ಭಾರತದ ಎಲ್ಲ ರಾಜ್ಯಗಳು, ಅನೇಕ ದೇಶಗಳನ್ನು ಹೆಸರನ್ನು ಭೂಪಟ-ಧ್ವಜ ನೋಡಿಯೇ ಹೇಳುವ 18 ತಿಂಗಳ ಪುಟ್ಟಪೋರ ಅನಿಕೇತ ಭಟ್‌…!

ಕಾರವಾರ: ಈತನ ವಯಸ್ಸು ಕೇವಲ 18 ತಿಂಗಳು ಅಂದರೆ ಒಂದೂವರೆ ವರ್ಷ ಮಾತ್ರ, ಇನ್ನೂ ಸರಿಯಾಗಿ ಹಲ್ಲು ಬಂದಿಲ್ಲವೇನೋ. ಆದರೆ ಈ ಪುಟ್ಟ ಹುಡುಗನಿಗೆ ಇರುವ ಜ್ಞಾನ ಮಾತ್ರ ಆತನ ವಯಸ್ಸಿಗೆ ಮೀರಿದ್ದು. ಈತ ತನ್ನ ಬುದ್ಧಿಶಕ್ತಿ ಕಾರಣಕ್ಕೇ ಈಗ ಎಲ್ಲರ ಗಮನ ಸೆಳೆಯುತ್ತಿದ್ದಾನೆ. ಒಂದೂವರೆ ವರ್ಷದ ಅನಿಕೇತನಿಗೆ ಭಾರತದ ಭೂಪಟ ತೋರಿಸಿದರೆ ದೇಶದ ಎಲ್ಲ … Continued

ಕುಮಟಾ: ಮಿರ್ಜಾನ್‌ ಬಳಿ ಅಪರೂಪದ ಬಿಳಿ ಹೆಬ್ಬಾವು ಪತ್ತೆ….!

ಕುಮಟಾ: ಉತ್ತರ ಕನ್ನಡಜಿಲ್ಲೆಯ ಕುಮಟಾ ತಾಲೂಕಿನ ಮಿರ್ಜಾನ ಗ್ರಾಮದಲ್ಲಿ ಸುಬ್ರಹ್ಮಣ್ಯ ನಾಯ್ಕ ಅವರ ಮನೆಯಲ್ಲಿ ಬಿಳಿ ಹೆಬ್ಬಾವು ಸಿಕ್ಕಿದೆ. ಈ ಅಪರೂಪದ ಬಿಳಿ ಹೆಬ್ಬಾವು ಕಂಡು ಜನರಿಗೆ ಗಾಬರಿ ಹಾಗೂ ಅಚ್ಚರಿ ಎರಡೂ ಆಗಿದೆ. ಬಳಿಕ ಉರಗ ತಜ್ಞ ಪವನ್ ನಾಯ್ಕ‌ ಅವರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪವನ್ ನಾಯ್ಕ ಬಿಳಿ … Continued

ಭಟ್ಕಳ: ಮೊಮ್ಮಗನನ್ನೇ ಅಪಹರಣ ಮಾಡಿಸಿದ್ದ ಅಜ್ಜ, ಗೋವಾದಲ್ಲಿ ಬಾಲಕನ ರಕ್ಷಿಸಿದ ಪೊಲೀಸರು

ಕಾರವಾರ: ಭಟ್ಕಳದ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಆಜಾದ್ ನಗರದಲ್ಲಿ ಅಪಹರಣಕ್ಕೊಳಗಾದ ಸ್ಥಳೀಯ ನಿವಾಸಿ ಬಾಲಕನನ್ನು ಪೊಲೀಸರು ಗೋವಾದ ಕಲಂಗುಟ್ ಕಡಲತೀರದಲ್ಲಿ ಸೋಮವಾರ ಬೆಳಿಗ್ಗೆ ರಕ್ಷಿಸಿದ್ದು, ಹಣಕಾಸಿನ ವ್ಯವಹಾರದ ಸಂಬಂಧ ಬಾಲಕನ ಅಜ್ಜನೇ (ತಾಯಿಯ ಮಾವ) ಅಪಹರಣ ಮಾಡಿಸಿದ್ದಾನೆ ಎಂಬುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಭಟ್ಕಳದ ಆಜಾದ್‌ ನಗರದ ಎಂಟು ವರ್ಷದ ಬಾಲಕನನ್ನು ಅಪಹರಣ ಮಾಡಲಾಗಿತ್ತು. … Continued

ಮುಂಡಗೋಡ: ಗ್ರಾಮ ಪಂಚಾಯತ ಸದಸ್ಯೆ ಕೊಲೆ

ಮುಂಡಗೋಡ: ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕು ಪಾಳಾ ಗ್ರಾಮ ಪಂಚಾಯತ ಸದಸ್ಯೆ ಅಕ್ಕಮ್ಮ ಬಸವರಾಜ ಮೇಲಿನಮನಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಗಂಡನೇ ಕೊಲೆ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ, ಆದರೆ ಆತನ ಮೇಲೆಯೇ ಸಂಶಯ ವ್ಯಕ್ತವಾಗಿದೆ. ತೀವ್ರ ಅಸ್ವಸ್ಥಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯ ಆವರಣದಲ್ಲಿಯೇ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಮಧ್ಯರಾತ್ರಿ ನಂತರ … Continued

ಉತ್ತರ ಕನ್ನಡಕ್ಕೆ ಬೇಕೇಬೇಕು ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ: ಬೆಂಗಳೂರಿನಲ್ಲಿರುವ ಉತ್ತರ ಕನ್ನಡದವರಿಂದ ನಡೆಯಿತು ಹಕ್ಕೊತ್ತಾಯ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಆಗಬೇಕು ಎಂದು ಒತ್ತಾಯಿಸಿ ಸರ್ಕಾರದ ಗಮನ ಸೆಳೆಯಲು ಬೆಂಗಳೂರಿನಲ್ಲಿ ವಾಸವಾಗಿರುವ ಉತ್ತರ ಕನ್ನಡ ಜಿಲ್ಲೆ ಜನರು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಇಂದು, ಶನಿವಾರ ಹಕ್ಕೊತ್ತಾಯದ ಮತಪ್ರದರ್ಶನ ನಡೆಸಿದರು. ಎಲ್ಲರೂ WeNeedSuperSpecialityHospitalInUttaraKannada” ಎಂಬ ಘೋಷ ವಾಕ್ಯದೊಂದಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಆಸ್ಪತ್ರೆ ನಿರ್ಮಾಣ … Continued

ಉತ್ತರ ಕನ್ನಡಕ್ಕೆ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು: ಜನರ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದ ಸಿದ್ದರಾಮಯ್ಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ನಂತರ ಈಗ ರಾಜ್ಯ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ ಅವರು, ಸುಸಜ್ಜಿತ ತುರ್ತು ಚಿಕಿತ್ಸಾ ವ್ಯವಸ್ಥೆಗೆ ಆಗ್ರಹಿಸಿ ಉತ್ತರ ಕನ್ನಡದ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ … Continued

ಕುಮಟಾ ಆಸುಪಾಸು ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸುವ ಬಗ್ಗೆ ಶೀಘ್ರವೇ ಅಧಿಕೃತ ಮಾಹಿತಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಟ್ವೀಟ್‌

ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದಾದರೂ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಅಭಿಯಾನಕ್ಕೆ ಈಗ ಜಿಲ್ಲಾ ಉಸ್ತುವಾರಿ ಸಚಿವರ ಹೇಳಿಕೆ ಬಲ ಬಂದಿದೆ. ಉತ್ತರ ಕನ್ನಡ ಜಿಲ್ಲೆಗೆ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವುದು ಈಗ ಆಂದೋಲನದ ರೂಪ ಪಡೆದಿದ್ದು, ಪ್ರಬಲ ಹೋರಾಟ ಮತ್ತು ಜನಾಭಿಪ್ರಾಯ ರೂಪಿಸಲು ಪ್ರಯತ್ನಗಳು ನಡೆಯುತ್ತಿವೆ. ಈ ಮಧ್ಯೆ ಉತ್ತರ … Continued

ಭಾರೀ ಮಳೆ: ಉತ್ತರ ಕನ್ನಡ, ಉಡುಪಿ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ/ಉಡುಪಿ: ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢಶಾಲೆಗಳು, ಪದವಿಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಹವಾಮಾನ ಇಲಾಖಾ ಮುನ್ಸೂಚನೆ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು … Continued

ಉತ್ತರ ಕನ್ನಡದ ಶಿರಾಲಿಯಲ್ಲಿ ದಾಖಲೆ ಮಳೆ

ಕಾರವಾರ: ಉತ್ತರ ಕನ್ನಡದ ಕರಾವಳಿಯಲ್ಲಿ ಜೋರಾಗಿ ಮಳೆಯಾಗುತ್ತಿದೆ. ಇದು ಮುಂದುವರಿಯುವ ಲಕ್ಷಣಗಳಿವೆ. ಜಿಲ್ಲೆಯ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಿದ್ದರೆ ಘಟ್ಟದ ಮೇಲಿನ ಪ್ರದೇಶಗಳಲ್ಲಿ ಹೆಚ್ಚಿನ ಭಾಗದಲ್ಲಿ ಜಿಟಜಿಟಿ ಮಳೆಯಾಗುತ್ತಿದೆ.ಭಟ್ಕಳದ ಶಿರಾಲಿಯಲ್ಲಿ ಒಂದೇ ದಿನದಲ್ಲಿ 200 ಮಿಮೀ ಮಳೆಯಾಗಿದೆ. ಶಿರಾಲಿ ಜನತಾ ವಿದ್ಯಾಲಯದ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ಹರಿಯುತ್ತಿದೆ. ಅಂಕೋಲಾ 120 ಮಿಮೀ, ಹೊನ್ನಾವರ ಹಾಗೂ … Continued

ಕುಮಟಾ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣ, ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

ಕುಮಟಾ; ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆ ಕಡ್ಲೆಯ ವಿದ್ಯಾರ್ಥಿ ಪ್ರಣವ ಈಶ್ವರ ನಾಯಕ (೧೮) ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶನಿವಾರ ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಡಾ.ಎ.ವಿ ಬಾಳಿಗಾ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನದಲ್ಲಿ ವ್ಯಾಸಂಗ ಮಾಡಿದ್ದ … Continued