5.25 ಕೋಟಿ ರೂ. ವಿಮೆ ಹಣ ಪಡೆಯಲು ವ್ಯಕ್ತಿಯ ಕೊಲೆ: ಅಪಘಾತವೆಂದು ಬಿಂಬಿಸಿ ಹಣ ಪಡೆಯಲು ಯತ್ನಿಸಿದ ಆರೋಪಿಗಳ​ ಬಂಧನ

ಹೊಸಪೇಟೆ : ವಿಜಯ ನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಇನ್ಶೂರೆನ್ಸ್​​​ ಹಣಕ್ಕಾಗಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ, ಅದನ್ನು ಅಪಘಾತ ಎಂದು ಬಿಂಬಿಸಲು ಪ್ರಯತ್ನಪಟ್ಟ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹೊಸಪೇಟೆ ಹೊರವಲಯದಲ್ಲಿ ವ್ಯಕ್ತಿಯೊಬ್ಬನನ್ನು ಅಪಘಾತದಲ್ಲಿ ಮೃತಪಟ್ಟಂತೆ ತೋರಿಸಿ, 5.25 ಕೋಟಿ ರೂ. ಇನ್ಶೂರೆನ್ಸ್ ಹಣ ಲಪಟಾಯಿಸುವ ಯತ್ನವನ್ನು ಮಾಡಿದ 6 ಮಂದಿಯನ್ನು ಪೊಲೀಸರು … Continued

ಹೊಸಪೇಟೆ : ಅಡುಗೆ ಅನಿಲ ಸಿಲಿಂಡರ್ ಸ್ಫೋಟ, 8 ಮಂದಿಗೆ ಗಾಯ

ಹೊಸಪೇಟೆ : ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ 8 ಮಂದಿ ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಗಾದಿಗನೂರಿನಲ್ಲಿ ಇಂದು, ಶನಿವಾರ ಬೆಳಗ್ಗೆ ನಡೆದಿದೆ ಎಂದು ವರದಿಯಾಗಿದೆ. ಸ್ಫೋಟದ ತೀವ್ರತೆಗೆ ಮನೆ ಕುಸಿದು ಬಿದ್ದಿದೆ. ಮನೆಯ ಯಜಮಾನಿಯ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಬೆಳಗ್ಗಿನ ಜಾವ ಮನೆಯಲ್ಲಿ ಎಲ್ಲರೂ ಮಲಗಿರುವಾಗ … Continued

ತಮ್ಮನನ್ನು ರಕ್ಷಿಸಲು ಹೋದ ಮೂವರು ಸೋದರಿಯರು ಸೇರಿ ನಾಲ್ವರು ಕೆರೆ ಪಾಲು

ವಿಜಯನಗರ: ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಚನ್ನಹಳ್ಳಿ ತಾಂಡಾದ ಬಳಿಯಿರುವ ಕೆರೆಯೊಂದರಲ್ಲಿ ಮುಳುಗಿ ನಾಲ್ವರು ಮಕ್ಕಳು ಮೃತಪಟ್ಟ ಘಟನೆ ನಡೆದ ಬಗ್ಗೆ ವರದಿಯಾಗಿದೆ. . ಹರಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತ ಮಕ್ಕಳೆಲ್ಲ ಒಂದೇ ಕುಟುಂಬದವರಾಗಿದ್ದಾರೆ ಎಂದು ಹೇಳಲಾಗಿದೆ. ಮೃತ ಮಕ್ಕಳನ್ನು ಅಭಿ (13), ಅಶ್ವಿನಿ (14), ಕಾವೇರಿ (18) ಅಪೂರ್ವಾ (18) … Continued