ಕೊಲೆ ಸಾಕ್ಷಿ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್‌ಸ್ಟರ್‌ ಅತೀಕ್ ಅಹ್ಮದ್ ವಕೀಲನನ್ನು ಬಂಧಿಸಿದ ಪೊಲೀಸರು

ನವದೆಹಲಿ : ದೇಶಾದ್ಯಂತ ಬಿಎಸ್‌ಪಿ ಮಾಜಿ ಶಾಸಕ ರಾಜು ಪಾಲ್‌ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ ಪಾಲ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಗೀಡಾದ ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ನ ವಕೀಲರನ್ನು ಉತ್ತರ ಪ್ರದೇಶ ಪೊಲೀಸರು ಇಂದು, ಭಾನುವಾರ ಬಂಧಿಸಿದ್ದಾರೆ. ಶೂಟರ್ ಉಮೇಶ್ ಪಾಲ್ ಇರುವ ಸ್ಥಳದ ಮಾಹಿತಿಯನ್ನು ವಕೀಲ ವಿಜಯ ಮಿಶ್ರಾ ನೀಡಿದ್ದರು ಎಂದು ಪೊಲೀಸ್ … Continued

ತಂಗಿಯ ಶಿರಚ್ಛೇದ ಮಾಡಿದ ತುಂಡರಿಸಿದ ತಲೆಯೊಂದಿಗೆ ಪೊಲೀಸ್ ಠಾಣೆಗೆ ಬಂದ ವ್ಯಕ್ತಿ…!

ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ಬಾರಾಬಂಕಿಯಲ್ಲಿ 22 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ, ಆತ ತನ್ನ ಸಹೋದರಿಯ ತುಂಡರಿಸಿದ ತಲೆಯೊಂದಿಗೆ ಪೊಲೀಸ್ ಠಾಣೆಗೆ ನಡೆದುಕೊಂಡು ಹೋಗುತ್ತಿದ್ದಾಗ ಆತನನ್ನು ಬಂಧಿಸಲಾಗಿದೆ. ವರದಿಗಳ ಪ್ರಕಾರ, ಬಾರಾಬಂಕಿಯ ಫತೇಪುರ್ ಪ್ರದೇಶದ ಮಿಥ್ವಾರಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಿಯಾಜ್ (22) ಮತ್ತು ಆತನ ಸಹೋದರಿ ಆಶಿಫಾ (18) ನಡುವೆ ನಡೆದ ಜಗಳದ … Continued

500 ರೂ.ನೋಟಿನ ಕಂತೆಗಳೊಂದಿಗೆ ಸೆಲ್ಫಿ ತೆಗೆದುಕೊಂಡ ಹೆಂಡತಿ-ಮಕ್ಕಳ ಫೋಟೋ ವೈರಲ್‌ : ಪೊಲೀಸ್‌ ಅಧಿಕಾರಿಗೆ ಎದುರಾಯ್ತು ಸಂಕಷ್ಟ…

ಲಕ್ನೋ: ಕುಟುಂಬದವರು ನೋಟಿನ ಕಂತೆಗಳೊಂದಿಗೆ ತೆಗೆದುಕೊಂಡ ಸೆಲ್ಫಿ ಫೋಟೊಗಳು ವೈರಲ್‌ ಆದ ನಂತರ ಉತ್ತರ ಪ್ರದೇಶದ ಉನ್ನಾವೊದಲ್ಲಿ ಪೊಲೀಸ್ ಅಧಿಕಾರಿಯೊಬ್ಬರಿಗೆ ಸಂಕಷ್ಟ ಎದುರಾಗಿದೆ. ಹಾಗೂ ಅವರು ತಕ್ಷಣ ವರ್ಗಾವಣೆಗೊಂಡಿದ್ದಾರೆ. ಪತ್ನಿ ಮತ್ತು ಮಕ್ಕಳು ನೋಟಿನ ಕಂತೆಗಳೊಂದಿಗೆ ತೆಗೆದುಕೊಂಡ ತೆಗೆದ ಸೆಲ್ಫಿ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, 500 ರೂಪಾಯಿ ನೋಟುಗಳ ಬಂಡಲ್‌ಗಳೊಂದಿಗೆ ಅವರು ಪೋಸ್ … Continued

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ ಆಜಾದ್ ಮೇಲೆ ಗುಂಡಿನ ದಾಳಿ

ಸಹರಾನಪುರ : ಇಂದು ಬುಧವಾರ (ಜೂನ್‌ 28) ಉತ್ತರ ಪ್ರದೇಶದ ಸಹರಾನಪುರದಲ್ಲಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ ಆಜಾದ್ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಭೀಮ್ ಆರ್ಮಿ ಮುಖ್ಯಸ್ಥರು ಬೆಂಬಲಿಗರ ಮನೆಯಲ್ಲಿ ನಡೆದ ಧಾರ್ಮಿಕ ಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಹರಾನ್‌ಪುರದಲ್ಲಿದ್ದರು. ಆಜಾದ್ ತನ್ನ … Continued

ಬೆಳ್ಳಂಬೆಳಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ ವಾಂಟೆಡ್ ಕ್ರಿಮಿನಲ್ ಹತ್ಯೆ

ಲಕ್ನೋ: ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಇಂದು, ಮಂಗಳವಾರ (ಜೂನ್‌ 27) ನಡೆದ ಎನ್‌ಕೌಂಟರ್‌ನಲ್ಲಿ ವಾಂಟೆಡ್ ಕ್ರಿಮಿನಲ್ ಒಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಪಾತಕಿಯನ್ನು ಗುಫ್ರಾನ್ ಎಂದು ಗುರುತಿಸಲಾಗಿದ್ದು, ಈತ ಅನೇಕ ಕೊಲೆ-ಸುಲಿಗೆಗಳು ಮತ್ತು ಡಕಾಯಿತಿ ಪ್ರಕರಣಗಳಲ್ಲಿ ಬೇಕಾಗಿದ್ದ. ಉತ್ತರ ಪ್ರದೇಶ ಪೊಲೀಸರ ಪ್ರಕಾರ, ಮಂಗಳವಾರ ಬೆಳಿಗ್ಗೆ 5:00 ಗಂಟೆಯ ಸುಮಾರಿಗೆ ವಿಶೇಷ ಕಾರ್ಯಪಡೆ ತಂಡವು … Continued

ಬಿಸಿಲಿನ ತೀವ್ರತೆ : ಬಲಿಯಾ ಆಸ್ಪತ್ರೆಗೆ ದಾಖಲಾದ 48 ಗಂಟೆಗಳಲ್ಲಿ ‘ತೀವ್ರ ಶಾಖ’ದಿಂದ 34 ಜನರು ಸಾವು

ಲಕ್ನೋ: ಕಳೆದ 24 ಗಂಟೆಗಳಲ್ಲಿ ಬಿಸಿಲಿನ ತೀವ್ರತೆಯಿಂದ ಅಸ್ವಸ್ಥಗೊಂಡು ಬಲ್ಲಿಯಾ ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ 34 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಜಿಲ್ಲೆಯಲ್ಲಿ ಬಿಸಿಲಿನ ಬೇಗೆ ಏರುತ್ತಿದ್ದು, ತೀವ್ರ ಶಾಖದಿಂದ ಜನ ತತ್ತರಿಸುತ್ತಿದ್ದಾರೆ. ಜನರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನವರು 60 ವರ್ಷಕ್ಕಿಂತ ಮೇಲ್ಪಟ್ಟವರು” ಎಂದು ಮುಖ್ಯ ವೈದ್ಯಾಧಿಕಾರಿ (ಸಿಎಂಒ) ಡಾ.ಜಯಂತಕುಮಾರ ಮಾಹಿತಿ ನೀಡಿದ್ದಾರೆ. … Continued

ಮದುವೆಯ ನಂತರ ಮಾವ ವಿಧಿಸಿದ ಷರತ್ತಿಗೆ ದಂಗಾಗಿ ಮದುಮಗಳನ್ನೇ ಬಿಟ್ಟು ಹೋದ ವರ…!

ಝಾನ್ಸಿ: ಮದುವೆಯ ನಂತರ ವಧುವಿನ ತಂದೆ ವಿಧಿಸಿದ ಮೂರು ಷರತ್ತಿನಿಂದಾಗಿ ವಿಧಿವತ್ತಾಗಿ ನಡೆದ ಮದುವೆಯೇ ಮುರಿದುಬಿದ್ದಿದೆ…! ವಧುವನ್ನು ಗಂಡನ ಮನೆಗೆ ಕಳುಹಿಸುವ ಸಂದರ್ಭದಲ್ಲಿ ವಧುವಿನ ತಂದೆ ಮೂರು ಷರತ್ತುಗಳನ್ನು ವಿಧಿಸಿದ್ದು ಇಷ್ಟೆಲ್ಲ ರಾದ್ದಾಂತಕ್ಕೆ ಕಾರಣವಾಯ್ತು.. ಈ ಘಟನೆ ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯಲ್ಲಿ ನಡೆದಿದೆ. ಈ ಷರತ್ತುಗಳನ್ನು ಕೇಳಿ ಮದುಮಗನಷ್ಟೇ ಅಲ್ಲ, ಆತನ ಕುಟುಂಬದವರು ಹಾಗೂ … Continued

ಐವರು ಮಕ್ಕಳಿದ್ದರೂ ತನ್ನ 1.5 ಕೋಟಿ ರೂ.ಮೌಲ್ಯದ ಆಸ್ತಿಯನ್ನು ಸರ್ಕಾರಕ್ಕೆ ದಾನ ಮಾಡಿದ ವಯೋವೃದ್ಧ…!

ಲಕ್ನೋ: ಉತ್ತರ ಪ್ರದೇಶದ ಯೋಗಿ ಸರ್ಕಾರಕ್ಕೆ 85 ವರ್ಷದ ವ್ಯಕ್ತಿಯೊಬ್ಬರು 1.5 ಕೋಟಿ ರೂ.ಗಳ ಮೌಲ್ಯದ ಆಸ್ತಿಯನ್ನು ದಾನವಾಗಿ ನೀಡಿದ್ದಾರೆ. ತಮ್ಮ ಮಕ್ಕಳು ತಮ್ಮನ್ನು ನೋಡಿಕೊಳ್ಳುವುದಿಲ್ಲ ಎಂಬ ಕಾರಣಕ್ಕೆ ಉತ್ತರ ಪ್ರದೇಶದ ಮುಜಾಫರ್‌ನಗರದ ನಾಥು ಸಿಂಗ್ ಎಂಬವರು ಮನನೊಂದು ಮನೆ ಮತ್ತು ಜಮೀನನ್ನು ಸರ್ಕಾರಕ್ಕೆ ವಿಲ್‌ ಮಾಡಿದ್ದಾರೆ. ಅಧ್ಯಯನಕ್ಕಾಗಿ ವೈದ್ಯಕೀಯ ಕಾಲೇಜಿಗೆ ದೇಹವನ್ನು ದಾನ ಮಾಡಿದ್ದಾರೆ. … Continued

ಗಂಡ-ಹೆಂಡತಿ ಜಗಳದ ವೇಳೆ ಗಂಡನ ನಾಲಿಗೆಯನ್ನೇ ಕಚ್ಚಿ ತುಂಡರಿಸಿದ ಪತ್ನಿ…!

ಲಕ್ನೋ: ತವರು ಮನೆಗೆ ಹೋಗಿದ್ದ ಪತ್ನಿಗೆ ಮನೆಗೆ ಬರುವಂತೆ ಮನವೊಲಿಸಲು ಯತ್ನಿಸಿದ ವೇಳೆ ಹಂಡೆ-ಹೆಂಡತಿ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವಾಗಿ ಪತ್ನಿಯು ಗಂಡನ ನಾಲಿಗೆಯನ್ನೇ ಕಚ್ಚಿ ತುಂಡರಿಸಿದ ವಿಲಕ್ಷಣ ಘಟನೆ ನಡೆದಿದೆ. ವರದಿಗಳ ಪ್ರಕಾರ, ಸಲ್ಮಾ ಎಂಬ ಮಹಿಳೆ ತನ್ನ ಮಕ್ಕಳೊಂದಿಗೆ ಉತ್ತರ ಪ್ರದೇಶದ ಲಕ್ನೋದ ಠಾಕೂರ್‌ಗಂಜ್ ಪ್ರದೇಶದ ತನ್ನ ತವರು ಮನೆಯಲ್ಲಿ ಸ್ವಲ್ಪ … Continued

4 ಅಂತಸ್ತಿನ ಕಟ್ಟಡ ಕುಸಿತ : ಮೂವರು ಸಾವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

ಲಕ್ನೋ: ಮಂಗಳವಾರ ಲಕ್ನೋದ ವಜೀರ್ ಹಸನ್‌ಗಂಜ್ ರಸ್ತೆಯಲ್ಲಿ ವಸತಿ ಕಟ್ಟಡವೊಂದು ಕುಸಿದ ಪರಿಣಾಮ ಮೂವರು ಮೃತಪಟ್ಟಿದ್ದು, ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ವರದಿಗಳು ತಿಳಿಸಿವೆ. ಪೊಲೀಸರು ಮತ್ತು ಎನ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಧಾವಿಸಿವೆ. ಕಟ್ಟಡವು ಹಠಾತ್ತನೆ ಕುಸಿದಿದೆ. ಮೂರು ಮೃತದೇಹಗಳನ್ನು ಪತ್ತೆ ಮಾಡಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿ ರಕ್ಷಣಾ … Continued