‘ಅಜೇಯ ಬೆಂಕಿಯ ಗೋಡೆ’: ಆಪರೇಷನ್ ಸಿಂಧೂರದ ಹೊಸ ವೀಡಿಯೊ ಹಂಚಿಕೊಂಡ ಭಾರತೀಯ ಸೇನೆ | ವೀಕ್ಷಿಸಿ

ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ ಈ ತಿಂಗಳ ಆರಂಭದಲ್ಲಿ ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿನ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ನಡೆದ ಭಾರತದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯ ಹೊಸ ವೀಡಿಯೊವನ್ನು ಭಾರತೀಯ ಸೇನೆ ಭಾನುವಾರ ಹಂಚಿಕೊಂಡಿದೆ. ಸೇನೆಯ ವೆಸ್ಟರ್ನ್ ಕಮಾಂಡ್ ಪೋಸ್ಟ್ ಮಾಡಿದ ವೀಡಿಯೊದಲ್ಲಿ “ಶತ್ರು ಕ್ಷಿಪಣಿಗಳು ತಟಸ್ಥಗೊಳಿಸಲ್ಪಟ್ಟವು…ಭಾರತೀಯ ಸೇನೆ … Continued

ಸೇನೆ ಬರ್ಲಿ ನೋಡ್ಕೊಳ್ತೇನೆ..; ಎನ್‌ಕೌಂಟರಿನಲ್ಲಿ ಸಾಯುವ ಸ್ವಲ್ಪ ಮೊದಲು ತಾಯಿ ಜೊತೆ ಭಯೋತ್ಪಾದಕ ವೀಡಿಯೊ ಕರೆಯಲ್ಲಿ ಮಾತನಾಡಿದ ದೃಶ್ಯ ವೈರಲ್‌…

ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ಅಮೀರ್ ನಜೀರ್ ವಾನಿ ಮತ್ತು ಆತನ ತಾಯಿಯ ನಡುವಿನ ಮಾತುಕತೆಯನ್ನು ತೋರಿಸುವ ವೀಡಿಯೊ ಕ್ಲಿಪ್ ಹೊರಬಿದ್ದಿದೆ. ಮಾತುಕತೆಯ ಸಮಯದಲ್ಲಿ ತಾಯಿ ತನ್ನ ಮಗನಿಗೆ ಭದ್ರತಾ ಪಡೆಗಳಿಗೆ ಶರಣಾಗುವಂತೆ ಬೇಡಿಕೊಂಡಿದ್ದಾಳೆ. ಗುರುವಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ವಾನಿ ಹತನಾಗುವ ಸ್ವಲ್ಪ ಸಮಯದ ಮೊದಲು ವೀಡಿಯೊ ಕರೆ ಮೂಲಕ … Continued

ನೀವು ಭಾರತದಲ್ಲಿ ಆಪಲ್ ಸಾಧನ ಉತ್ಪಾದನೆ ಮಾಡ್ಬೇಡಿ..; ಆಪಲ್ ಸಿಇಒಗೆ ಡೊನಾಲ್ಡ್ ಟ್ರಂಪ್ ಒತ್ತಡ : ಅಮೆರಿಕ ವರಸೆ ಬದಲಿಸಿದ್ದು ಯಾಕೆ..?

ದೋಹಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಆಪಲ್ ಸಿಇಒ ಟಿಮ್ ಕುಕ್ ಅವರ ಜೊತೆ ನೇರ ಸಂಭಾಷಣೆ ನಡೆಸಿದ್ದು, ಭಾರತೀಯ ಮಾರುಕಟ್ಟೆಗೆ ಸೇವೆ ಸಲ್ಲಿಸುವ ಉದ್ದೇಶವನ್ನು ಹೊರತುಪಡಿಸಿ, ಭಾರತದಲ್ಲಿ ಆಪಲ್ ಉತ್ಪಾದನಾ ಹೆಜ್ಜೆಗುರುತನ್ನು ವಿಸ್ತರಿಸುವುದು ಬೇಡ ಎಂದು ಹೇಳಿದ್ದಾಗಿ ತಿಳಿಸಿದ್ದಾರೆ. “ಭಾರತದಲ್ಲಿ ನೀವು ನಿರ್ಮಾಣ ಮಾಡುವುದರ ಬಗ್ಗೆ ನಮಗೆ ಆಸಕ್ತಿ ಇಲ್ಲ, ಅವರು … Continued

ಹಣಕ್ಕಾಗಿ ಆನಂದ ಗುರೂಜಿಗೆ ಬ್ಲ್ಯಾಕ್ ಮೇಲ್ ಆರೋಪ ; ಇಬ್ಬರ ವಿರುದ್ಧ ದೂರು ದಾಖಲು

ಬೆಂಗಳೂರು: ಖ್ಯಾತ ಜ್ಯೋತಿಷಿ ಆನಂದ ಗುರೂಜಿ ಅವರಿಗೆ ಬ್ಲಾಕ್ ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ   ಎಂಬ ಮಾಹಿತಿ ಲಭ್ಯವಾಗಿದೆ. ಆನಂದ ಗುರೂಜಿ ವಿಡಿಯೋ ಮತ್ತು ಜಮೀನು ಖರೀದಿಯ ಬಗ್ಗೆ ಕೋರ್ಟ್‌ನಿಂದ ತಡೆಯಾಜ್ಞೆ ತಂದರೂ ಬೆದರಿಕೆ ಹಾಕಲಾಗಿದೆ. ಅವರ ಕಾರು ಅಡ್ಡಗಟ್ಟಿ ಅವಾಚ್ಯ … Continued

ವೀಡಿಯೊ..| ಕಾಶ್ಮೀರ ; ಪುಲ್ವಾಮಾ ಎನ್ಕೌಂಟರಿನಲ್ಲಿ ಮೂವರು ಭಯೋತ್ಪಾದಕರ ಹತ್ಯೆ ; ಒಬ್ಬನ ಕೊನೆಯ ಕ್ಷಣ ಡ್ರೋನ್ ನಲ್ಲಿ ಸೆರೆ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ನಾಡರ್, ಟ್ರಾಲ್ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ನಡೆದ ಎನ್ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹತರಾದ ಭಯೋತ್ಪಾದಕರನ್ನು ಆಸಿಫ್ ಅಹ್ಮದ್ ಶೇಖ್, ಅಮೀರ್ ನಜೀರ್ ವಾನಿ ಮತ್ತು ಯಾವರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದ್ದು, ಅವರು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಜೊತೆ … Continued

ವೀಡಿಯೊ…| ಪಿಒಕೆ ಹಿಂಪಡೆವ ಬಗ್ಗೆ ಮಾತ್ರ ಮಾತುಕತೆ, ಪರಮಾಣು ಬ್ಲ್ಯಾಕ್‌ ಮೇಲ್‌ ಸಹಿಸಲ್ಲ..ಪಾಕಿಸ್ತಾನದ ಹೃದಯಕ್ಕೆ ಹೊಡೆದಿದ್ದೇವೆ..ಮಿಲಿಟರಿ ಕ್ರಮ ಅಮಾನತು ಅಷ್ಟೆ ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ

ನವದೆಹಲಿ: ಭಾರತದ ಸೇನೆಯ ಆಪರೇಷನ್ ಸಿಂಧೂರ ಕುರಿತು ಸೋಮವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತ-ಪಾಕಿಸ್ತಾನ ಉದ್ವಿಗ್ನತೆಯ ಮಧ್ಯೆ ಯಾವುದೇ ರೀತಿಯ ಪರಮಾಣು ಬ್ಲ್ಯಾಕ್‌ ಮೇಲ್‌ ಅನ್ನು ಭಾರತ ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಭಯೋತ್ಪಾದನೆ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಭಾರತಕ್ಕೆ ಮರಳಿಸುವ ಕುರಿತು ಮಾತ್ರ ಪಾಕಿಸ್ತಾನದ ಜೊತೆ ಮಾತುಕತೆ ನಡೆಸಲಾಗುವುದು … Continued

ಆಪರೇಶನ್‌ ಸಿಂಧೂರ | ಪಾಕಿಸ್ತಾನದ ಮಿರಾಜ್ ಯುದ್ಧ ವಿಮಾನ, ಚೀನಾ ನಿರ್ಮಿತ ಏರ್ ಡಿಫೆನ್ಸ್ ಧ್ವಂಸ : ಸೇನೆಯಿಂದ ವೀಡಿಯೊ ಬಿಡುಗಡೆ

ನವದೆಹಲಿ: ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವಿಗೀಡಾದ ಘಟನೆಗೆ ಪ್ರತಿಯಾಗಿ ಆರಂಭಿಸಲಾದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಯಲ್ಲಿ ಪಾಕಿಸ್ತಾನದ ಮಿರಾಜ್ ಯುದ್ಧ ವಿಮಾನವನ್ನು ಹೊಡೆದುರುಳಿಸಿರುವುದಾಗಿ ಭಾರತ ಸೋಮವಾರ ತಿಳಿಸಿದೆ. ಭಾರತೀಯ ಸೇನೆಯು X ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ ಪಾಕಿಸ್ತಾನದ ಮಿರಾಜ್ ಜೆಟ್‌ನ ತುಂಡಾಗಿ ಬಿದ್ದಿರುವ ಅವಶೇಷಗಳು ಕಂಡುಬಂದಿವೆ. ಪಾಕಿಸ್ತಾನದ … Continued

ವೀಡಿಯೊ…| ಭಾರತದ ದಾಳಿಯಲ್ಲಿ ಸತ್ತ ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನ ಸೇನೆ ಭಾಗಿ ; ಉಗ್ರರ ಶವಗಳ ಮೇಲೆ ಪಾಕ್‌ ಧ್ವಜ…!

ಲಾಹೋರ್‌: ಪಹಲ್ಗಾಮ್‌ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಕ್ಯಾಂಪ್‌ಗಳ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂಧೂರ(Operation Sindoor) ಹೆಸರಿನ ವಾಯು ದಾಳಿಯಲ್ಲಿ ಹತರಾದ ಹಲವಾರು ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಬುಧವಾರ ಪಾಕಿಸ್ತಾನ ಸೇನಾ ಸಿಬ್ಬಂದಿ ಮತ್ತು ನಿಷೇಧಿತ ಹಫೀಜ್ ಸಯೀದ್ ಜಮಾತ್-ಉದ್-ದವಾ (JDU) ಸದಸ್ಯರು ಭಾಗವಹಿಸಿದ್ದರು. ಭಾರತದ ಸಶಸ್ತ್ರ ಪಡೆಗಳು … Continued

ಕೂದಲು ಹಿಡಿದು ಜಗ್ಗಾಡಿ ಹೊಡೆದಾಡಿಕೊಂಡ ಪ್ರಾಂಶುಪಾಲೆ-ಗ್ರಂಥಪಾಲಕಿ ; ವೀಡಿಯೊ ವೈರಲ್

ಪ್ರಾಂಶುಪಾಲರು ಮತ್ತು ಗ್ರಂಥಪಾಲಕರ ನಡುವೆ ವಾಗ್ವಾದದ ನಂತರ ಇಬ್ಬರ ಮಧ್ಯೆ ಹೊಡೆದಾಟಕ್ಕೆ ಕಾರಣವಾದ ಘಟನೆ ಮಧ್ಯಪ್ರದೇಶದ ಶಾಲೆಯೊಂದರಲ್ಲಿ ನಡೆದಿದೆ. ಅವರ ಜಗಳದ ವೀಡಿಯೊ ವೈರಲ್‌ ಆದ ನಂತರ ಇಬ್ಬರನ್ನೂ ಕೆಲಸದಿಂದ ವಜಾಗೊಳಿಸಲಾಗಿದೆ. ಅವರು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ. ಭೋಪಾಲ್‌ನಿಂದ ಸುಮಾರು 300 ಕಿ.ಮೀ ದೂರದಲ್ಲಿರುವ ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿರುವ ಏಕಲವ್ಯ ಆದರ್ಶ ಶಾಲೆಯಲ್ಲಿ ಈ … Continued

ವೀಡಿಯೊ..| ಭಯೋತ್ಪಾದಕರಿಗೆ ಆಹಾರ-ಆಶ್ರಯ ನೀಡಿದ್ದ ಆರೋಪಿ ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿ ಮುಳುಗಿ ಸಾವು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಲ್ಗಮ್ ಜಿಲ್ಲೆಯಲ್ಲಿ ಭಯೋತ್ಪಾದಕರಿಗೆ ಆಹಾರ ಮತ್ತು ಆಶ್ರಯ ನೀಡಿದ್ದ ವ್ಯಕ್ತಿಯೊಬ್ಬ ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳುವಾಗ ನದಿಗೆ ಹಾರಿದ ನಂತರ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು 23 ವರ್ಷದ ಇಮ್ತಿಯಾಜ್ ಅಹ್ಮದ್ ಮಗ್ರೆ ಎಂದು ಗುರುತಿಸಲಾಗಿದ್ದು, ಭಯೋತ್ಪಾದಕ ಸಂಘಟನೆ ಎಲ್‌ಇಟಿಗಾಗಿ ಕೆಲಸ ಮಾಡುತ್ತಿದ್ದ ಆತನನ್ನು ಬಂಧಿಸಿದ ನಂತರ, … Continued