ನದಿ ಜೋಡಣೆ ಯೋಜನೆ ವಿರೋಧಿಸಿ ಯಲ್ಲಾಪುರದಲ್ಲಿ ಬೃಹತ್‌ ಪ್ರತಿಭಟನೆ : ಜನಪ್ರತಿನಿಧಿಗಳ ಕಾರ್ಯಕ್ರಮ, ಚುನಾವಣೆ ಬಹಿಷ್ಕಾರದ ಎಚ್ಚರಿಕೆ

 ಯಲ್ಲಾಪುರ: ಬೇಡ್ತಿ-ವರದಾ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಗಳನ್ನು ಕೈಬಿಡದಿದ್ದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಚಿವರು, ಜನಪ್ರತಿನಿಧಿಗಳ ಸಾರ್ವಜನಿಕ ಕಾರ್ಯಕ್ರಮಗಳನ್ನು ಬಹಿಷ್ಕರಿಸುವುದರ ಜೊತೆಗೆ, ಮುಂಬರುವ ಸಾರ್ವತ್ರಿಕ ಚುನಾವಣೆಗಳಲ್ಲೂ ಮತದಾನ ಬಹಿಷ್ಕರಿಸುವಂತಹ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕಾಗುತ್ತದೆ ಎಂದು ಉತ್ತರ ಕನ್ನಡ ಜಿಲ್ಲೆಯ ಜನತೆ ಎಚ್ಚರಿಕೆ ನೀಡಿದ್ದಾರೆ. ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಹಾಗೂ ಯಲ್ಲಾಪುರ ರಸ್ತೆ … Continued