ಲೋಕಸಭೆ ಚುನಾವಣೆ 2024 : 2ನೇ ಹಂತದ 88 ಕ್ಷೇತ್ರಗಳಲ್ಲಿ 63% ಮತದಾನ

ನವದೆಹಲಿ : 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 88 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆದಿದ್ದು, ಇತ್ತೀಚಿನ ಮಾಹಿತಿ ಪ್ರಕಾರ ಶೇ.63ರಷ್ಟು ಮತದಾನವಾಗಿದೆ. ಸಂಜೆ 6ರ ನಂತರವೂ ಹಲವಡೆ ಮತದಾರರು ಮತದಾನ ಕೇಂದ್ರದಲ್ಲಿ ಸರತಿಯ ಸಾಲಿನಲ್ಲಿ ನಿಂತಿದ್ದು ಹೀಗಾಗಿ ಅಂತಿಮ ಮತದಾನದ ಪ್ರಮಾಣದಲ್ಲಿ ಸ್ವಲ್ಪ ಹೆಚ್ಚಳವಾಗಬಹುದಾಗಿದೆ. ಕೇರಳದಲ್ಲಿ 20, ಕರ್ನಾಟಕದಲ್ಲಿ 14, … Continued

ಲೋಕಸಭೆ ಚುನಾವಣೆ ಮೊದಲ ಹಂತದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ನವದೆಹಲಿ : ಏಪ್ರಿಲ್ 19 ರಂದು ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಮತದಾನ ನಡೆಯಲಿರುವ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರಿಕೆ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಬುಧವಾರ ಅಧಿಸೂಚನೆ ಹೊರಡಿಸಲಾಗಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು … Continued

ರಾಜ್ಯಸಭೆ ಚುನಾವಣೆ | ನನಗೆ ಅನಾರೋಗ್ಯ ಇದ್ದ ಕಾರಣ ಮತದಾನ ಮಾಡ್ಲಿಕ್ಕೆ ಆಗ್ಲಿಲ್ಲ ; ಶಿವರಾಮ ಹೆಬ್ಬಾರ

ಯಲ್ಲಾಪುರ: ‘ಅನಾರೋಗ್ಯದ ಕಾರಣಕ್ಕೆ ರಾಜ್ಯಸಭೆ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಆಸ್ಪತ್ರೆಯಲ್ಲಿ‌ ಚಿಕಿತ್ಸೆಗೆಂದು ದಾಖಲಾಗಿದ್ದೆ, ಮತದಾನ ಮಾಡಲು ಆಗದೇ ಇರುವುದಕ್ಕೆ ನನಗೆ ಬೇಸರವಿದೆ. ಮಂಗಳವಾರ ಮುಂಜಾನೆ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದೆ. ಅವರು ಮಧ್ಯಾಹ್ನದ ಒಳಗೆ … Continued

ರಾಜ್ಯಸಭಾ ಚುನಾವಣೆ : ಮತದಾನಕ್ಕೆ ಗೈರಾದ ಬಿಜೆಪಿ ಶಾಸಕ ಹೆಬ್ಬಾರ..!

ಬೆಂಗಳೂರು : ಕರ್ನಾಟಕದ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಇಂದು (ಫೆಬ್ರವರಿ 27) ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ವಿಧಾನಸೌಧದಲ್ಲಿ ನಡೆದಿದ್ದ ಮತದಾನ ಅಂತ್ಯವಾಗಿದೆ. ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಮೂರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಬಿಜೆಪಿಯಿಂದ ಅಖಾಡಕ್ಕೆ ಇಳಿದಿದ್ದ ಓರ್ವ ಅಭ್ಯರ್ಥಿಗೆ ಗೆಲುವಾಗಿದೆ. ಒಟ್ಟು … Continued