ನ್ಯಾಯಾಧೀಶರ ನೇಮಕಾತಿ ಸಂಬಂಧಿಸಿ ಮಾಧ್ಯಮಗಳ ಊಹಾತ್ಮಕ ವರದಿ ದುರದೃಷ್ಟಕರ: ಸಿಜೆಐ ಅಸಮಾಧಾನ

ನವದೆಹಲಿ: ಹೈಕೋರ್ಟ್ ನ್ಯಾಯಾಧೀಶರಿಗೆ ಬಡ್ತಿ ನೀಡಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಿಸುವ ಬಗ್ಗೆ ಕೊಲಿಜಿಯಂ ಸಭೆ ಸೇರಿ ಶಿಫಾರಸು ಮಾಡಿದೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಸುದ್ದಿ ಕೇವಲ ಊಹಾಪೋಹವಾಗಿದ್ದು, ತೀರಾ ದುರದೃಷ್ಟಕರ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಹೇಳಿದ್ದಾರೆ. ನ್ಯಾಯಾಧೀಶರ ನೇಮಕಾತಿ ಪ್ರಕ್ರಿಯೆಯು ಪವಿತ್ರವಾದುದಾಗಿದ್ದು ಅದಕ್ಕೆ ಅದರದ್ದೇ ಆದ ಘನತೆಯಿದೆ. … Continued