ಇದು ಸಾಮಾನ್ಯ ಅನಾಹುತವಲ್ಲ… : ವಯನಾಡು ಭೂಕುಸಿತ ಪೀಡಿತ ಪ್ರದೇಶಗಳಿಗೆ ಪ್ರಧಾನಿ ಮೋದಿ ಭೇಟಿ

ವಯನಾಡು: ವಿನಾಶಕಾರಿ ಭೂಕುಸಿತದಿಂದ ತತ್ತರಿಸಿರುವ ಕೇರಳದ ವಯನಾಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವೈಮಾನಿಕ ಸಮೀಕ್ಷೆ ಕೈಗೊಂಡಿದ್ದಾರೆ. 400 ಕ್ಕೂ ಹೆಚ್ಚು ಜನರು ಸಾವಿಗೀಡಾಗಿ ನೂರಾರು ಜನ ಗಾಯಗೊಂಡಿರುವ ಕೇರಳದ ವಯನಾಡು ಜಿಲ್ಲೆಯ ಮುಂಡಕೈ-ಚೂರಲ್‌ಮಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಕಲ್ಪೆಟ್ಟಾದ ಎಸ್.ಕೆ.ಎಂ.ಜೆ. ಶಾಲಾ … Continued

ವೀಡಿಯೊ | ವಯನಾಡು ಭೂ ಕುಸಿತ : 10 ದಿನಗಳಿಂದ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸೇನೆಗೆ ಜನರಿಂದ ಭಾವನಾತ್ಮಕ ಬೀಳ್ಕೊಡುಗೆ

ವಯನಾಡು : ಇತ್ತೀಚಿನ ಭೂಕುಸಿತ ರಕ್ಷಣಾ ಕಾರ್ಯಾಚರಣೆಗಳ ಸಮಯದಲ್ಲಿ ಭಾರತೀಯ ಸೈನಿಕರ ಧೀರ ಪ್ರಯತ್ನಗಳನ್ನು ಗುರುತಿಸಿ, ಕೇರಳದ ವಯನಾಡ್‌ನಲ್ಲಿ ಭಾರತೀಯ ಸೇನಾ ಸಿಬ್ಬಂದಿಗೆ ಜನರು ಹೃತ್ಪೂರ್ವಕ ಮತ್ತು ಭಾವನಾತ್ಮಕ ವಿದಾಯ ಹೇಳಿದರು. ಇತರರನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಸೈನಿಕರಿಗೆ ಸ್ಥಳೀಯ ಸಮುದಾಯ ಮತ್ತು ಹೊರಗಿನವರು ಕೃತಜ್ಞತೆ ಮತ್ತು ಮೆಚ್ಚುಗೆಯ ಸುರಿಮಳೆಗೈದರು. ಕೊಚ್ಚಿ ರಕ್ಷಣಾ ಸಾರ್ವಜನಿಕ … Continued

ವಯನಾಡು ಭೂ ಕುಸಿತ ದುರಂತ | ಸಾವಿನ ಸಂಖ್ಯೆ 316ಕ್ಕೆ ಏರಿಕೆ ; ಇನ್ನೂ 200ಕ್ಕೂ ಹೆಚ್ಚು ಜನರು ನಾಪತ್ತೆ

ವಯನಾಡು: ಕೇರಳದ  ವಯನಾಡು ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಭಾರೀ ಭೂಕುಸಿತದಲ್ಲಿ ಸತ್ತವರ ಸಂಖ್ಯೆ ಶುಕ್ರವಾರ 300 ರ ಗಡಿ ದಾಟಿದೆ. ವಯನಾಡಿನ ಚೂರಲ್‌ಮಲಾ ಮತ್ತು ಮುಂಡಕ್ಕೈನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತರ ಸಂಖ್ಯೆ 316 ದಾಟಿದೆ ಹಾಗೂ 240 ಜನರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸೇನೆ ಮತ್ತು ಇತರ ತಂಡದವರು ಸುಮಾರು 1,000 … Continued

ವಯನಾಡು ಭೂಕುಸಿತ ದುರಂತ : ಸಾವಿನ ಸಂಖ್ಯೆ 123 ಕ್ಕೆ ಏರಿಕೆ

ವಯನಾಡು : ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ವಿಕೋಪಗಳಲ್ಲಿ ಸಾವಿನ ಸಂಖ್ಯೆ 123 ಕ್ಕೆ ಏರಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ವಯನಾಡಿನಲ್ಲಿ ಧಾರಾಕಾರ ಮಳೆಯಿಂದ ಉಂಟಾದ ಭಾರೀ ಭೂಕುಸಿತದಲ್ಲಿ 128 ಮಂದಿ ಗಾಯಗೊಂಡಿದ್ದಾರೆ. ದುರಂತದಲ್ಲಿ ಇದುವರೆಗೆ 123 ಮಂದಿ ಸಾವಿಗೀಡಾಗಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. … Continued