ಮಾ. ೧೬ರಿಂದ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ; ಶತಾವಧಾನಿ ಆರ್‌.ಗಣೇಶರಿಗೆ ಶಿವರಾಮ ಹೆಗಡೆ ರಾಷ್ಟ್ರೀಯ ಪ್ರಶಸ್ತಿ-ಎಂ.ಎಲ್.ಸಾಮಗರಿಗೆ ಗಜಾನನ ಹೆಗಡೆ ಪ್ರಶಸ್ತಿ ಪ್ರದಾನ

ಹೊನ್ನಾವರ : ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿಯ ಕೆರೆಮನೆಯ ಆಶ್ರಯದಲ್ಲಿ ೧೪ನೇ ವರ್ಷದ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗುಣವಂತೆಯ ಯಕ್ಷಾಂಗಣದಲ್ಲಿ ಮಾರ್ಚ್ ೧೬ರಿಂದ ೨೦ರ ವರೆಗೆ ನಡೆಯಲಿದೆ ಎಂದು ಇಡಗುಂಜಿ ಮೇಳದ ನಿರ್ದೇಶಕ ಕೆರೆಮನೆ ಶಿವಾನಂದ ಹೆಗಡೆ ತಿಳಿಸಿದ್ದಾರೆ. ಐದು ದಿನಗಳ ರಾಷ್ಟ್ರೀಯ ನಾಟ್ಯೋತ್ಸವದಲ್ಲಿ … Continued

ಸಿದ್ದಾಪುರ : ಮಂಗನಕಾಯಿಲೆಗೆ ಒಂದೇ ದಿನ ಇಬ್ಬರು ಸಾವು

ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿದ್ದಾಪುರ ತಾಲೂಕಿನಲ್ಲಿ ಮಂಗನಕಾಯಿಲೆ(ಕೆಎಫ್‌ಡಿ)ಗೆ ಒಂದೇ ದಿನ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಸಿದ್ದಾಪುರ ತಾಲೂಕಿನ ಹೆಗ್ಗೆಕೊಪ್ಪ ಗ್ರಾಮದ 88 ವರ್ಷದ ವೃದ್ಧ ಮತ್ತು ಕಲ್ಲೂರು ಗ್ರಾಮದ 65 ವರ್ಷದ ವೃದ್ಧ ಮಂಗನ ಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಇಬ್ಬರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಮಂಗನ ಕಾಯಿಲೆಯಿಂದ … Continued

ಭಟ್ಕಳ : ತೆರವು ಮಾಡಿದ ಸ್ಥಳದಲ್ಲೇ ಮತ್ತೆ ಹನುಮ ಧ್ವಜ ಹಾರಿಸಿದ ಸಂಸದ ಅನಂತಕುಮಾರ ಹೆಗಡೆ-ಇತರರು…!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಗ್ರಾಮದಲ್ಲಿ ಹನುಮ ಧ್ವಜ ತೆರವು ಮಾಡಿದ ಸ್ಥಳದಲ್ಲೇ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಸಮ್ಮುಖದಲ್ಲಿ ಮತ್ತೆ ಹನುಮ ಧ್ವಜವನ್ನು ಹಾರಿಸಲಾಗಿದೆ ಎಂದು ವರದಿಯಾಗಿದೆ. ಸೋಮವಾರ ಕಾರ್ಯಕರ್ತರ ಸಭೆಗೆ ಸಂಸದ ಅನಂತಕುಮಾರ ಹೆಗಡೆ ಅವರು ತೆಂಗಿನಗುಂಡಿ ಗ್ರಾಮಕ್ಕೆ ಭೇಟಿ ನೀಡಿದ ಸಮಯದಲ್ಲಿ ಅವರ ನೇತೃತ್ವದಲ್ಲಿ ಹನುಮ … Continued

ಶಿರಸಿ : ಸುಗಾವಿ ಶಾಲೆ ʼಶತಮಾನೋತ್ಸವ ಸಂಭ್ರಮʼ ಉದ್ಘಾಟನೆ-ವಿದ್ಯಾರ್ಥಿಗಳಿದ್ದರೆ ಶಾಲೆಯಲ್ಲಿ ಇಂಗ್ಲಿಷ್‌ ಮೀಡಿಯಂಗೆ ಅನುಮತಿ ನೀಡಲು ಸಿದ್ಧ ಎಂದ ಡಿಡಿಪಿಐ

ಶಿರಸಿ : 114 ವರ್ಷಗಳ ಹಿಂದೆ ಸ್ಥಾಪನೆಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸುಗಾವಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನ ಸಂಭ್ರಮ ಕಾರ್ಯಕ್ರಮಕ್ಕೆ ಭಾನುವಾರ ಫೆ.25 ರಂದು ಬೆಳಿಗ್ಗೆ ಚಾಲನೆ ನೀಡಲಾಯಿತು. ಶಾಲೆಯ ನೂತನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮವನ್ನು ಶಿರಸಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಬಸವರಾಜ ಪಿ. ಅವರು ಉದ್ಘಾಟಿಸಿದರು. ನಂತರ ಮಾತನಾಡಿದ … Continued

ಸುಗಾವಿ ಶಾಲೆಯ ʼಶತಮಾನೋತ್ಸವ ಸಂಭ್ರಮʼ ಕಾರ್ಯಕ್ರಮ ಭಾನುವಾರ ಉದ್ಘಾಟನೆ : ವಿವಿಧ ಕಾರ್ಯಕ್ರಮ ಆಯೋಜನೆ

ಶಿರಸಿ : ಅಪ್ಪಟ ಹಳ್ಳಿಯ ಪ್ರದೇಶದಲ್ಲಿ 114 ವರ್ಷಗಳ ಹಿಂದೆ ಸ್ಥಾಪನೆಯಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ಕಲಿಕೆಯ ಮೂಲಕ ಭವಿಷ್ಯದ ಜೀವನಕ್ಕೆ ದಾರಿ ತೋರಿಸಿದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ತಾಲೂಕಿನ ಸುಗಾವಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನ ಸಂಭ್ರಮ ಕಾರ್ಯಕ್ರಮವನ್ನು ಫೆ.25 ರ ಬೆಳಿಗ್ಗೆ 10 ಕ್ಕೆ ಶಾಲಾ ನೂತನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. … Continued

ವೀಡಿಯೊ..| ಕುಮಟಾ : ಮನೆ ಬಾಗಿಲಿಗೇ ಬಂದು ನಾಯಿ ಹೊತ್ತೊಯ್ದ ಚಿರತೆ…!

ಕುಮಟಾ : ಮನೆಯಂಗಳಕ್ಕೇ ಬಂದ ಚಿರತೆಯೊಂದು ನಾಯಿಯನ್ನು ಹೊತ್ತೊಯ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯಲ್ಲಿ ನಡೆದಿದೆ. ಕುಮಟಾ ತಾಲೂಕಿನ ಹೊಲನಗದ್ದೆಯ ಬೆಳ್ಳಕ್ಕಿ ಎಂಬಲ್ಲಿ ದತ್ತಾತ್ರೇಯ ಭಟ್ಟ ಎಂಬವರ ಮನೆಯಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ಮನೆಯವರು ಹಾಗೂ ಅಕ್ಕಪಕ್ಕದ ಮನೆಯವರು ಭಯಬೀತರಾಗಿದ್ದಾರೆ. ರಾತ್ರಿ ಮನೆಯ ಅಂಗಳಕ್ಕೇ ಬಂದ ಚಿರತೆ ನಾಯಿ … Continued

ಶಿರಸಿ : ಸ್ವರ್ಣವಲ್ಲೀ‌ ಮಠದ ಶಿಷ್ಯ ಸ್ವೀಕಾರ ಮಹೋತ್ಸವ ; ಭಕ್ತರಿಗೆ ಮಾತೃ ಭೋಜನ ಭಾಗ್ಯ

 ಶಿರಸಿ: ಸ್ವರ್ಣವಲ್ಲೀ‌ ಮಹಾ ಸಂಸ್ಥಾನದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಶಿಷ್ಯ ಸ್ವೀಕಾರ ಮಹೋತ್ಸವ ಕಣ್ತುಂಬಿಕೊಳ್ಳಲು ಶಿಷ್ಯ ಭಕ್ತರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ಮಾತೆಯರು, ಯುವಕರು, ಹಿರಿಯರು ಈ ಮಹಾ ಕಾರ್ಯದಲ್ಲಿ ಸೇವಾ ಮನೋಭಾವದಲ್ಲಿ ಭಾಗವಹಿಸುತ್ತಿರುವದು ವಿಶೇಷವಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲದೆ, ಬೆಂಗಳೂರು, ಮುಂಬಯಿ, ದೆಹಲಿ, ಮಂಗಳೂರು, ಬೆಳಗಾವಿ, ಕಂಚಿ ಪ್ರಾಂತದಿಂದಲೂ ಭಕ್ತರು ಆಗಮಿಸುತ್ತಿದ್ದಾರೆ. ಮಾತೃ ಭೋಜನ … Continued

ಅಂಕೋಲಾ: ಖ್ಯಾತ ಸಾಹಿತಿ ವಿಷ್ಣು ನಾಯ್ಕ ಇನ್ನಿಲ್ಲ

ಅಂಕೋಲಾ : ಖ್ಯಾತಸಾಹಿತಿ, ಪ್ರಕಾಶಕ, ಪತ್ರಕರ್ತರಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ವಿಷ್ಣು ನಾಯ್ಕ (81) ಶನಿವಾರ ತಡರಾತ್ರಿ ಕಾರವಾರದ ಜಿಲ್ಲಾಸ್ಪತ್ರೆಯಲ್ಲಿ ನಿಧನರಾದರು. ಮೃತರಿಗೆ ಇಬ್ಬರು ಪುತ್ರಿಯರು ಇದ್ದಾರೆ. ಅಂಕೋಲಾದ ಅಂಬಾರಕೊಡ್ಲದವರಾಗಿರುವ ವಿಷ್ಣು ನಾಯ್ಕ ಅವರು 1944ರಲ್ಲಿ ತಾಲ್ಲೂಕಿನ ಅಂಬಾರಕೊಡ್ಲಾದಲ್ಲಿ ಜನಿಸಿದರು. ಎಂ.ಎ ಪದವೀಧರರಾಗಿದ್ದು, ದಿನಕರ ದೇಸಾಯಿ ಅವರ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. … Continued

ಕುಮಟಾ: ಖ್ಯಾತ ತೆರಿಗೆ ಸಲಹೆಗಾರ, ಸಹೃದಯಿ ಸಂಘಟಕ ಎಂ.ಕೆ.ಹೆಗಡೆ ನಿಧನ

ಕುಮಟಾ: ಖ್ಯಾತ ತೆರಿಗೆ ಸಲಹೆಗಾರ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಎಂ.ಕೆ.ಹೆಗಡೆ ಅವರು ಗುರುವಾರ ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ವಕೀಲರು ಹಾಗೂ ತೆರಿಗೆ ಸಲಹೆಗಾರರಾಗಿದ್ದ ಅವರು ಸಹೃದಯಿ ಹಾಗೂ ದಾನಿ ಎಂದೇ ಚಿರಪರಿಚಿತರಾಗಿದ್ದರು. ಎಂ.ಕೆ.ಹೆಗಡೆ ಅವರು ಸಾಮಾಜಿಕ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. … Continued

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಫೆ.೧೬ರ ಬಜೆಟ್‌ ನಲ್ಲೇ ಹಣ ನೀಡಿ : ಪಾದಯಾತ್ರೆಯಲ್ಲಿ ಸಾಗಿ ಸಚಿವರಿಗೆ ಮನವಿ ನೀಡಿ ಅನಂತಮೂರ್ತಿ ಹೆಗಡೆ ಒತ್ತಾಯ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅತ್ಯಗತ್ಯವಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಅತಿ ಶೀಘ್ರದಲ್ಲಿ ಆರಂಭಿಸಬೇಕು, ಆಸ್ಪತ್ರೆ ನಿರ್ಮಾಣಕ್ಕೆ ಈ ವರ್ಷದ ಬಜೆಟ್‌ನಲ್ಲಿ ಹಣ ಮೀಸಲಿಡಬೇಕು ಎಂದು ಆಗ್ರಹಿಸಿ ಕುಮಟಾದಿಂದ ಭಟ್ಕಳದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರ ಕಚೇರಿ ವರೆಗೆ ಮೂರು ದಿನಗಳ ಕಾಲ ಪಾದಯಾತ್ರೆ ನಡೆಸಿದ ಸಾಮಾಜಿಕ ಹೋರಾಟಗಾರ ಬುಧವಾರ ಸಚಿವರಿಗೆ ಮನವಿ … Continued