ಕರ್ನಾಟಕ ಮತದಾರರ ಪಟ್ಟಿ ಪರಿಷ್ಕರಣೆ: 40 ಲಕ್ಷಕ್ಕೂ ಹೆಚ್ಚು ನೋಟಿಸ್‌ ಜಾರಿ, ಈವರೆಗೆ ಒಬ್ಬ ಮತದಾರನ ಹೆಸರೂ ಅಳಿಸಿಲ್ಲ ; ಅನ್ಬುಕುಮಾರ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ರಾಜ್ಯಾದ್ಯಂತ 40 ಲಕ್ಷಕ್ಕೂ ಹೆಚ್ಚು ಮತದಾರರಿಗೆ ನೋಟಿಸ್‌ಗಳನ್ನು ತಲುಪಿಸಲಾಗಿದೆ. ‘ನೋ ಮ್ಯಾಪಿಂಗ್‌’ (No Mapping) ಮತ್ತು ‘ಅಸಂಗತತೆ’ (Anomalies) ವಿಭಾಗಕ್ಕೆ ಸೇರಿದ ಮತದಾರರಿಗೆ ಈ ನೋಟಿಸ್‌ಗಳನ್ನು ನೀಡಲಾಗಿದೆ. ಅಕ್ಟೋಬರ್‌ 4ರವರೆಗೆ 91,278 ಫಾರಂ-7 ಅರ್ಜಿಗಳು ಸ್ವೀಕರಿಸಲಾಗಿದ್ದು, ಇದುವರೆಗೆ ಯಾವುದೇ ಮತದಾರರ ಹೆಸರನ್ನು ಕೇವಲ ಆಕ್ಷೇಪಣೆ … Continued

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ : 43.80 ಲಕ್ಷ ಮತದಾರರಿಗೆ ನೋಟಿಸ್‌ ನೀಡಲು ಚುನಾವಣಾ ಆಯೋಗ ಸಿದ್ಧತೆ

ಬೆಂಗಳೂರು : ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision—SIR) ಚುನಾವಣಾ ಪಟ್ಟಿಯ ಎರಡನೇ ಹಂತದಲ್ಲಿ 43,80,740 ನಾಗರಿಕರಿಗೆ ನೋಟಿಸ್ ಜಾರಿ ಮಾಡಿ ಅಗತ್ಯ ಮಾಹಿತಿ ಪಡೆಯಲು ಚುನಾವಣಾ ಆಯೋಗ ಮುಂದಾಗಿದೆ. ಈ ಪೈಕಿ ಬೆಂಗಳೂರಿನ ನಾಲ್ಕು ಜಿಲ್ಲೆಗಳಲ್ಲೇ 24,05,990 ಮಂದಿ ಇದ್ದಾರೆ. ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ (CEO) ಕಚೇರಿ … Continued

37 ವರ್ಷಗಳಿಂದ ಕಾಣೆಯಾಗಿದ್ದ ಮಗ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಪವಾಡದ ರೀತಿಯಲ್ಲಿ ಕುಟುಂಬದ ಜೊತೆ ಪುನರ್ಮಿಲನ..!

ಪುರೂಲಿಯಾ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದಾದ್ಯಂತ ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿರುವ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯು ಪುರೂಲಿಯಾದ ಪುಟ್ಟ ಗ್ರಾಮವೊಂದರಲ್ಲಿ ಅನಿರೀಕ್ಷಿತ ಸಂತೋಷದಾಯಕ ತಿರುವಿಗೆ ಕಾರಣವಾಗಿದೆ. ಸಾಮಾನ್ಯವಾಗಿ ಕೇವಲ ಕಾಗದಪತ್ರಗಳ ಕೆಲಸ ಎಂದು ಪರಿಗಣಿಸಲಾಗುವ ಈ ಪ್ರಕ್ರಿಯೆಯು, ಈ ಅಪರೂಪದ ನಿದರ್ಶನದಲ್ಲಿ, ಸುಮಾರು ನಾಲ್ಕು … Continued

ಮತಗಳ್ಳತನ : ರಾಹುಲ್ ಗಾಂಧಿ ಆರೋಪ ದ ಬಗ್ಗೆ ಎಸ್ಐಟಿ ತನಿಖೆ ಕೋರಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ಸೇರಿದಂತೆ ವಿವಿಧೆಡೆ ಮತದಾರರ ಪಟ್ಟಿ ತಿರುಚಿ ಅಕ್ರಮ ಎಸಗಲಾಗಿದೆ ಎಂದು ರಾಹುಲ್‌ ಗಾಂಧಿ ಅವರು ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸುಪ್ರೀಂ ಕೋರ್ಟ್ ಸೋಮವಾರ ವಜಾ ಮಾಡಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೊಯಮಲ್ಯ … Continued

ಸೆ.30ರೊಳಗೆ ಎಸ್‌ ಐ ಆರ್ ಜಾರಿಗೆ ಸಿದ್ಧರಾಗಿ : ಎಲ್ಲ ರಾಜ್ಯಗಳ ಚುನಾವಣಾಧಿಕಾರಿಗಳಿಗೆ ಚುನಾವಣಾ ಆಯೋಗ ಸೂಚನೆ

ನವದೆಹಲಿ: ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಆರಂಭಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಭಾರತದ ಚುನಾವಣಾ ಆಯೋಗ (ECI)ವು ಎಲ್ಲಾ ರಾಜ್ಯ ಚುನಾವಣಾಧಿಕಾರಿಗಳಿಗೆ ಸೆಪ್ಟೆಂಬರ್ 30ರೊಳಗೆ ಸಿದ್ಧತೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದೆ. ಈ ತಿಂಗಳ ಆರಂಭದಲ್ಲಿ ನವದೆಹಲಿಯಲ್ಲಿ ನಡೆದ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ (Chief Electoral Officers) … Continued