ಪಶ್ಚಿಮ ಬಂಗಾಳದಲ್ಲಿ ಶೇ.92.03, ತಮಿಳುನಾಡಿನಲ್ಲಿ ಶೇ. 84.29 ಮತದಾನ

ಕೋಲ್ಕತ್ತಾ/ಚೆನ್ನೈ : ಪಶ್ಚಿಮ ಬಂಗಾಳದ ಮೊದಲನೇ ಹಂತದ ಮತದಾನ ಮತ್ತು ತಮಿಳುನಾಡು ವಿಧಾನಸಭೆಯ ಮತದಾನ ಪೂರ್ಣಗೊಂಡಿದೆ. ಎರಡೂ ರಾಜ್ಯಗಲ್ಲಿ ದಾಖಲೆ ಪ್ರಮಾಣದಲ್ಲಿ ಮತದಾರರು ಹಕ್ಕುಚಲಾಯಿಸಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಶೇ. 92.03ರಷ್ಟು ಮತದಾನವಾಗಿದ್ದು, ಸ್ವಾತಂತ್ರ್ಯದ ನಂತರ ಪಶ್ಚಿಮ ಬಂಗಾಳದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಮತದಾನವಾಗಿರುವುದುಈ ಬಾರಿ ಎನ್ನುವುದು ವಿಶೇಷ. ತಮಿಳುನಾಡಿನಲ್ಲಿ ಶೇ. 84ಕ್ಕಿಂತ … Continued

ಐ-ಪಿಎಸಿ ಪ್ರಕರಣ | ತನಿಖೆಯಲ್ಲಿ ಹಸ್ತಕ್ಷೇಪ ಮಾಡಿ ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ತಳ್ಳಬೇಡಿ”: ಮಮತಾಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ರಾಜಕೀಯ ಸಲಹೆಗಾರರ ಸಂಸ್ಥೆಯ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸುತ್ತಿದ್ದ ದಾಳಿಯ ವೇಳೆ ಹಸ್ತಕ್ಷೇಪ ಮಾಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬುಧವಾರ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ವಿವಾದವು ಕೇವಲ ‘ಕೇಂದ್ರ ಮತ್ತು ರಾಜ್ಯದ ನಡುವಿನ ಒಕ್ಕೂಟ ವ್ಯವಸ್ಥೆಯ ವಿವಾದ’ (Federal … Continued

ರಾಹುಲ್ ಗಾಂಧಿ ಕೋಲ್ಕತ್ತಾ ಭೇಟಿ ರದ್ದು: ಮಮತಾ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಕಾವು ಏರುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಏಪ್ರಿಲ್ 23 ರ ಕೋಲ್ಕತ್ತಾ ಭೇಟಿ ರದ್ದಾಗಿದೆ. ಸ್ಥಳೀಯ ಆಡಳಿತವು ಕಾರ್ಯಕ್ರಮಕ್ಕೆ ಅನುಮತಿ ನೀಡಲು ನಿರಾಕರಿಸಿದ್ದೇ ಇದಕ್ಕೆ ಕಾರಣ ಎಂದು ಕಾಂಗ್ರೆಸ್ ಮೂಲಗಳು ಮಂಗಳವಾರ ತಿಳಿಸಿವೆ. ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಮತ್ತು ಎಡರಂಗದ ಮೈತ್ರಿಕೂಟದ ಪರವಾಗಿ … Continued

ಟಿಎಂಸಿ ಸೇರಿದ ನೇತಾಜಿ ಸುಭಾಷಚಂದ್ರ ಬೋಸ್ ಮೊಮ್ಮಗ ಚಂದ್ರಕುಮಾರ ಬೋಸ್

ನವದೆಹಲಿ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೊಸ್ತಿಲಿನಲ್ಲಿ ರಾಜಕೀಯ ಬೆಳವಣಿಗೆಗಳು ವೇಗ ಪಡೆದುಕೊಂಡಿವೆ. ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷಚಂದ್ರ ಬೋಸ್ ಅವರ ಮೊಮ್ಮಗ (Grandnephew) ಚಂದ್ರಕುಮಾರ ಬೋಸ್ ಅವರು ತೃಣಮೂಲ ಕಾಂಗ್ರೆಸ್ (TMC) ಸೇರ್ಪಡೆಯಾಗಿದ್ದಾರೆ. 2023ರ ಸೆಪ್ಟೆಂಬರ್‌ನಲ್ಲಿ ಸದ್ಧಾಂತಿಕ ಭಿನ್ನಾಭಿಪ್ರಾಯಗಳಿಂದಾಗಿ ಬಿಜೆಪಿಯನ್ನು ತೊರೆದಿದ್ದ ಬೋಸ್, ಈಗ ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷದ ಕೈ ಹಿಡಿದಿದ್ದಾರೆ. ಸುಭಾಷಚಂದ್ರ … Continued

ಪಶ್ಚಿಮ ಬಂಗಾಳ ಚುನಾವಣೆ : ಬಿಜೆಪಿಗೆ ಸೇರ್ಪಡೆಯಾದ ಟೆನ್ನಿಸ್ ದಿಗ್ಗಜ ಲಿಯಾಂಡರ್ ಪೇಸ್

ನವದೆಹಲಿ: 2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತದ ಖ್ಯಾತ ಟೆನ್ನಿಸ್ ಆಟಗಾರ ಲಿಯಾಂಡರ್ ಪೇಸ್ ಅವರು ಮಂಗಳವಾರ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಕಿರಣ ರಿಜಿಜು ಮತ್ತು ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಸುಕಾಂತ ಮಜುಂದಾರ್ ಅವರ ಸಮ್ಮುಖದಲ್ಲಿ ಲಿಯಾಂಡರ್‌ … Continued

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿಗೆ ಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ನವದೆಹಲಿ:  ಚುನಾವಣಾ ಆಯೋಗವು ಇಂದು, ಭಾನುವಾರ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕಗಳನ್ನು ಘೋಷಿಸಿದೆ. ಉಳಿದ ಎಲ್ಲಾ ರಾಜ್ಯಗಳಲ್ಲಿ ಚುನಾವಣೆಗಳು ಒಂದೇ ಹಂತದಲ್ಲಿ ನಡೆಯಲಿದ್ದರೆ, ಪಶ್ಚಿಮ ಬಂಗಾಳ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದೆ. ಅಸ್ಸಾಂ, ಕೇರಳ ಮತ್ತು ಪುದುಚೇರಿಗೆ ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ … Continued

“ಅವರಿಗೆ ನನ್ನ ಮೇಲೆ ಕೋಪವಿದೆಯೇ ? ಮಮತಾ ಮೇಲೆ ರಾಷ್ಟ್ರಪತಿ ಮುರ್ಮು ಅಸಮಾಧಾನ

ಕೋಲ್ಕತ್ತಾ : ವಿಧಾನಸಭೆ ಚುನಾವಣೆಗೆ ವಾರಗಳ ಮೊದಲು ಪಶ್ಚಿಮ ಬಂಗಾಳ ಸರ್ಕಾರವನ್ನು ಟೀಕಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಉತ್ತರ ಬಂಗಾಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಅಥವಾ ಅವರ ಸಂಪುಟದ ಯಾವುದೇ ಸಚಿವರು ತಮ್ಮನ್ನು ಸ್ವಾಗತಿಸಲು ಹಾಜರಿಲ್ಲದ ಕಾರಣ ಮಮತಾ ಬ್ಯಾನರ್ಜಿ ತಮ್ಮ ಮೇಲೆ ಅಸಮಾಧಾನಗೊಂಡಿದ್ದಾರೆಯೇ ಎಂದು ಶನಿವಾರ ಪ್ರಶ್ನಿಸಿದ್ದಾರೆ. ತಾವು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ … Continued

ಪಶ್ಚಿಮ ಬಂಗಾಳದ ‘ರಾಜಕೀಯ ಚಾಣಕ್ಯ’ ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸ್ಥಾಪಕ ಸದಸ್ಯ ಹಾಗೂ ಮಾಜಿ ಕೇಂದ್ರ ರೈಲ್ವೆ ಸಚಿವ ಮುಕುಲ್ ರಾಯ್ (71) ಅವರು ಸೋಮವಾರ ಮುಂಜಾನೆ ಸಾಲ್ಟ್ ಲೇಕ್‌ನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅತ್ಯಂತ ನಂಬಿಕಸ್ತ ಒಡನಾಡಿ ಹಾಗೂ ಪಕ್ಷದ ಪ್ರಧಾನ ತಂತ್ರಗಾರ ಎಂದೇ ಗುರುತಿಸಿಕೊಂಡಿದ್ದ ಮುಕುಲ್‌ ರಾಯ್, … Continued

ಮತದಾರರ ಪಟ್ಟಿ ಪರಿಷ್ಕರಣೆಗೆ ಅಡ್ಡಿಪಡಿಸಲು ಬಿಡಲ್ಲ : ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಯಾವುದೇ ರೀತಿಯ ಅಡೆತಡೆಗಳನ್ನು ಸಹಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಚುನಾವಣಾ ಆಯೋಗಕ್ಕೆ (ECI) ನಿಯೋಜಿಸಲಾದ 8,000ಕ್ಕೂ ಹೆಚ್ಚು ಅಧಿಕಾರಿಗಳು ಮಂಗಳವಾರ ಸಂಜೆಯೊಳಗೆ ಆಯಾ ಜಿಲ್ಲಾ ಚುನಾವಣಾ ಅಧಿಕಾರಿಗಳ ಮುಂದೆ ವರದಿ ಮಾಡಿಕೊಳ್ಳಬೇಕು ಎಂದು ನಿರ್ದೇಶಿಸಿದೆ. ಅಲ್ಲದೆ, ಪಶ್ಚಿಮ … Continued

ಪಶ್ಚಿಮ ಬಂಗಾಳ ಚುನಾವಣೆ 2026 : ಎಲ್ಲ 294 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಕಾಂಗ್ರೆಸ್‌ ನಿರ್ಧಾರ

ಕೋಲ್ಕತ್ತಾ: ಮುಂಬರುವ 2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವು ಅತ್ಯಂತ ಮಹತ್ವದ ಹೆಜ್ಜೆ ಇಟ್ಟಿದೆ. ಪಶ್ಚಿಮ ಬಂಗಾಳದ ಒಟ್ಟು 294 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಯಾವುದೇ ಮೈತ್ರಿ ಇಲ್ಲದೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಘೋಷಿಸಿದೆ. ದೆಹಲಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯ ನಂತರ ಈ ನಿರ್ಧಾರ ಹೊರಬಿದ್ದಿದೆ. ಗುರುವಾರ (ಫೆಬ್ರವರಿ 5) ನವದೆಹಲಿಯಲ್ಲಿ … Continued