ಮತ್ತಷ್ಟು ಮಳೆ ಮುನ್ಸೂಚನೆ : ಭಾರತ ಸೇರಿ ಮೂರು ದೇಶಗಳ 1000 ಕಿಮೀ ವ್ಯಾಪ್ತಿಯಲ್ಲಿ ಹರಡಿದ ಅಪರೂಪದ ಹವಾಮಾನ ವ್ಯವಸ್ಥೆ

ನವದೆಹಲಿ: ಉತ್ತರ ಭಾರತದಾದ್ಯಂತ ಪ್ರಸ್ತುತ ಒಂದು ಅಸಹಜ ಹಾಗೂ ಕುತೂಹಲಕಾರಿ ಹವಾಮಾನ ವಿದ್ಯಮಾನವು ತೆರೆದುಕೊಳ್ಳುತ್ತಿದೆ. ಹೊಸದಾಗಿ ಆಗಮಿಸಿರುವ ‘ಪಶ್ಚಿಮದ ಅಲೆ’ (Western Disturbance) ಈ ಭಾಗದ ಹವಾಮಾನದಲ್ಲಿ ಭಾರಿ ಬದಲಾವಣೆ ತಂದಿದ್ದು, ಬೇಸಿಗೆಯ ಆರಂಭದ ಬಿಸಿಲಿಗೆ ತತ್ತರಿಸಿದ್ದ ಜನರಿಗೆ ದೊಡ್ಡ ಸಮಾಧಾನ ನೀಡಿದೆ. ಸಾಮಾನ್ಯವಾಗಿ ಚಳಿಗಾಲದಲ್ಲಿ ಪಶ್ಚಿಮ ದಿಕ್ಕಿನಿಂದ ಮಳೆ ಮತ್ತು ಹಿಮವನ್ನು ಹೊತ್ತು ತರುವ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3-4 ದಿನ ಗುಡುಗು ಸಹಿತ ಮಳೆಯ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ  ಮೂರ್ನಾಲ್ಕುದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಮಾರ್ಚ್‌ 19ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಕೆಲವು ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ವಿಜಯಪುರ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ … Continued

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ತಾಪಮಾನ (Karnataka Weather) ಹೆಚ್ಚಾಗಿ ಬಿಸಿಲಿನ ತೀವ್ರತೆ ಹೆಚ್ಚಾಗಿದೆ. ಈ ನಡುವೆ ರಾಜ್ಯದ ಹಲವೆಡೆ ಮಳೆಯಾದ ವರದಿಯಾಗಿದೆ. ಉತ್ತರ ಕನ್ನಡ, ಧಾರವಾಡ, ಹಾವೇರಿ, ಗದಗ, ಕೊಡಗು, ಬೀದರ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಕೆಲವಡೆ ಭಾನುವಾರ ಕೆಲ ಹೊತ್ತು ಗುಡುಗು ಸಹಿತ ಮಳೆ ಸುರಿದಿದೆ. ಉತ್ತರ … Continued

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಎರಡ್ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಫೆಬ್ರವರಿ 27 ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಂತರ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಬಂಗಾಳಕೊಲ್ಲಿಯ ಮೇಲೆ ಉತ್ತರ ಶ್ರೀಲಂಕಾದ ಬಳಿ ಕೇಂದ್ರೀಕೃತವಾಗಿರುವ ವಾಯುಭಾರ ಕುಸಿತವು ಕ್ರಮೇಣ ಪೂರ್ವಕ್ಕೆ ಬದಲಾಗುತ್ತಿದೆ. ಈ ಚಲನೆಯೊಂದಿಗೆ, ಬಂಗಾಳಕೊಲ್ಲಿಯಿಂದ ಬೀಸುವ ತೇವಾಂಶ-ವಾಹಕ ಗಾಳಿಯು ದುರ್ಬಲಗೊಳ್ಳಬಹುದು, … Continued

ಕರ್ನಾಟಕದ ಐದಾರು ಜಿಲ್ಲೆಗಳಲ್ಲಿ 3-4 ದಿನಗಳ ಕಾಲ ಮಳೆಯ ಮುನ್ಸೂಚನೆ

ಬೆಂಗಳೂರು : ಆಗ್ನೇಯ ಬಂಗಾಳ ಕೊಲ್ಲಿಯ ಮೇಲೆ ವಾಯುಭಾರ ಕುಸಿತ ಉಂಟಾಗಿದ್ದರಿಂದ ದಕ್ಷಿಣ ಭಾರತದ ಕೆಲ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಿಲಾಗಿದೆ. ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಹಾಸನ, ಚಾಮರಾಜನಗರ, ಕೊಡಗು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ … Continued

ಅಮೆರಿಕಾದಲ್ಲಿ ಭೀಕರ ಹಿಮಗಾಳಿ : 13,000 ವಿಮಾನಗಳ ರದ್ದತಿ, ಶಾಲೆ-ಕಾಲೇಜುಗಳಿಗೆ ರಜೆ, ಜನಜೀವನ ಅಸ್ತವ್ಯಸ್ತ

 ವಾಷಿಂಗ್ಟನ್: ಅಮೆರಿಕಾದ ಬಹುತೇಕ ಭಾಗಗಳಲ್ಲಿ ಭೀಕರ ಹಿಮಪಾತ ಮತ್ತು ಮಂಜಿನ ಮಳೆಯಿಂದಾಗಿ ಜನಜೀವನ ಸಂಪೂರ್ಣವಾಗಿ ಸ್ತಬ್ಧಗೊಂಡಿದೆ. ಶನಿವಾರದಿಂದ ಅಬ್ಬರಿಸುತ್ತಿರುವ ಈ ಮಹಾಮಳೆಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ರಸ್ತೆ ಸಂಚಾರ ದುಸ್ತರವಾಗಿದೆ.  ಶನಿವಾರ ಮತ್ತು ಭಾನುವಾರ ಸೇರಿ ಸುಮಾರು 13,000ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಡಲ್ಲಾಸ್, ಚಿಕಾಗೋ, ಅಟ್ಲಾಂಟಾ ಮತ್ತು ವಾಷಿಂಗ್ಟನ್‌ನಂತಹ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಸಾವಿರಾರು … Continued

ವಾಯುಭಾರ ಕುಸಿತ : ಕೆಲವು ಜಿಲ್ಲೆಗಳಲ್ಲಿ ಚಳಿ ತೀವ್ರತೆ ಹೆಚ್ಚಳ ; ಕೆಲವೆಡೆ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಕೆಲವು ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಲಿದೆ ಎಂದು ತಿಳಿಸಿದೆ. ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಂಡ್ಯ, ಮೈಸೂರು, … Continued

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಜೋರಾದ ಚಳಿ ; ಕೆಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಶೀತಗಾಳಿ (Cold Wave) ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ ಮುನ್ಸೂಚನೆ ನೀಡಿದೆ. ಕರ್ನಾಟಕದ ಒಳನಾಡಿನ ಹಲವು ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 3 ರಿಂದ 6 ಡಿಗ್ರಿ ಸೆಲ್ಸಿಯಸ್‌ವರೆಗೆ ಕುಸಿದಿದೆ. ಕಳೆದ 24 ಗಂಟೆಗಳಲ್ಲಿ ವಿಜಯಪುರ … Continued

ದೆಹಲಿಯಲ್ಲಿ ದಟ್ಟ ಮಂಜು: 128 ವಿಮಾನಗಳ ಸಂಚಾರ ರದ್ದು, ರಾಷ್ಟ್ರ ರಾಜಧಾನಿಗೆ ‘ರೆಡ್ ಅಲರ್ಟ್’ ಘೋಷಣೆ

ನವದೆಹಲಿ: ದೆಹಲಿಯಲ್ಲಿ ಆವರಿಸಿರುವ ದಟ್ಟ ಮಂಜಿನಿಂದಾಗಿ ವಿಮಾನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಇದುವರೆಗೆ ಸುಮಾರು 128 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ, ಭಾರತೀಯ ಹವಾಮಾನ ಇಲಾಖೆ (IMD) ದೆಹಲಿಗೆ ನೀಡಿದ್ದ ‘ಆರೆಂಜ್ ಅಲರ್ಟ್’ ಅನ್ನು ಮಂಗಳವಾರದವರೆಗೆ ‘ರೆಡ್ ಅಲರ್ಟ್’ ಆಗಿ ಬದಲಾಯಿಸಿದೆ. ದೆಹಲಿ ಮಾತ್ರವಲ್ಲದೆ, ಉತ್ತರ ಮತ್ತು ಈಶಾನ್ಯ ಭಾರತದ ಇತರ ಭಾಗಗಳಾದ ಪಂಜಾಬ್ … Continued

ಕರ್ನಾಟಕದಲ್ಲಿ ತಾಪಮಾನ ತೀವ್ರ ಕುಸಿತ ; ಇಂದು ಸಹ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡಿನಲ್ಲಿ ವ್ಯಾಪಕ ಚಳಿ ಬೀಳುತ್ತಿದ್ದು, ಸೋಮವಾರವೂ ಕೆಲ ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಹಲವು ಭಾಗಗಳಲ್ಲಿ (Karnataka Districts) ಕನಿಷ್ಠ ತಾಪಮಾನ ಒಂದಂಕಿಗೆ ಇಳಿದಿದ್ದು, ಬೀದರಿನಲ್ಲಿ ದಾಖಲೆಯ ಮಟ್ಟದ ಚಳಿ ದಾಖಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಬೆಳಗ್ಗಿನ ಸಮಯದಲ್ಲಿ ಮಂಜು ಮತ್ತು ಶೀತಗಾಳಿ ಸಾಮಾನ್ಯವಾಗಿದೆ. ಡಿಸೆಂಬರ್ … Continued