ವಿಜಯಪುರದಲ್ಲಿ ಹಾಡಹಗಲೇ ಗುಂಡಿನ ಸದ್ದು: ಮಹಾನಗರ ಪಾಲಿಕೆಯ ಸದಸ್ಯೆಯ ಪತಿಯ ಹತ್ಯೆ

ವಿಜಯಪುರ : ವಿಜಯಪುರ ನಗರದಲ್ಲಿ ಹಾಡುಹಗಲೇ ಗುಂಡಿನ ದಾಳಿ ನಡೆದಿದೆ. ಮಹಿಳಾ ಪಾಲಿಕೆಯ ಮಹಿಳಾ ಸದಸ್ಯರೊಬ್ಬರ ಪತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ರೌಡಿ ಶೀಟರ್ ಆಗಿದ್ದ ಹೈದರ್ ಅಲಿ ನದಾಫ್ ಎಂಬವರ ಮೇಲೆ ಏಕಾಏಕಿ ಗುಂಡಿನ ದಾಳಿ‌ ನಡೆದ ಪರಿಣಾಮ ಹೈದರ್ ನದಾಫ್ ಸ್ಥಳದಲ್ಲಿಯೇ ಮೃತಪಟ್ಟದ್ದಾನೆ ಎಂದು ವರದಿಯಾಗಿದೆ. ವಿಜಯಪುರ ನಗರದಲ್ಲಿ ಚಾಂದ್‌ ಪುರ ಕಾಲೋನಿ … Continued

ಪ್ರಚಾರ ಸಭೆಯಲ್ಲಿ ಯುವಕನ ಕಪಾಳಕ್ಕೆ ಬಾರಿಸಿದ ಎಂ.ಬಿ. ಪಾಟೀಲ…!

ವಿಜಯಪುರ: ರಾಜ್ಯದಲ್ಲಿ ಮೇ 10ರಂದು ನಡೆಯುವ 2023ರ ವಿಧಾನಸಭೆ ಚುನಾವಣೆ ಪ್ರಚಾರ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಆದರೆ, ಪ್ರಚಾರದ ವೇಳೆ ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಯುವಕನಿಗೆ ಕಪಾಳಮೋಕ್ಷ ಮಾಡಿದ ಘಟನೆ ವರದಿಯಾಗಿದೆ. ಮಾಜಿ ಸಚಿವ ಮತ್ತು ಬಬಲೇಶ್ವರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ. ಪಾಟೀಲ ಅವರು ಯುವಕನ ಕೆನ್ನೆಗೆ ಬಾರಿಸಿದ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರದ … Continued

ಮೂವರು ಮಕ್ಕಳನ್ನು ನೀರಿನ ಸಂಪ್‌ ಗೆ ಎಸೆದು ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ

ವಿಜಯಪುರ : ಜಿಲ್ಲೆಯ ತಿಕೋಟಾ ತಾಲೂಕಿನ ಜಾಲಗೇರಿ ಗ್ರಾಮದ ಸಮೀಪ ವಿಠ್ಠಲವಾಡಿ ತಾಂಡಾದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮೂವರು ಮಕ್ಕಳನ್ನು ನೀರಿನ ಸಂಪ್‌ಗೆ ಎಸೆದು ತಾನೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಇಂದು, ಭಾನುವಾರ ಬೆಳಗ್ಗೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ (ತಾಯಿ)ಯನ್ನು ಗೀತಾ ರಾಮು ಚೌವ್ಹಾಣ (32), ಹಾಗೂ ಮಕ್ಕಳನ್ನು ಸೃಷ್ಟಿ (6) … Continued

ಸಿಂದಗಿ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿ ಶಿವಾನಂದ ಪಾಟೀಲ ಹೃದಯಾಘಾತದಿಂದ ನಿಧನ

ವಿಜಯಪುರ : ಸಿಂದಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಪಕ್ಷದ ಅಭ್ಯರ್ಥಿಯಾಗಿದ್ದ ಶಿವಾನಂದ ಪಾಟೀಲ ಶುಕ್ರವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಶನಿವಾರ ಟ್ವೀಟ್‌ ಮಾಡಿದ್ದಾರೆ. ಹೃದಯಾಘಾತಕ್ಕೆ ಒಳಗಾದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ಶುಕ್ರವಾರ ರಾತ್ರಿ ಅವರು ಮೃತಪಟ್ಟಿದ್ದಾರೆ. ಶಿವಾನಂದ ಪಾಟೀಲ ಅವರು ಪತ್ನಿ, ಪುತ್ರ … Continued

ನೀರಿನ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರು ಸಾವು

ವಿಜಯಪುರ: ನೀರಿನ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರು ಸಾವಿಗೀಡಾದ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಹುಣಿಶ್ಯಾಳ ಪಿ ಬಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರನ್ನು ರಮೇಶ (7), ಮಾಳಿಂಗರಾಯ (11) ಎಂದು ಗುರುತಿಸಲಾಗಿದೆ. ಈ ಇಬ್ಬರು ಬಾಲಕರು ಕೃಷಿ ಹೊಂಡದ ಹತ್ತಿರ ದನ ಮೇಯಿಸಲು ಹೋಗಿದ್ದ ವೇಳೆ, ನೀರು ಕುಡಿಯಲೆಂದು ಕೃಷಿ … Continued

ಕ್ರೂಸರ್-ಟ್ರ್ಯಾಕ್ಟರ್ ಡಿಕ್ಕಿ: ಇಬ್ಬರ ಸಾವು, 9 ಜನರಿಗೆ ಗಾಯ

ವಿಜಯಪುರ :ಅಕ್ಕಲಕೋಟೆಯ ಸ್ವಾಮಿ ಸಮರ್ಥ ಕ್ಷೇತ್ರಗೆ ತೆರಳುತ್ತಿದ್ದ ಅಥಣಿ ಮೂಲದವರಿಬ್ಬರು ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಭಯ್ಯಾಜಿ ಶಿಂಧೆ(50)ಮತ್ತು ಸುಮಿತ್ರಾ ಶಿಂಧೆ(45)ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ  ಧೂಳಖೇಡ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಂಬದಿಯಿಂದ ಕ್ರೂಸರ್ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಇವರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು 9 ಜನ ಗಂಭೀರ ಗಾಯಗೊಂಡಿದ್ದಾರೆ. ಕ್ರೂಸರ್ … Continued