ಭಾರೀ ಮಳೆ: ಗೋಕರ್ಣ ಮಹಾಬಲೇಶ್ವರ ದೇಗುಲಕ್ಕೆ ನುಗ್ಗಿದ ನೀರು; ಆತ್ಮಲಿಂಗ ಜಲಾವೃತ

ಕಾರವಾರ : ಶುಕ್ರವಾರ ಸುರಿದ ಭಾರೀ ಮಳೆಗೆ ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಸ್ಥಳವಾದ ಗೋಕರ್ಣದ ಹಲವು ಕಡೆ ನೀರು ತುಂಬಿದ್ದು, ಮಹಾಬಲೇಶ್ವರ ದೇಗುಲದ ಗರ್ಭಗುಡಿಯೂ ಜಲಾವೃತವಾಗಿ ಆತ್ಮಲಿಂಗ ಗಂಟೆಗಳ ಕಾಲ ರಾಡಿ ನೀರಿನಿಂದ ಮುಳುಗುವಂತಾಯಿತು ಎಂದು ವರದಿಯಾಗಿದೆ. ಹೀಗಾಗಿ ಒಂದು ತಾಸಿಗೂ ಹೆಚ್ಚು ಕಾಲ ಭಕ್ತರಿಗೆ ಆತ್ಮಲಿಂಗದ ದರ್ಶನಕ್ಕೆ ಅವಕಾಶವನ್ನು ಸ್ಥಗಿತಗೊಳಿಸಲಾಗಿತ್ತು.ದೇವಸ್ಥಾನದ ಸಿಬ್ಬಂದಿ … Continued

ಜಿಲ್ಲಾ ನಿಬಂಧಕರ ನ್ಯಾಯಾಲಯದ ಆದೇಶಕ್ಕೆ ಸಂಯುಕ್ತ ನಿಬಂಧಕರ ನ್ಯಾಯಾಲಯ ತಡೆಯಾಜ್ಞೆ : ಟಿಎಸ್‌ಎಸ್‌ ಅಧ್ಯಕ್ಷರಾಗಿ ಗೋಪಾಲಕೃಷ್ಣ ವೈದ್ಯ ಪುನಃ ಅಧಿಕಾರ ಸ್ವೀಕಾರ

ಶಿರಸಿ: ಟಿಎಸ್‌ಎಸ್ ಸಹಕಾರಿ ಸಂಸ್ಥೆಯ ಆಡಳಿತ ಮಂಡಳಿ ರದ್ದತಿ ಹಾಗೂ ಆಡಳಿತ ಅಧಿಕಾರಿ ನೇಮಕದ ಕುರಿತು ಸಹಕಾರ ಸಂಘಗಳ ಜಿಲ್ಲಾ ನಿಬಂಧಕರ ನ್ಯಾಯಾಲಯ ನೀಡಿದ ಆದೇಶಕ್ಕೆ ಇಲಾಖೆಯ ಬೆಳಗಾವಿಯ ಸಂಯುಕ್ತ ನಿಬಂಧಕರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ ಎಂದು ಗೋಪಾಲಕೃಷ್ಣ ವೈದ್ಯ ಅವರು ಹೇಳಿದ್ದು, ಈ ಹಿನ್ನೆಲೆಯಲ್ಲಿ ಅವರು ಪುನಃ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. … Continued

ಶಿರಸಿ: ಟಿ ಎಸ್‌ ಎಸ್‌ ಸಂಸ್ಥೆ ಆಡಳಿತ ಮಂಡಳಿ ರದ್ದು; ವಿಶೇಷ ಆಡಳಿತಾಧಿಕಾರಿ ನೇಮಕ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಟಿ ಎಸ್ ಎಸ್ ಸಹಕಾರಿ ಸಂಸ್ಥೆಗೆ ಸಹಕಾರ ಇಲಾಖೆಯು ವಿಶೇಷ ಆಡಳಿತಾಧಿಕಾರಿ ನೇಮಕ ಮಾಡಿದೆ. ಹಾಗೂ ಸಂಸ್ಥೆಯ ಹಾಲಿ ಆಡಳಿತ ಮಂಡಳಿಯನ್ನು ರದ್ದುಪಡಿಸಲಾಗಿದೆ. ಕಳೆದ ಬಾರಿ ಈ ಆಡಳಿತ ಮಂಡಳಿಯ ಚುನಾವಣೆಯ ಸಂದರ್ಭದಲ್ಲಿ ಲೋಕದೋಷಗಳಾಗಿವೆ ಎಂದು ಸಂಸ್ಥೆಯ ಇಬ್ಬರು ಸದಸ್ಯರು ಸಹಕಾರ ಸಂಘಗಳ ಉಪನಿಬಂಧಕ ಕೋರ್ಟಿನಲ್ಲಿ ದೂರು … Continued

ಹೊನ್ನಾವರ : ಹೆಲ್ಮೆಟ್‌ ಧರಿಸಿಲ್ಲವೆಂದು ಲಾರಿ ಚಾಲಕನಿಗೆ ದಂಡ ಹಾಕಿದ ಪೊಲೀಸರು…!

ಹೊನ್ನಾವರ : ಟಿಪ್ಪರ್ ಲಾರಿ ಚಾಲಕರೊಬ್ಬರಿಗೆ ಹೆಲ್ಮೆಟ್​ ಧರಿಸಿಲ್ಲವೆಂದು ಹೊನ್ನಾವರ ಸಂಚಾರ ಠಾಣೆ ಪೊಲೀಸರು ದಂಡ ಹಾಕಿರುವ ವಿಲಕ್ಷಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಮರಳು ತುಂಬಿದ ಟಿಪ್ಪರ್ ಲಾರಿ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಹೊನ್ನಾವರ ಸಂಚಾರಿ ಪೊಲೀಸರು, ಅಳ್ಳಂಕಿ ಬಳಿ ತಡೆದು ಲಾರಿ ಚಾಲಕನಿಗೆ 500 ರೂಪಾಯಿ ದಂಡ … Continued

ಕುಮಟಾ : ಕಣ್ಣುಗಳನ್ನು ದಾನ ಮಾಡಿ ಸಾವಿನ ನಂತರವೂ ಸಾರ್ಥಕ್ಯದ ಕಾರ್ಯ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿ ಕೆಳಗಿನಕೇರಿ ಭಟ್ಟರಮನೆಯ ಅನಸೂಯ ಗಣಪತಿ ಹೆಗಡೆ (84) ಅವರು ಶುಕ್ರವಾರ (ಮೇ 17)ರಂದು ನಿಧನರಾಗಿದ್ದಾರೆ. ಅವರು ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲಿಯೂ ಸಾರ್ಥಕತೆಯ ಕಾರ್ಯ ಮಾಡಿದ್ದಾರೆ. ಅನಸೂಯ ಅವರು ವಯೋಸಹಜ ಕಾಯಿಲೆಯಿಂದ ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ನಿಧನರಾದರು. ಅವರು ಮರಣಾನಂತರದಲ್ಲಿ … Continued

ಕುಮಟಾ: ‘ಸೌರಭ’ಕ್ಕೆ ರಜತ ಸಂಭ್ರಮ, ಮೇ 12ರಂದು ಬೆಳಿಗ್ಗೆಯಿಂದ ರಾತ್ರಿ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮ

 ಕುಮಟಾ : ಸಾಂಸ್ಕೃತಿಕ ಸಂಘಟನೆ ‘ಸೌರಭ’ವು ರಜತ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದ್ದು, ಈ ನಿಮಿತ್ತ ಮೇ 12ರಂದು ಬೆಳಿಗ್ಗೆ 7 ರಿಂದ ರಾತ್ರಿ 9ರ ವರೆಗೆ ಉತ್ತರ ಕನ್ನಡ ಜಿಲ್ಲೆಯ   ‘ರಜತ ಸಂಭ್ರಮ ಸೌರಭ’ ಕಾರ್ಯಕ್ರಮವನ್ನು ನಗರದ ಮೂರೂರು ರಸ್ತೆಯಲ್ಲಿರುವ ಹವ್ಯಕ ಸಭಾಭವನದಲ್ಲಿ ಹಮ್ಮಿಕೊಂಡಿದೆ. 12ರಂದು ಬೆಳಿಗ್ಗೆ 7 ಗಂಟೆಗೆ ‘ಉದಯರಾಗ ಸೌರಭ’ ಕಾರ್ಯಕ್ರಮದಲ್ಲಿ ಹಿಂದುಸ್ತಾನಿ ಗಾಯಕ … Continued

ಗೋಪಾಲಕೃಷ್ಣ ಭಟ್ಟ ನಿಧನ

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ  ಸಿದ್ದಾಪುರ  ತಾಲೂಕಿನ ವಾಜಗದ್ದೆ ಸಮೀಪದ ಗೊಡ್ವೆಮನೆಯ ಗೋಪಾಲಕೃಷ್ಣ ಸುಬ್ರಾಯ ಭಟ್ಟ (59) ಮೇ 7ರಂದು  ನಿಧನರಾಗಿದ್ದಾರೆ. ಅವರು ಪತ್ನಿ, ಓರ್ವ ಪುತ್ರ, ತಾಯಿ, ಮೂವರು ಸಹೋದರರು,ಇಬ್ಬರು ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ತುಮಕೂರಿನ ಸಾಕೇತ್ ಅಟೋಮೊಬೈಲ್ಸ್‌ನಲ್ಲಿ ಹಿರಿಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಹೃದಯಸ್ಥಂಭನದಿಂದ ಹಠಾತ್ತಾಗಿ ನಿಧನರಾಗಿದ್ದಾರೆ. ಅವರ … Continued

ಏಪ್ರಿಲ್‌ 28, 29 ರಂದು ಉತ್ತರ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರ : ಬೆಳಗಾವಿಯಲ್ಲಿ ತಂಗುವ ಸಾಧ್ಯತೆ

ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಚುನಾವಣಾ ಪ್ರಚಾರದಲ್ಲಿ ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ ವ್ಯಾಪ್ತಿಯ ಲೋಕಸಭಾ ಮತಕ್ಷೇತ್ರಗಳಲ್ಲಿ ಬಿರುಸಿನ ಚುನಾವಣಾ ಪ್ರಚಾರಕ್ಕೆ ಮುಂದಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್​ 28 ಮತ್ತು 29 ಎರಡೂ ದಿನಗಳ ಕಾಲ ಕರ್ನಾಟಕದಲ್ಲಿ ಮತಯಾಚಿಸಲಿದ್ದಾರೆ. ಚುನಾವಣಾ ಪ್ರಚಾರ ಸಂದರ್ಭದಲ್ಲಿ ಅವರು ಬೆಳಗಾವಿಯಲ್ಲೇ ತಂಗುವ ಸಾಧ್ಯತೆ ಇದೆ. … Continued

ಭಟ್ಕಳ : ಮೀನುಗಾರಿಕಾ ಬೋಟ್ ಮುಳುಗಡೆ

ಕಾರವಾರ : ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ತೆರಳಿದ್ದ ಬೋಟ್ ಭಾರಿ ಗಾಳಿ ಮಳೆಯಿಂದಾಗಿ ಮುಳುಗಡೆಯಾದ ಘಟನೆ ಉತ್ತರಕನ್ನಡ ಜಿಲ್ಲೆಯಲ್ಲಿ ವರದಿಯಾಗಿದ್ದು, ಬೋಟ್‌ನಲ್ಲಿದ್ದ ನಾಲ್ಕು ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮಾವಿನಕುರ್ವೆ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಹಾದೇವ ಖಾರ್ವಿ ಮಾಲಕತ್ವದ ಓಂ ಮಹಾಗಣಪತಿ ಹೆಸರಿನ ಬೋಟ್ ಗಾಳಿಮಳೆಗೆ ಸಿಲುಕಿ ಮುಳುಗಡೆಯಾಗಿದೆ. … Continued

ಕುಮಟಾ : ನಿವೃತ್ತ ಮುಖ್ಯಾಧ್ಯಾಪಕ ಹೊಲನಗದ್ದೆ ಆರ್.ಎನ್.ಹೆಗಡೆ ನಿಧನ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯ ಆರ್.ಎನ್.ಹೆಗಡೆ (66) ಅವರು ಮಂಗಳವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಆರ್.ಎನ್.ಹೆಗಡೆ ಅವರು ಪ್ರಾಥಮಿಕ ಶಾಲಾ ಮುಖ್ಯಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಸಮಾಜ ಕಾರ್ಯದಲ್ಲಿಯೂ ಗುರುತಿಸಿ ಕೊಂಡಿದ್ದ ಅವರು ಕಾಂಚಿಕಾಂಬಾ ಹವ್ಯಕ ವಲಯದ ಅಧ್ಯಕ್ಷರಾಗಿ ಸೇವೆಸಲ್ಲಿಸಿದ್ದರು. ಕುಮಟಾ ಕನ್ನಡ ಸಂಘದ ಸದಸ್ಯರಾಗಿದ್ದ ಅನೇಕ ಸಾಮಾಜಿಕ ಕಾರ್ಯದಲ್ಲಿ … Continued