ಶಿರಸಿ-ಕುಮಟಾ ರಸ್ತೆಯಲ್ಲಿ ಭೂ ಕುಸಿತ ; ಮಣ್ಣಿನಿಂದ ಮುಚ್ಚಿಹೋದ ರಸ್ತೆ, ಕಾರ್ಯಾಚರಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಜಿಲ್ಲ ತತ್ತರಗೊಂಡಿದೆ. ಭಾರಿ ಮಳೆಯ ಕಾರಣದಿಂದ ಶಿರಸಿ-ಕುಮಟಾ ರಸ್ತೆಯ ದೇವಿಮನೆ ಘಟ್ಟದ ಬಳಿ ಭೂ ಕುಸಿತವಾಗಿದೆ. ಶಿರಸಿ- ಕುಮಟಾ ಮಧ್ಯ ರಸ್ತೆ ಸಂಚಾರ ಕೆಲಕಾಲ ಬಂದ್‌ ಆಗಿದೆ. ರಾಗಿ ಹೊಸಳ್ಳಿ ಬಳಿ ಸಹ ಭೂ ಕುಸಿತವಾಗಿದ್ದು, ರಸ್ತೆಯಲ್ಲಿ ಅಪಾರ ಪ್ರಮಾಣದ ಮಣ್ಣು ತೆರವು ಕಾರ್ಯಚರಣೆ … Continued

ಹೊನ್ನಾವರ : ಪ್ರಸಿದ್ಧ ಯಕ್ಷಗಾನ ವೇಷಧಾರಿ ಕಪ್ಪೆಕೆರೆ ಮಹಾದೇವ ಹೆಗಡೆ ನಿಧನ

ಹೊನ್ನಾವರ : ಬಡಗು ತಿಟ್ಟಿನ ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಪ್ಪೆಕೆರೆ ಮಹಾದೇವ ಹೆಗಡೆ(74) ಮಂಗಳವಾರ ರಾತ್ರಿ (ಜುಲೈ 9) ಹೊನ್ನಾವರದಲ್ಲಿ ನಿಧನರಾದರು. ಮೃತರು ಪತ್ನಿ, ನಾಲ್ವರು ಪುತ್ರರನ್ನು ಅಗಲಿದ್ದಾರೆ. ಪ್ರಸಿದ್ಧ ಭಾಗವತರಾದ ಅಣ್ಣ ಕಪ್ಪೆಕೆರೆ ಸುಬ್ರಾಯ ಹೆಗಡೆ ಅವರಿಂದ ಯಕ್ಷಗಾನ ಕಲಿತು, ನಂತರ ಯಕ್ಷಗಾನದ ದಿಗ್ಗಜ ಕೆರೆಮನೆ ಮಹಾಬಲ … Continued

ಭಾರಿ ಮಳೆ : ಉತ್ತರ ಕನ್ನಡ ಜಿಲ್ಲೆ 3, ಉಡುಪಿ ಜಿಲ್ಲೆ 3 ತಾಲೂಕುಗಳ ಶಾಲೆಗಳಿಗೆ ಜುಲೈ 5ರಂದು ರಜೆ ಘೋಷಣೆ

ಕಾರವಾರ /ಉಡುಪಿ : ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ವ್ಯಾಪಕ ಮಳೆಯ ಕಾರಣ ಉತ್ತರ ಕನ್ನಡ ಜಿಲ್ಲೆಯ ಮೂರು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ. ಭಟ್ಕಳ ಮತ್ತು ಹೊನ್ನಾವರ ತಾಲೂಕಿನ ಎಲ್ಲ ಶಾಲಾ ಕಾಲೇಜುಗಳಿಗೆ ಜುಲೈ 5 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ … Continued

ಪ್ರವಾಸಿಗರಿಗೆ ಮಾಹಿತಿ: ಭಾರೀ ಮಳೆ, ಯಲ್ಲಾಪುರ ಸಾತೊಡ್ಡಿ ಜಲಪಾತ ವೀಕ್ಷಣೆಗೆ ನಿಷೇಧ

ಯಲ್ಲಾಪುರ : ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣವಾದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಸಾತೊಡ್ಡಿ ಜಲಪಾತ ವೀಕ್ಷಣೆಗೆ ಈಗ ಪ್ರವೇಶ ನಿಷೇಧಿಸಲಾಗಿದೆ. ಭಾರೀ ಮಳೆಯಿಂದಾಗಿ ಜಲಪಾತದಲ್ಲಿ ನೀರಿನ ಹರಿವು ಹೆಚ್ಚಾದ ಕಾರಣ ಪ್ರವಾಸಿಗರಿಗೆ ಗುರುವಾರದಿಂದ ಮುಂದಿನ ಆದೇಶದವರೆಗೆ ಜಲಪಾತ ಪ್ರವೇಶವನ್ನು ಅರಣ್ಯ ಇಲಾಖೆ ನಿಷೇಧಿಸಿದೆ. ಈ ಕುರಿತು ಪ್ರವೇಶ ನಿರ್ಬಂಧದ ನಾಮಫಲಕ ಹಾಕಲಾಗಿದೆ. ಸಹಜವಾಗಿಯೇ … Continued

ಮತ್ತೆ ಬಂದ್‌ ಆಗಲಿದೆ ಶಿರಸಿ-ಕುಮಟಾ ಹೆದ್ದಾರಿ….

ಶಿರಸಿ: ಶಿರಸಿ- ಕುಮಟಾ ಹೆದ್ದಾರಿಯಲ್ಲಿ ಬಾಕಿ ಉಳಿದ ರಸ್ತೆ ಅಭಿವೃದ್ಧಿ, ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿ ನಡೆಸಲು ಜಿಲ್ಲಾಡಳಿತವು ಅಕ್ಟೋಬರ್‌ 15ರಿಂದ ವಾಹನಗಳಿಗೆ ಸಂಚಾರ ನಿರ್ಬಂಧಿಸಲು ಆದೇಶ ಹೊರಡಿಸಿದ್ದಾರೆ. ಈ ಮಾರ್ಗದಲ್ಲಿ ಸೇತುವೆಗಳನ್ನು ನಿರ್ಮಾಣ ಮಾಡಬೇಕಿರುವುದರಿಂದ ನಿಮರ್ಮಾಣ ಕಾಮಗಾರಿ ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸುವ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ … Continued

ವೀಡಿಯೊ..| ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕಾಗೇರಿ

ನವದೆಹಲಿ : ನೂತನ ಲೋಕಸಭಾ ಸದಸ್ಯರು ಸೋಮವಾರ ಸಂಸತ್ತಿನ ಮೊದಲ ಅಧಿವೇಶನದಲ್ಲಿ ಕನ್ನಡ ಸೇರಿದಂತೆ ಸಂಸ್ಕೃತ, ಹಿಂದಿ ಸೇರಿದಂತೆ ಹಲವು ಪ್ರಾದೇಶಿಕ ಭಾಷೆಗಳಲ್ಲಿ ಪ್ರಮಾಣ ವಚನ ಸ್ವೀಕರಿಸದರು. ಕೆಲವರು ಇಂಗ್ಲೀಷ್‌ನಲ್ಲೂ ಪ್ರಮಾಣ ವಚನ ಸ್ವೀಕರಿಸಿದರು.  ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನಸೆಳೆದರು. ಎಲ್ಲ ಸಂಸದರಿಗೂ … Continued

ಶಿರಸಿ: ಪರಿಸರ ಹೋರಾಟಗಾರ ಅನಂತ ಅಶೀಸರಗೆ ನಾಗರಿಕ ಸನ್ಮಾನ, ಅಭಿನಂದನಾ ಗ್ರಂಥ ʼವೃಕ್ಷಮಿತ್ರʼ ಲೋಕಾರ್ಪಣೆ

ಶಿರಸಿ : ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಭಾನುವಾರ ವೃಕ್ಷಲಕ್ಷ ಆಂದೊಲನ ಸಂಘಟಿಸಿದ್ದ ಪರಿಸರ ಸಂರಕ್ಷಣೆ-ಸುಸ್ಥಿರ ಅಭಿವೃದ್ಧಿ ರಾಜ್ಯಮಟ್ಟದ ಸಮ್ಮೇಳನದಲ್ಲಿ ಪರಿಸರ ಹೋರಾಟಗಾರ ವೃಕ್ಷಲಕ್ಷ ಆಂದೋಲನದ ಪ್ರಮುಖ ಅನಂತ ಹೆಗಡೆ ಅಶೀಸರ ಅವರಿಗೆ ನಾಗರಿಕ ಸನ್ಮಾನ ನೀಡಿ ಗೌರವಿಸಲಾಯಿತು. ಅಲ್ಲದೆ, ಅನಂತ ಹೆಗಡೆ ಅಶೀಸರ ಅವರ ಅಭಿನಂದನಾ ಗ್ರಂಥ ʼವೃಕ್ಷಮಿತ್ರʼ ವನ್ನು ಲೋಕಾರ್ಪಣೆ ಮಾಡಲಾಯಿತು. ಇದೇವೇಳೆ … Continued

ಶಿರಸಿ : ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ; ಓರ್ವನನ್ನು ವಶಕ್ಕೆ ಪಡೆದ ಎನ್‌ಐಎ

ಶಿರಸಿ: ಆನ್‌ಲೈನ್‌ನಲ್ಲಿ ಭಯೋತ್ಪಾದಕ ಸಂಘಟನೆಗಳ ಜೊತೆ ಸಂಪರ್ಕ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಶಿರಸಿ ತಾಲೂಕಿನ ದಾಸನಕೊಪ್ಪ ಮೂಲದ ವ್ಯಕ್ತಿಯನ್ನು ಎನ್‌ಐಎ ಅಧಿಕಾರಿಗಳ ತಂಡ ವಶಕ್ಕೆ ಪಡೆದು ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ದಿದೆ ಎಂದು ವರದಿಯಾಗಿದೆ. ಬಕ್ರೀದ್‌ ಹಬ್ಬಕ್ಕಾಗಿ ದುಬೈನಿಂದ ಆಗಮಿಸಿದ್ದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಎನ್‌ಐಎ ಅಧಿಕಾರಿಗಳು … Continued

ಜೊಯಿಡಾ : ಪೊಲೀಸ್‌ ಠಾಣೆ ಎದುರು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

ಕಾರವಾರ; ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಕಿರಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಠಾಣೆ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸುಟ್ಟ ಗಾಯಗಳಿಂದ ತೀವ್ರವಾಗಿ ಗಾಯಗೊಂಡಿದ್ದ ರಾಮನಗರದ ಹನುಮಾನ ಗಲ್ಲಿ ನಿವಾಸಿ ಭಾಸ್ಕರ ಬೋಂಡೆಲ್ಕರ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. … Continued

ಜೊಯಿಡಾ : ರಾಮನಗರ ಪೊಲೀಸ್‌ ಠಾಣೆ ಎದುರು ಆತ್ಮಹತ್ಯೆಗೆ ಯತ್ನಿಸಿದ ಯುವಕ

ಕಾರವಾರ: ವ್ಯಕ್ತಿಯೊಬ್ಬ ಪೊಲೀಸ್‌ ಠಾಣೆಯ ಎದುರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ರಾಮನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಭಾಸ್ಕರ್ ಬೋಂಡೆಲ್ಕರ (36) ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ಮದ್ಯದ ಅಮಲಿನಲ್ಲಿ ಈ ರೀತಿ ಮಾಡಿಕೊಂಡಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಆದರೆ … Continued