ಬಿಜೆಪಿ ಶಾಸಕ ಯತ್ನಾಳ ವಿರುದ್ಧ ದೂರು ದಾಖಲು

ವಿಜಯಪುರ : ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಅವಹೇಳನಕಾರಿ ಪದಬಳಸಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಇತರರ ವಿರುದ್ಧ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಅಕ್ಟೋಬರ್ ೧೫ರಂದು ನಡೆದ ‘ವಕ್ಫ್ ಹಠಾವೋ ದೇಶ ಬಚಾವೋ’ … Continued

ಏಪ್ರಿಲ್‌ 28, 29 ರಂದು ಉತ್ತರ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಭರ್ಜರಿ ಪ್ರಚಾರ : ಬೆಳಗಾವಿಯಲ್ಲಿ ತಂಗುವ ಸಾಧ್ಯತೆ

ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಚುನಾವಣಾ ಪ್ರಚಾರದಲ್ಲಿ ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ ವ್ಯಾಪ್ತಿಯ ಲೋಕಸಭಾ ಮತಕ್ಷೇತ್ರಗಳಲ್ಲಿ ಬಿರುಸಿನ ಚುನಾವಣಾ ಪ್ರಚಾರಕ್ಕೆ ಮುಂದಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್​ 28 ಮತ್ತು 29 ಎರಡೂ ದಿನಗಳ ಕಾಲ ಕರ್ನಾಟಕದಲ್ಲಿ ಮತಯಾಚಿಸಲಿದ್ದಾರೆ. ಚುನಾವಣಾ ಪ್ರಚಾರ ಸಂದರ್ಭದಲ್ಲಿ ಅವರು ಬೆಳಗಾವಿಯಲ್ಲೇ ತಂಗುವ ಸಾಧ್ಯತೆ ಇದೆ. … Continued

ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

ಬೆಂಗಳೂರು: ರಾಜ್ಯದ ವಿವಿಧ ಪ್ರದೇಶಗಳಲ್ಲಿ ಗುರುವಾರ ಬಿರುಗಾಳಿ ಸಹಿತ ಮಳೆಯಾಗಿದ್ದು, ಸಿಡಲಿಗೆ ಓರ್ವ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಹಲವೆಡೆ ಜಾನುವಾರುಗಳು ಪ್ರಾಣಕಳೆದುಕೊಂಡಿದೆ. ಅಲ್ಲದೆ, ಗಾಳಿಮಳೆಯಿಂದಾಗಿ ವಿಜಯಪುರ ನಗರದಲ್ಲಿರುವ ಐತಿಹಾಸಿಕ ಮೆಹತರ್ ಮಹಲ್ ಸ್ಮಾರಕಕ್ಕೆ ಹಾನಿಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಗುರುವಾರ ಸಂಜೆ ಗುಡುಗು-ಸಿಡಿಲ ಅಬ್ಬರದೊಂದಿಗೆ ಭಾರೀ ಗಾಳಿ ಮಳೆ ಸುರಿದಿದೆ. ವಿಜಯಪುರ ನಗರದಲ್ಲಿರುವ ಐತಿಹಾಸಿಕ ಮೆಹತರ್ ಮಹಲ್ … Continued

ಇಂಡಿ: ಆಟ ಆಡುವಾಗ ಆಯತಪ್ಪಿ ಕೊಳವೆ ಬಾವಿಗೆ ಬಿದ್ದ ಎರಡು ವರ್ಷದ ಪುಟಾಣಿ

ವಿಜಯಪುರ : ಎರಡು ವರ್ಷದ ಮಗುವೊಂದು ತೆರೆದ ಕೊಳವೆ ಬಾವಿಗೆ ಬಿದ್ದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸತೀಶ ಮತ್ತು ಪೂಜಾ ದಂಪತಿಯ ಮಗ ಸಾತ್ವಿಕ ಮುಜಗೊಂಡ ಎಂಬ ಎರಡು ವರ್ಷದ ಬಾಲಕ ಆಟವಾಡಲು ಹೋಗಿದ್ದ ವೇಳೆ ಕೊಳವೆ ಬಾವಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಸಾತ್ವಿಕ ಬುಧವಾರ (ಏಪ್ರಿಲ್ … Continued

ವಿಜಯಪುರ: ರಸ್ತೆ ಬದಿ ಕುಳಿತಿದ್ದವರ ಮೇಲೆ ವಾಹನ ಹರಿದು ನಾಲ್ವರು ಸ್ಥಳದಲ್ಲೇ ಸಾವು

ವಿಜಯಪುರ: ನಗರದ ಹೊರವಲಯದ ಸೋಲಾಪುರ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 52ರ ವಿಜಯಪುರ ಟೋಲ್ ನಾಕಾ ಬಳಿ ಟೋಲ್‌ಗೇಟ್‌ನ ಟ್ರಕ್‌ ಬೇ ಬಳಿ ಡಿವೈಡರ್‌ ಮೇಲೆ ಕೂತಿದ್ದ ನಾಲ್ವರ ಮೇಲೆ ಅಪರಿಚಿತ ವಾಹನ ಹರಿದು ನಾಲ್ವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ವಿಜಯಪುರದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ವಿಜಯಪುರ ವಜ್ರಹನುಮಾನ ನಗರ ನಿವಾಸಿಗಳಾದ ಪ್ರವೀಣ ಪಾಟೀಲ(31) … Continued

ಜನರತ್ತ ಕೈ ಬಿಸಿ ಕಾರು ಹತ್ತುವ ವೇಳೆ ಕುಸಿದ ಸಿದ್ದರಾಮಯ್ಯ: ತಕ್ಷಣ ವೈದ್ಯರಿಂದ ಉಪಚಾರ

ವಿಜಯನಗರ: ವಿಜಯನಗರ ಜಿಲ್ಲೆಯ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಾ. ಶ್ರೀನಿವಾಸ ಅವರ ಪರವಾಗಿ ಶನಿವಾರ ಪ್ರಚಾರಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರು ಏರುವಾಗ ಕುಸಿದ ಘಟನೆ ನಡೆದಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ಪ್ರಚಾರದ ಹೊಣೆ ಹೊತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಅವರು ಇಂದು,ಶನಿವಾರ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರಕ್ಕೆ ತೆರಳಿದ … Continued

ನಾಳೆ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನಾಳೆ, ಶನಿವಾರ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಬಿಜೆಪಿಯ ವಿಜಯಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸಿರುವ ಬಿಜೆಪಿ, ನಾಳೆಯಿಂದ ವಿಜಯ ಸಂಕಲ್ಪ ಅಭಿಯಾನ ಆರಂಭಿಸುತ್ತಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ವಿಜಯಪುರದ ನಾಗಠಾಣಾ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಜಯ … Continued

ಕೆಎಸ್​ಆರ್​ಟಿಸಿ ಬಸ್​, ಎರಡು ಕಾರುಗಳ ನಡುವೆ ಡಿಕ್ಕಿ: ಒಂದೇ ಕುಟುಂಬದ ಮೂವರು ಸಾವು

ವಿಜಯಪುರ: ಗಣೇಶ ಚತುರ್ಥಿಯ ದಿನವಾದ  ಬುಧವಾರ (ಆಗಸ್ಟ್‌ 31) ಸಂಜೆ  ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಕುಬಕಡ್ಡಿ ಕ್ರಾಸ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಬಾಣಂತಿ ಹಾಗೂ ಮೂರು ತಿಂಗಳು ಮಗು ಸೇರಿ ಮೂವರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕಲಬುರಗಿ ಜಿಲ್ಲೆಯ ಸುನಂದಾ ಮಲ್ಲಿಕಾರ್ಜುನ ಕಲಶೆಟ್ಟಿ (25), … Continued

ವಿಜಯಪುರದಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ ಸಂಭವಿಸಿದೆ. ಭೂ ಕಂಪನದ ಅನುಭವಕ್ಕೆ ಬೆಚ್ಚಿದ ಜನರು ಮನೆಯಿಂದ ಹೊರಗೆ ಓಡಿಬಂದಿದ್ದಾರೆ ಎಂದು ಹೇಳಲಾಗಿದೆ. ವಿಜಯಪುರ ನಗರದ ರೇಲ್ವೇ ಸ್ಟೇಷನ್, ಅಶುತೋಶಿ ನಗರ, ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ರಾತ್ರಿ 8.15 ನಿಮಿಷ ಸುಮಾರಿಗೆ ಇಲ್ಲಿ ಭೂಕಂಪನದ ಅನುಭವವಾಗಿದೆ ಎಂದು ಜನರು ಹೇಳಿದ್ದಾರೆ. ಆಲಮಟ್ಟಿಯ ರಿಕ್ಟರ್ ಮಾಪಕದಲ್ಲಿ 3.5 ರಷ್ಟು … Continued

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ: ಬೆಳ್ಳಂಬೆಳಗ್ಗೆ ಮನೆಯಿಂದ ಹೊರಗೆ ಓಡಿದ ಜನ

ವಿಜಯಪುರ: ಶನಿವಾರ ಬೆಳ್ಳಂಬೆಳಗ್ಗೆ ವಿಜಯಪುರ ಜಿಲ್ಲೆಯಲ್ಲಿ ಇಂದು, ಶನಿವಾರ ಮತ್ತೊಮ್ಮೆ ಭೂಮಿ ಕಂಪಿಸಿದ ಅನುಭವವಾಗಿದೆ. ಬೆಳ್ಳಂಬೆಳಗ್ಗೆ ಭಾರೀ ಶಬ್ದದೊಂದಿಗೆ 4-5 ಸೆಕೆಂಡ್​ಗಳ‌ ಕಾಲ ಭೂಮಿ ಕಂಪಿಸಿದ್ದು, ಆಗಷ್ಟೇ ನಿದ್ದೆಯಿಂದ ಏಳುತ್ತಿದ್ದ ಜನರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಶನಿವಾರ ಬೆಳಿಗ್ಗೆ 6:22ಕ್ಕೆ ಕಾಲ ಭೂಮಿ ಕಂಪಿಸಿದೆ. ಜಯಪುರದ ನಗರದ ರೇಲ್ವೆ ಸ್ಟೇಷನ್ ಏರಿಯಾ, ಗೋಳಗುಮ್ಮ … Continued