಹಚ್ಚಿ ಅವುಗಳನ್ನು ವಾರಸುದಾರರಿಗೆ ಮರಳಿಸಿ ಸಾರ್ವಜನಿಕ ಪ್ರಶಂಸೆಗೆ … Continued

ಅಂಕೋಲಾ: ವಿಷ ಸೇವಿಸಿ ಯುವಕ ಆತ್ಮಹತ್ಯೆ

ಅಂಕೋಲಾ: ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಾರವಾಡದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಹಾರವಾಡ ತರಂಗಮೇಟ ನಿವಾಸಿ ಅಜಯ ಕುಲಮಣಿ ಫಂಡಾ(26) ಮೃತ ಯುವಕನಾಗಿದ್ದು ಈತ ಮಲ್ಪೆಯಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಹಾಗೂ ಹಾರವಾಡದ ದುರ್ಗಾದೇವಿ ಜಾತ್ರೆ ಪ್ರಯುಕ್ತ ಒಂದು ವಾರದ ಹಿಂದೆ ಊರಿಗೆ ಆಗಮಿಸಿದ್ದ. ಈತ … Continued

ಅಂಕೋಲಾ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಅಂಕೋಲಾ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಕೀಟನಾಶ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೆಳಂಬಾರದ ತಾಳೇಬೈಲಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತ ವಿದ್ಯಾರ್ಥಿನಿಯನ್ನು ತಾಳೇಬೈಲ್ ನಿವಾಸಿ ಶಿಲ್ಪಾ ಆರ್. ಗೌಡ (17) ಎಂದು ಗುರುತಿಸಲಾಗಿದೆ. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ವರ್ಷದ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದ ಈಕೆ ಈಗ ನಡೆಯುತ್ತಿರುವ … Continued

ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ: ಜಾಗ ಮಂಜೂರು ಮಾಡಿ ಸರ್ಕಾರದ ಆದೇಶ-ಬಹುದಿನದ ಬೇಡಿಕೆಗೆ ಮನ್ನಣೆ

ಕುಮಟಾ ; ಉತ್ತರ ಕನ್ನಡ ಜಿಲ್ಲೆಯ ಜನರ ಬಹುದಿನದ ಬೇಡಿಕೆಗೆ ಸರ್ಕಾರದ ಮನ್ನಣೆ ಸಿಕ್ಕಿದೆ. ಜಿಲ್ಲೆಯಲ್ಲಿ ನಿರ್ಮಾಣವಾಗಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಜಾಗ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಗಾಗಿ ಮೀಸಲಿಟ್ಟಿದ್ದ ಸರ್ವೆ ನಂಬರ್ 440 ಅ/ಬದ 15.35 ಎಕರೆ ಜಾಗವನ್ನು ಸೂಪರ್ ಸ್ಪೆಷಾಲಿಟಿ … Continued

ಮುಂಡಗೋಡ : ಶಿಬಿರದ ಮೇಲೆ ಹೆಜ್ಜೇನು ದಾಳಿ, 50ಕ್ಕೂ ಹೆಚ್ಚು ಜನರಿಗೆ ಗಾಯ

ಕಾರವಾರ : ಹೆಜ್ಜೇನು ದಾಳಿಗೆ ಐವತ್ತಕ್ಕೂ ಹೆಚ್ಚು ಶಿಬಿರಾರ್ಥಿಗಳು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಮುಂಡಗೋಡಿನಲ್ಲಿ ಟಿಬೆಟಿಯನ್‌ ಕ್ಯಾಂಪ್‌ ಬಳಿ ನಡೆದಿದೆ. ಟಿಬೇಟಿಯನ್ ಕ್ಯಾಂಪ್‌ನ ಶಿಬಿರಕ್ಕೆ ಬಂದ ದಲಿತ ಸಂಘರ್ಷ ಸಮಿತಿಯ ರಾಜ್ಯ ಮಟ್ಟದ ಪದಾಧಿಕಾರಿಗಳು ಗಾಯಗೊಂಡಿದ್ದಾರೆ. ಟಿಬೇಟಿಯನ್ ಕ್ಯಾಂಪ್‌ನಲ್ಲಿ ದಲಿತ ಸಂಘರ್ಷ ಸಮಿತಿಯು ಮಾರ್ಚ್‌ 3 ಹಾಗೂ 4ರಂದು ಎರಡು ದಿನಗಳ ಶಿಬಿರ … Continued

ಕುಮಟಾ : ಎರಡು ಎಕರೆ ವಿಸ್ತಾರದ ಗುಜರಿ ಅಂಗಡಿಯಲ್ಲಿ ಬೆಂಕಿ ಅವಘಡ: ಮುಗಿಲೆತ್ತರಕ್ಕೆ ವ್ಯಾಪಿಸಿದ ಬೆಂಕಿ ಕೆನ್ನಾಲಿಗೆ | ವೀಕ್ಷಿಸಿ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಮೀಪದ ಅಳ್ವೇಕೊಡಿಯ ಗುಜರಿ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಎಕರೆಯಷ್ಟು ಪ್ರದೇಶದಲ್ಲಿ ಬೆಂಕಿ ಜ್ವಾಲೆ ಆವರಿಸಿಕೊಂಡು ಆತಂಕ ಸೃಷ್ಟಿಸಿದೆ. ಅಳ್ವೆಕೋಡಿಯಲ್ಲಿರುವ ಬಾಷಾ ಶೇಖ್ ಎಂಬುವವರ ಮಾಲೀಕತ್ವದ ಗುಜರಿ ಅಂಗಡಿಯೊಳಕ್ಕೆ ಬೆಂಕಿ ತಗಲಿ ಗುಜರಿ ಸಾಮಗ್ರಿಗಳು ಸುಟ್ಟುಹೋಗಿವೆ.. ಎರಡು ಎಕರೆಯಷ್ಟು ಪ್ರದೇಶದಲ್ಲಿ ಗುಜರಿ ಸಾಮಗ್ರಿಗಳು ಸಂಗ್ರಹಿಸಿಡಲಾಗಿದ್ದರಿಂದ ಈ … Continued

ಕುಮಟಾ: ಬೆಟ್ಕುಳಿ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವು | ವೀಕ್ಷಿಸಿ

ಕುಮಟಾ : ಅಪರಿಚಿತ ವಾಹನ ಬಡಿದು ಚಿರತೆಯೊಂದು ಮೃತ ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೀರೆಗುತ್ತಿ ವಲಯ ಅರಣ್ಯ ವ್ಯಾಪ್ತಿಯ ಬೆಟ್ಕುಳಿ ಬಳಿ ಸಂಭವಿಸಿದೆ. ಶುಕ್ರವಾರ ಬೆಳಿಗ್ಗಿನ ಜಾವ ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ಚಿರತೆಯ ಮೃತ ದೇಹ ಕಂಡು ಬಂದಿದ್ದು ಅದನ್ನು ನೋಡಿದ ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆಗೆ … Continued

ಯಲ್ಲಾಪುರ: ಪಿಕ್ನಿಕ್‌ಗೆ ಹೋಗಿದ್ದ ವಿದ್ಯಾರ್ಥಿ ಗಂಗಾವಳಿ ನದಿಯಲ್ಲಿ ಮುಳುಗಿ ಸಾವು

ಯಲ್ಲಾಪುರ: ಶಾಲೆಯ ವತಿಯಿಂದ ಪಿಕ್ನಿಕ್‌ಗೆ ಹೋದ ಸಂದರ್ಭದಲ್ಲಿ ವಿದ್ಯಾರ್ಥಿಯೊಬ್ಬ ಗಂಗಾವಳಿ ನದಿಯಲ್ಲಿ ಮುಳುಗಿ ಹೋಗಿ ಸಾವು ಕಂಡ ಧಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಗುಳ್ಳಾಪುರ ಸರ್ಕಾರಿ ಪ್ರೌಢಶಾಲೆಯ ಪ್ರಕಾಶ ವಿಠ್ಠು ಪಟಕಾರೆ (೧೬) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಗುಳ್ಳಾಪುರ ಸರ್ಕಾರಿ ಪ್ರೌಢಶಾಲೆಯ ಮಕ್ಕಳು … Continued

ಸಿದ್ದಾಪುರ: ʼಕ್ಷೀರಭಾಗ್ಯ’ದ ಹಾಲು ಕುಡಿದು ಶಾಲಾ ಮಕ್ಕಳು ಅಸ್ವಸ್ಥ-ಆಸ್ಪತ್ರೆಗೆ ದಾಖಲು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕ್ಯಾದಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಕ್ಷೀರಭಾಗ್ಯ ಯೋಜನೆಯ ಹಾಲು ಕುಡಿದ ಕೆಲ ಮಕ್ಕಳು ಅಸ್ವಸ್ಥಗೊಂಡ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಿದ ವಿದ್ಯಮಾನ ವರದಿಯಾಗಿದೆ. ಸಿದ್ದಾಪುರ ತಾಲೂಕಿನ ಕ್ಯಾದಗಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಬೆಳಿಗ್ಗೆ 10:30ಕ್ಕೆ ಎಂದಿನಂತೆ ಕ್ಷೀರಭಾಗ್ಯ ಯೋಜನೆ ಅಡಿ ಮಕ್ಕಳು ಹಾಲನ್ನು ಸೇವಿಸಿದ್ದಾರೆ. … Continued

ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದ ಮಾಜಿ ಶಾಸಕ ವಿ.ಎಸ್‌. ಪಾಟೀಲ, ಮುಖಂಡ ಶ್ರೀನಿವಾಸ ಭಟ್‌ ದಾತ್ರಿ

ಬೆಂಗಳೂರು: ಇಂದು ಗುರುವಾರ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಶಾಸಕ ವಿ.ಎಸ್.ಪಾಟೀಲ ಹಾಗೂ ಬಿಜೆಪಿ ಜಿಲ್ಲಾ ಕೈಗಾರಿಕಾ ಪ್ರಕೋಷ್ಠದ ಪ್ರಮುಖ ಶ್ರೀನಿವಾಸ ಭಟ್‌ ದಾತ್ರಿ ಶ್ರೀನಿವಾಸ ಭಟ್‌ ದಾತ್ರಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲಿಂ … Continued