ವೀಡಿಯೊ | ದೂರದರ್ಶನ ನೇರ ಪ್ರಸಾರ ಕಾರ್ಯಕ್ರಮದಲ್ಲಿ ʼಶಾಖದ ಅಲೆʼ ಬಗ್ಗೆ ವರದಿ ಮಾಡುವಾಗ ಮೂರ್ಛೆ ಹೋದ ಟಿವಿ ನಿರೂಪಕಿ…!

ನವದೆಹಲಿ : ಶಾಖದ ಅಲೆಯಿಂದಾಗಿ ಭಾರತದ ಹಲವು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ನಿಂದ 46 ಡಿಗ್ರಿ ಸೆಲ್ಸಿಯಸ್‌ ವರೆಗೆ ತಲುಪಿದೆ. ತೀವ್ರವಾದ ಶಾಖದ ನಡುವೆ, ಟಿವಿ ಆಂಕರ್ ಇತ್ತೀಚೆಗೆ ಶಾಖದ ಅಲೆಯ ಬಗ್ಗೆ ಟಿವಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಅಪ್‌ಡೇಟ್‌ಗಳನ್ನು ನೀಡುತ್ತಿದ್ದಾಗ ಮೂರ್ಛೆ ಹೋದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮಹಿಳಾ ಟಿವಿ … Continued

ಲೋಕಸಭೆ ಚುನಾವಣೆ : 1ನೇ ಹಂತದಲ್ಲಿ 62.37%ರಷ್ಟು ಮತದಾನ ; 2019ರ ಮತದಾನದ ಪ್ರಮಾಣಕ್ಕಿಂತ ಕಡಿಮೆ

ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಸ್ಥಾನಗಳಿಗೆ ನಡೆಯಿತು. ಒಟ್ಟಾರೆ ಮತದಾನದ ಪ್ರಮಾಣವು ರಾತ್ರಿ 9 ಗಂಟೆಯವರೆಗೆ 62.37 ಪ್ರತಿಶತದಷ್ಟು ದಾಖಲಾಗಿದೆ. ಪಶ್ಚಿಮ ಬಂಗಾಳ ಮತ್ತು ಮಣಿಪುರದ ಕೆಲವು ಭಾಗಗಳಲ್ಲಿ ಹಿಂಸಾಚಾರ ವರದಿಯಾಗಿದೆ ಮತ್ತು ಮತದಾನದ ಪ್ರಮಾಣವು 2019 ರ ಲೋಕಸಭೆ ಚುನಾವಣೆಯಲ್ಲಿ ನಡೆದ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಇಬ್ಬರು ಪ್ರಮುಖ ಆರೋಪಿಗಳಿಗೆ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ನೀಡಿದ ನ್ಯಾಯಾಲಯ

ಕೋಲ್ಕತ್ತಾ: ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಇಬ್ಬರು ಪ್ರಮುಖ ಶಂಕಿತ ಆರೋಪಿಗಳಾದ ಅದ್ಬುಲ್ ಮಥೀನ್ ತಾಹಾ ಮತ್ತು ಮುಸ್ಸಾವಿರ್ ಹುಸೇನ್ ಶಾಜೇಬ್‌ಗೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ನೀಡಲಾಗಿದೆ ಎಂದು ಕೋಲ್ಕತ್ತಾದ ಎನ್‌ಐಎ ನ್ಯಾಯಾಲಯ ಶುಕ್ರವಾರ ತಿಳಿಸಿದೆ. ಬಂಧಿತ ಆರೋಪಿಗಳನ್ನು ಟ್ರಾನ್ಸಿಟ್ ರಿಮಾಂಡ್ ಮೇಲೆ ಬೆಂಗಳೂರಿಗೆ ಕರೆದೊಯ್ಯಲು ಅದು ಅನುಮತಿ … Continued

ಲೋಕಸಭೆ ಚುನಾವಣೆ : ‘ಪೂರ್ವ, ದಕ್ಷಿಣದಲ್ಲಿ ಬಿಜೆಪಿಗೆ ಲಾಭ, ಅದು 300 ಸೀಟು ಗೆಲ್ಲಬಹುದು; ಚುನಾವಣಾ ತಂತ್ರಜ್ಞ ಪ್ರಶಾಂತ ಕಿಶೋರ ಭವಿಷ್ಯ

ನವದೆಹಲಿ : ಭಾರತೀಯ ಜನತಾ ಪಕ್ಷವು (ಬಿಜೆಪಿ) ದಕ್ಷಿಣ ಮತ್ತು ಪೂರ್ವ ಭಾರತದಲ್ಲಿ ತನ್ನ ಸ್ಥಾನಗಳು ಮತ್ತು ಮತಗಳ ಹಂಚಿಕೆಯನ್ನು ಗಣನೀಯವಾಗಿ ಹೆಚ್ಚಿಸಿಕೊಳ್ಳುತ್ತದೆ ಮತ್ತು ಅದು 300 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ ಭಾನುವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮತ್ತು ಆಂಧ್ರಪ್ರದೇಶದಲ್ಲಿ … Continued

ವೀಡಿಯೊ..| ಬಿರುಗಾಳಿ ಮಳೆ : ಪಶ್ಚಿಮ ಬಂಗಾಳದಲ್ಲಿ ಐದು ಜನರು ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

ಜಲಪೈಗುರಿ: ಪಶ್ಚಿಮ ಬಂಗಾಳದ ಜಲಪೈಗುರಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾನುವಾರ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗಿದ್ದು, ಮಳೆ ಸಂಬಂಧಿತ ಅವಘಡದಲ್ಲಿ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಅಲ್ಲದೇ 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆಲಿಕಲ್ಲು ಮಳೆ ಹಾಗೂ ಬಿರುಗಾಳಿಗೆ ಜಲಪೈಗುರಿ ಜಿಲ್ಲೆಯ ರಾಜರ್‌ಹಾಟ್, ಬರ್ನಿಷ್‌, ಬಾಕಲಿ, ಜೋರ್‌ಪಕಡಿ, … Continued

ಲೋಕಸಭೆ ಚುನಾವಣೆ : 6 ರಾಜ್ಯಗಳ ಗೃಹ ಕಾರ್ಯದರ್ಶಿಗಳು, ಪಶ್ಚಿಮ ಬಂಗಾಳದ ಪೊಲೀಸ್ ಮುಖ್ಯಸ್ಥರನ್ನು ವರ್ಗಾವಣೆ ಮಾಡಿದ ಚುನಾವಣಾ ಆಯೋಗ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಹಲವು ರಾಜ್ಯಗಳಲ್ಲಿ ಹಲವಾರು ಪ್ರಮುಖ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಭಾರತೀಯ ಚುನಾವಣಾ ಆಯೋಗ(ಇಸಿಐ) ಸೋಮವಾರ ಸೂಚನೆ ನೀಡಿದೆ. ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ಸೇರಿದಂತೆ ಆರು ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ವರ್ಗಾವಣೆ ಮಾಡಿ ಚುನಾವಣಾ ಆಯೋಗವು ಆದೇಶಿಸಿದೆ. ಹೆಚ್ಚುವರಿಯಾಗಿ, ಚುನಾವಣಾ ಸಮಿತಿಯು … Continued

ಪಶ್ಚಿಮ ಬಂಗಾಳ: ಟಿಎಂಸಿಯ ಇಬ್ಬರು ಹಾಲಿ ಸಂಸದರು ಬಿಜೆಪಿ ಸೇರ್ಪಡೆ

ನವದೆಹಲಿ: ತೃಣಮೂಲ ಕಾಂಗ್ರೆಸ್‌ನ ಇಬ್ಬರು ಹಾಲಿ ಸಂಸದರಾದ ಅರ್ಜುನ್ ಸಿಂಗ್ ಮತ್ತು ದಿಬ್ಯೇಂದು ಅಧಿಕಾರಿ ಶುಕ್ರವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಸಂದೇಶಖಾಲಿ ಘಟನೆಯಿಂದ ತಾವು ಅಸಮಾಧಾನಗೊಂಡಿರುವುದಾಗಿ ಹೇಳಿದ್ದಾರೆ. ಅರ್ಜುನ್‌ ಸಿಂಗ್ ಲೋಕಸಭೆಯಲ್ಲಿ ಪಶ್ಚಿಮ ಬಂಗಾಳದ ಬರಾಕಪುರ ಮತ್ತು ದಿಬ್ಯೇಂದು ಅಧಿಕಾರಿ ತಮ್ಲುಕ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಪ್ರಧಾನ ಕಛೇರಿಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ … Continued

ತನ್ನ ಸಹೋದರನ ಜೊತೆ ಸಂಬಂಧ ಕಡಿದುಕೊಂಡ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ…! ಕಾರಣವೇನೆಂದರೆ…

ಕೋಲ್ಕತ್ತಾ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೌರಾ ಲೋಕಸಭಾ ಕ್ಷೇತ್ರಕ್ಕೆ ಪ್ರಸೂನ್ ಬ್ಯಾನರ್ಜಿ ಅವರಿಗೆ ಪುನಃ ಟಿಕೆಟ್‌ ನೀಡಿರುವ ತೃಣಮೂಲ ಕಾಂಗ್ರೆಸ್‌ನ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ತಮ್ಮ ಸಹೋದರ ಬಾಬುನ್ ಬ್ಯಾನರ್ಜಿ ಅವರ ಜೊತೆಗಿನ ಸಂಬಂಧವನ್ನು ಕೊನೆಗೊಳಿಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ. “ನನ್ನ ಕುಟುಂಬ ಮತ್ತು ನಾನು ಬಬುನ್ ಜೊತೆಗಿನ … Continued

ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಗೆ ಕೇಂದ್ರ ಸರ್ಕಾರದ ಅಧಿಸೂಚನೆ ನಂತರ ನಾವು ಜಾರಿ ಮಾಡಲ್ಲ ಎಂದ ಪಶ್ಚಿಮ ಬಂಗಾಳ, ಕೇರಳ ಸಿಎಂಗಳು

ನವದೆಹಲಿ: 2019 ರ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಗೆ ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದ್ದರೂ ಸಹ, ತಮ್ಮ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಕೇರಳ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳು ಹೇಳಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ‘ಚುನಾವಣೆಗೂ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆಯ … Continued

ಲೋಕಸಭೆ ಚುನಾವಣೆ : ಈ ಕ್ಷೇತ್ರದಲ್ಲಿ ವಿಚ್ಛೇದಿತ ದಂಪತಿ ಮಧ್ಯೆಯೇ ನಡೆಯಲಿದೆ ಸ್ಪರ್ಧೆ…!

ಕೋಲ್ಕತ್ತಾ: ವಿಚ್ಛೇದಿತ ದಂಪತಿ ಪಶ್ಚಿಮ ಬಂಗಾಳದಲ್ಲಿ ಲೋಕಸಭೆ ಚುನಾವಣೆಯಲ್ಲಿ ಪರಸ್ಪರ ಒಬ್ಬರ ವಿರುದ್ಧ ಮತ್ತೊಬ್ಬರು ಕಣಕ್ಕೆ ಇಳಿಯಲಿದ್ದಾರೆ…! ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಭಾನುವಾರ ತನ್ನ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುತ್ತಿದ್ದಂತೆ ಪಶ್ಚಿಮ ಬಂಗಾಳದಲ್ಲಿ ಇದು ಚರ್ಚೆಯ ವಿಷಯವಾಗಿದೆ. ಸುಜಾತಾ ಮೊಂಡಲ್ ಅವರು ತಮ್ಮ ಮಾಜಿ ಪತಿ ಸೌಮಿತ್ರಾ ಖಾನ್ ವಿರುದ್ಧ ಬಂಡಾಲ್‌ನ ಬಂಕುರಾ ಜಿಲ್ಲೆಯ ಬಿಷ್ಣುಪುರ ಕ್ಷೇತ್ರದಿಂದ … Continued