ಅಂಬಾನಿ ನಿವಾಸದ ಬಳಿ ಸ್ಫೋಟಕ ತುಂಬಿದ್ದ ವಾಹನ ಪತ್ತೆ ಪ್ರಕರಣ: ಪೊಲೀಸ್‌ ಅಧಿಕಾರಿ ರಿಯಾಜ್‌ ಬಂಧಿಸಿದ ಎನ್‌ಐಎ

ಮುಂಬೈ: ಮುಕೇಶ್ ಅಂಬಾನಿ ನಿವಾಸದ ಬಳಿ ಸ್ಫೋಟಕ ತುಂಬಿದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಪೊಲೀಸ್‌ ಅಧಿಕಾರಿ ರಿಯಾಜ್‌ ಖಾಜಿ ಅವರನ್ನು ರಾಷ್ಟ್ರೀಯ ತನಿಖಾ ತಂಡ (ಎನ್‌ಐಎ) ಭಾನುವಾರ ಬಂಧಿಸಿದೆ. ಅಮಾನತುಗೊಂಡ ಪೊಲೀಸ್ ಅಧಿಕಾರಿ ಸಚಿನ್‌ ವಾಜೆ ಅವರಿಗೆ ರಿಯಾಜ್‌ ಸಹಕಾರ ನೀಡಿದ್ದರುಎಂಬ ಕಾರಣಕ್ಕೆ ಬಂಧಿಸಲಾಗಿದೆ ಎಂದು ಎನ್‌ಐಎ ಹೇಳಿದೆ. ಉದ್ಯಮಿ ಮುಕೇಶ್ ಅಂಬಾನಿ … Continued

ಹಿರೆನ್‌ ಸಾವು: ಮಿಥಿ ನದಿ ಸೇತುವೆಗೆ ಸಚಿನ್ ವಾಝೆ ಕರೆತಂದ ಎನ್ಐಎ, ಕಂಪ್ಯೂಟರ್ ಸಿಪಿಯು, ವಾಹನ ಸಂಖ್ಯೆ ಪ್ಲೇಟ್ ಪತ್ತೆ

ಮುಂಬೈ; ಮನ್ಸುಖ್ ಹಿರೆನ್ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಅಮಾನತುಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಝೆಯನ್ನು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನ ಮಿಥಿ ನದಿಯ ಸೇತುವೆಗೆ ಭಾನುವಾರ ಕರೆದೊಯ್ದರು. ಈ ಸಂದರ್ಭದಲ್ಲಿ ಈಜುಪಟುಗಳು ಕಂಪ್ಯೂಟರ್ ಸಿಪಿಯು, ವಾಹನದ ನಂಬರ್ ಪ್ಲೇಟ್ ಮತ್ತು ಇತರ ವಸ್ತುಗಳನ್ನು ನದಿಯಿಂದ ವಶಪಡಿಸಿಕೊಂಡಿದ್ದಾರೆ ಎಂದು … Continued

ಮಹಾ ಗೃಹ ಸಚಿವ ದೇಶ್​ಮುಖ್ ಪ್ರತಿ ತಿಂಗಳು 100 ಕೋಟಿ ಸಂಗ್ರಹಿಸಲು ವಾಜೆ ಮೇಲೆ ಒತ್ತಡ: ಪರಮ್‌ಬಿರ್‌ ಸಿಂಗ್ ಸ್ಫೋಟಕ ಆರೋಪ‌

ಮುಂಬೈ: ಇತ್ತೀಚೆಗಷ್ಟೇ ಮುಂಬೈ ಪೊಲೀಸ್‌ ಆಯುಕ್ತ ಹುದ್ದೆಯಿಂದ ವರ್ಗಾವಣೆಯಾಗಿದ್ದ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್, ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪರಮ್ ಬೀರ್ ಸಿಂಗ್ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರದಲ್ಲಿ ಈ ಆರೋಪಗಳನ್ನು ಮಾಡಿದ್ದಾರೆ. ಮುಂಬಯಿ ಪೊಲೀಸ್ ಅಪರಾಧ ವಿಭಾಗದ … Continued

ವಾಜೆ ಬಳಿ ಇದ್ದ ಐಷಾರಾಮಿ ಕಾರು ಶಿವಸೇನೆ ಮುಖಂಡನಿಗೆ ಸೇರಿದ್ದು..!

ಮುಂಬೈ: ಉದ್ಯಮಿ ಮುಖೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ತುಂಬಿದ ವಾಹನ ನಿಲ್ಲಿಸಿದ್ದ ಆರೋಪದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಬಂಧಿಸಿರುವ ಸಚಿನ್ ವಾಜೆ ಅವರಿಂದ ವಶಪಡಿಸಿಕೊಂಡಿರುವ ಎರಡು ಐಷಾರಾಮಿ ಕಾರುಗಳು ಶಿವಸೇನೆ ಮುಖಂಡರಿಗೆ ಸೇರಿದ್ದು ಎಂಬುದು ತನಿಖೆಯಿಂದ ಬೆಳಕಿಗೆ ಬಂದಿದೆ. ವಾಜೆ ಅವರಿಂದ ಮತ್ತೆರಡು ಐಷಾರಾಮಿ ಕಾರು ವಶಪಡಿಸಿಳ್ಳಲಾಗಿದ್ದು, ಅವರಿಂದ ಅಪಾರ ಬೆಲೆ ಬಾಳುವ … Continued

ಆಂಟಿಲಿಯಾ ಬಳಿ ಎಸ್‌ಯುವಿಯಲ್ಲಿ ಸ್ಫೋಟಕ ಪತ್ತೆ ಪ್ರಕರಣ: ಪೊಲೀಸ್‌ ಅಧಿಕಾರಿ ಸಚಿನ್ ವಾಝೆ ಮಾ.25ರ ವರೆಗೆ ಎನ್‌ಐಎ ಕಸ್ಟಡಿಗೆ

ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಅವರ ಮುಂಬೈ ನಿವಾಸದ ಬಳಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ನ್ಯಾಯಾಲಯ ಮಾರ್ಚ್ 25ರವರೆಗೂ ರಾಷ್ಟ್ರೀಯ ತನಿಖಾ ದಳದ (ಎನ್ವ‌ಐಎ)ಶಕ್ಕೆ ನೀಡಿದೆ. ಶನಿವಾರ ಮಧ್ಯರಾತ್ರಿ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. … Continued