ಯಲ್ಲಾಪುರ | ಲಾರಿ ಅಪಘಾತದಲ್ಲಿ ಮೃತರ ಕುಟುಂಬದವರಿಗೆ ತಲಾ 3 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಹಾಗೂ ರಾಯಚೂರಿನ ಸಿಂಧನೂರಿನಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ 3 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಅಲ್ಲದೆ, ಗಾಯಾಳುಗಳ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿಗಳ ಅಧಿಕೃತ ಟ್ವಿಟರ್ … Continued

ಯಕ್ಷಗಾನ ಶಾಸ್ತ್ರೀಯ ಕಲೆ ಎಂದು ಪರಿಗಣಿತವಾಗುವ ನಿಟ್ಟಿನಲ್ಲಿ ನಮ್ಮ ಪ್ರಯತ್ನವಾಗಬೇಕಿದೆ ; ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ

ಶಿರಸಿ : ನೂರಾರು ವರ್ಷಗಳಿಂದ ಜನರೇ ಬೆಳೆಸಿಕೊಂಡು ಬರುತ್ತಿರುವ ಕಲೆ ದೇಶದಲ್ಲಿ ಯಾವುದಾದರೂ ಇದ್ದರೆ ಅದು ಯಕ್ಷಗಾನ ಕಲೆ ಎಂದು ಖ್ಯಾತ ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಅಭಿಪ್ರಾಯಪಟ್ಟರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ನೆಮ್ಮದಿ ರಂಗಧಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಶೋಕ ಹಾಸ್ಯಗಾರ ಅವರು ಬರೆದ ಯಕ್ಷಗಾನ ಸಂಶೋಧನಾ ಗ್ರಂಥ ದಶರೂಪಕಗಳ ದಶಾವತಾರ ಕೃತಿಯನ್ನು ಬಿಡುಗಡೆಗೊಳಿಸಿ … Continued

ಯಲ್ಲಾಪುರ | ಗುಳ್ಳಾಪುರದಲ್ಲಿ ತರಕಾರಿ ತುಂಬಿದ ಲಾರಿ ಪಲ್ಟಿ ;10 ಮಂದಿ ಸಾವು

ಯಲ್ಲಾಪುರ : ಬುಧವಾರ ಬೆಳ್ಳಂಬೆಳಗ್ಗೆ ತರಕಾರಿ ತುಂಬಿದ್ದ ಲಾರಿ ಪಲ್ಟಿಯಾಗಿ10 ಜನರು ಸಾವಿಗೀಡಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಗುಳ್ಳಾಪುರದ ಬಳಿ ಈ ಅಪಘಾತ ಸಂಭವಿಸಿದ್ದು 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಫಯಾಜ್‌ ಜಮಖಂಡಿ (45), ವಾಸಿಮ್‌ ಮುಡಿಗೇರಿ (25), ಇಜಾಜ್‌ … Continued

ಸಿದ್ದಾಪುರ : 7 ಹೋರಿಗಳು ಸಜೀವ ದಹನ

ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಚಂದ್ರಘಟಗಿ ಗ್ರಾಮದಲ್ಲಿ ಭಾನುವಾರ ತಡ ರಾತ್ರಿ ಸಂಭವಿಸಿದ ಬೆಂಕಿ ದುರಂತದಲ್ಲಿ 7 ಹೋರಿಗಳು ಸಜೀವ‌ದಹನವಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಚಂದ್ರಘಟಗಿಯ ಮಹೇಶ ಗಣಪತಿ ಹೆಗಡೆ ಅವರ ಮನೆಯ ಹಿಂಭಾಗದಲ್ಲಿರುವ ಕೊಟ್ಟಿಗೆಗೆ ಭಾನುವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗುಲಿ 7 ಹೋರಿಗಳು ಜೀವಂತ ದಹನವಾಗಿವೆ. . … Continued

ಯಕ್ಷಗಾನದ ಪುನರ್‌ ವ್ಯಾಖ್ಯಾನ ಆಗಬೇಕು ; ಯಕ್ಷಗಾನ ಶಾಸ್ತ್ರೀಯ ಕಲೆ ಹೇಗೆ-ಯಾಕೆ ಎಂಬುದು ನನ್ನ ʼದಶರೂಪಕಗಳ ದಶಾವತಾರʼ ಪುಸ್ತಕದಲ್ಲಿದೆ : ಸಂದರ್ಶನದಲ್ಲಿ ಅಶೋಕ ಹಾಸ್ಯಗಾರ

ರಘುಪತಿ ಯಾಜಿ ಯಕ್ಷಗಾನದ ಪುನರ್‌ವ್ಯಾಖ್ಯಾನವಾಗಬೇಕು. ಯಕ್ಷಗಾನ ಜನಪದ ಕಲೆ ಅಲ್ಲ, ಅದು ಶಾಸ್ತ್ರೀಯ ಕಲೆ ಎಂದು ಈಗ ಅನೇಕ ವಿದ್ವಾಂಸರು ಹೇಳುತ್ತಿದ್ದಾರೆ. ಯಕ್ಷಗಾನ  ಜನಪದ ಅಲ್ಲ ಎಂದರೆ ಅದು ಹೇಗೆ ಮತ್ತು ಯಾಕೆ..? ಅದು ಶಾಸ್ತ್ರೀಯ ಎಂದಾದರೆ ಅದು ಹೇಗೆ ಮತ್ತು ಯಾಕೆ ಎಂಬುದರ ಕುರಿತು ಯಕ್ಷಗಾನ ಬಯಲಾಟದ ಪುನರ್‌ವ್ಯಾಖ್ಯಾನ ಆಗಬೇಕು. ಯಕ್ಷಗಾನ ಬಯಲಾಟವು ಶಾಸ್ತ್ರೀಯ … Continued

ಶಿರಸಿ | ಜನವರಿ 21ರಂದು ‘ದಶರೂಪಕಗಳ ದಶಾವತಾರ’ ಯಕ್ಷಗಾನ ಸಂಶೋಧನಾ ಗ್ರಂಥ ಬಿಡುಗಡೆ

ಶಿರಸಿ : ಭರತನ ನಾಟ್ಯಶಾಸ್ತ್ರದ ಬೆಳಕಿನಲ್ಲಿ ಯಕ್ಷಗಾನದ ಪುನರ್ವ್ಯಾಖ್ಯಾನದ ಅವಶ್ಯಕತೆಯ ಹಿನ್ನೆಲೆಯಲ್ಲಿ ಹನ್ನೆರಡು ವರ್ಷಗಳಿಂದ ಅಧ್ಯಯನ ನಡೆಸಿದ ನಿವೃತ್ತ ಸಂಪಾದಕರು ಹಾಗೂ ಸಾಹಿತಿ ಅಶೋಕ ಹಾಸ್ಯಗಾರ ಅವರ ‘ದಶರೂಪಕಗಳ ದಶಾವತಾರ’ ಎಂಬ ಸಂಶೋಧನಾ ಗ್ರಂಥದ ಲೋಕಾರ್ಪಣೆ ಸಮಾರಂಭ ಜನವರಿ 21ರ ಮಂಗಳವಾರ ಸಂಜೆ 4 ಗಂಟೆಗೆ ನಗರದ ರಂಗಧಾಮ(ನೆಮ್ಮದಿ ಆವರಣ)ದಲ್ಲಿ ನಡೆಯಲಿದೆ. ಹೆಸರಾಂತ ವಿಮರ್ಶಕರು, ಮೀಮಾಂಸಕಾರರಾಗಿರುವ … Continued

ವೀಡಿಯೊ…| ಹೊನ್ನಾವರ : ಯಕ್ಷಗಾನದಲ್ಲಿ ಮಂಥರೆಯಾಗಿ ಮಿಂಚಿದ ನಟಿ ಉಮಾಶ್ರೀ…!

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಶುಕ್ರವಾರ(ಜ. 17) ರಾತ್ರಿ ನಡೆದ ಯಕ್ಷಗಾನ ಆಖ್ಯಾನ ಶ್ರೀರಾಮ ಪಟ್ಟಾಭಿಷೇಕದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟಿ, ಮಾಜಿ ಸಚಿವೆ ಉಮಾಶ್ರೀ ಮಂಥರೆ ಪಾತ್ರದಲ್ಲಿ ಅಭಿನಯಿಸಿ ಪ್ರೇಕ್ಷಕರನ್ನು ರಂಜಿಸಿದರು. ಹೊನ್ನಾವರದ ಸೇಂಟ್‌ ಅಂಥೋನಿ ಮೈದಾನದಲ್ಲಿ ಪೆರ್ಡೂರು ಶ್ರೀ ಅನಂತಪದ್ಮನಾಭ ಯಕ್ಷಗಾನ ಮಂಡಳಿ ಆಯೋಜಿಸಿರುವ ಶ್ರೀರಾಮ ಪಟ್ಟಾಭಿಷೇಕ ಪ್ರಸಂಗದಲ್ಲಿ ಮಂಥರೆಯ ಪಾತ್ರ … Continued

ಕಾರವಾರ | ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆ ; 18 ಕಾರ್ಮಿಕರು ಅಸ್ವಸ್ಥ

ಕಾರವಾರ : ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆಯಿಂದ 18 ಕಾರ್ಮಿಕರು ಅಸ್ವಸ್ಥಗೊಂಡ ಘಟನೆ ಉತ್ತರ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಬಳಿಯ ಆದಿತ್ಯ ಬಿರ್ಲಾ ಗ್ರೂಪ್​ನ ಕಾಸ್ಟಿಕ್ ಸೋಡಾ ಉತ್ಪಾದಿಸುವ ಗ್ರಾಸಿಮ್ ಇಂಡಸ್ಟ್ರೀಸ್​ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಾರ್ಮಿಕರಿಗೆ ಕಾರವಾರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕೆಲವರಿಗೆ ಕಂಪನಿಯ ಆವರಣದಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ನೀಲಕಂಠ, ಜಹನ್ನೂರು, … Continued

ಕುಮಟಾ | ಖ್ಯಾತ ವಿದ್ವಾಂಸ, ಡಾ. ಬಾಳಿಗಾ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ.ಹಂಪಿಹೊಳಿ ನಿಧನ

ಕುಮಟಾ : ಖ್ಯಾತ ಸಂಸ್ಕೃತ ವಿದ್ವಾಂಸ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ. ಎ. ವಿ. ಬಾಳಿಗಾ ಕಲಾ ಮತ್ತು ವಿಜ್ಞಾನ ಮಹಾ ವಿದ್ಯಾಲಯದ ನಿವೃತ್ತ ಪ್ರಾಚಾರ್ಯರಾದ ಡಾ. ವಿ. ಕೆ. ಹಂಪಿಹೊಳಿ (71) ಗುರುವಾರ ವಿಧಿವಶರಾಗಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗದ ತಾಲೂಕಿನ ಹಂಪಿಹೊಳಿಯವರಾದ ಅವರು ಕುಮಟಾದ ಕೆನರಾ ಸಂಸ್ಥೆಯ ಡಾ. ಎ.ವಿ.ಬಾಳಿಗಾ … Continued

ಶಿರಸಿ ಹೈಟೆಕ್ ಆಸ್ಪತ್ರೆ ವಿಚಾರದಲ್ಲಿ ಸತ್ಯಕ್ಕಾಗಿ ಆಗ್ರಹಿಸಿ ಜನವರಿ 13 ರಂದು ಉಪವಾಸ ಸತ್ಯಾಗ್ರಹ : ಅನಂತಮೂರ್ತಿ ಹೆಗಡೆ

ಶಿರಸಿ: ಶಿರಸಿ ಹೈಟೆಕ್ ಆಸ್ಪತ್ರೆಗೆ ಸಂಬಂಧಿಸಿ ಸತ್ಯಕ್ಕಾಗಿ ಆಗ್ರಹಿಸಿ ಜನವರಿ 13 ರಂದು ಬೆಳಿಗ್ಗೆ 9 ಗಂಟೆಗೆ ಬಿಡ್ಕಿ ಬಯಲಿನಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಶಿರಸಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ತಹಶೀಲ್ದಾರರ ಕಚೇರಿಯಲ್ಲಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುತ್ತದೆ ಎಂದು ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಹೇಳಿದ್ದಾರೆ. ಬುಧವಾರ ಶಿರಸಿಯಲ್ಲಿ … Continued