ಬೇಡ್ತಿ, ಅಘನಾಶಿ ನದಿ ಜೋಡಣೆ ವಿರೋಧಿಸಿ ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಉತ್ತರ ಕನ್ನಡ ಜಿಲ್ಲೆ ಸರ್ವಪಕ್ಷ ನಿಯೋಗ

ಶಿರಸಿ : ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದ  ಉತ್ತರ ಕನ್ನಡ ಜಿಲ್ಲೆಯ ಸರ್ವಪಕ್ಷ ನಿಯೋಗವು ಸೋಮವಾರ (ಫೆ.9) ನವದೆಹಲಿಯಲ್ಲಿ ಕೇಂದ್ರದ ಪ್ರಮುಖ ಸಚಿವರನ್ನು ಭೇಟಿ ಮಾಡಿ, ಬೇಡ್ತಿ-ಹಿರೇವಡ್ಡತ್ತಿ ಹಾಗೂ ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಗಳಿಂದ ಜಿಲ್ಲೆಯ ಪರಿಸರಕ್ಕಾಗುವ ಹಾನಿಯ ಕುರಿತು ಗಂಭೀರ ಚರ್ಚೆ ನಡೆಸಿತು. ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ, ಪರಿಸರ ಸಚಿವ … Continued

ಪಶ್ಚಿಮ ಘಟ್ಟದಲ್ಲಿ ʼಭೂ ಪರಿವರ್ತನೆʼಗೆ ತಾತ್ಕಾಲಿಕ ತಡೆ

ಬೆಂಗಳೂರು: ರಾಜ್ಯದ ನದಿಗಳ ಮೂಲ ಮತ್ತು ಜೀವ ವೈವಿಧ್ಯತೆಯ ತಾಣವಾದ ಪಶ್ಚಿಮ ಘಟ್ಟ ಸಂರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪಶ್ಚಿಮ ಘಟ್ಟ ವ್ಯಾಪ್ತಿಯ ಭೂ ಉಪಯೋಗದ ಕುರಿತು ನೂತನವಾಗಿ ನಿಯಮಾವಳಿ ರೂಪಿಸುವವರೆಗೆ ಎಲ್ಲ ಭೂ ಪರಿವರ್ತನೆಯ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ … Continued

ವೀಡಿಯೊ ..: ದೂಧ್‌ ಸಾಗರ ಜಲಪಾತ ನೋಡಲು ತೆರಳಿದವರಿಗೆ ಪೊಲೀಸರಿಂದ ಬಸ್ಕಿ ಶಿಕ್ಷೆ | ವೀಕ್ಷಿಸಿ

ಬೆಳಗಾವಿ : ಕರ್ನಾಟಕ ಮತ್ತು ಗೋವಾ ರಾಜ್ಯಗಳ ನಡುವಿನ ಗಡಿ ಭಾಗದಲ್ಲಿ ಪಶ್ಚಿಮ ಘಟ್ಟದ ದಟ್ಟ ಅರಣ್ಯದ ನಡುವೆ ಇರುವ ಮನಮೋಹಕ ದೂಧ್‌ ಸಾಗರ ಜಲಪಾತ ನೋಡಲು ಭಾನುವಾರ ತೆರಳಿದ ಪ್ರವಾಸಿಗರಿಗೆ ಗೋವಾ ಪೊಲೀಸರು ಶಾಕ್‌ ನೀಡಿದ್ದಾರೆ. ಪ್ರವಾಸಿಗರಿಗೆ ಬಸ್ಕಿ ಹೊಡೆಸಿ ಶಿಕ್ಷೆ ನೀಡಿ ಕಳುಹಿಸಿದ್ದಾರೆ. ಈ ಕುರಿತ ವೀಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ … Continued

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಲು ಕರ್ನಾಟಕ ಸರ್ಕಾರದ ವಿರೋಧ: ಕೇಂದ್ರಕ್ಕೆ ತಿಳಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ವಲಯ ಎಂದು ಘೋಷಿಸುವುದರಿಂದ ಈ ಭಾಗದಲ್ಲಿ ವಾಸಿಸುವ ಜನರ ಜೀವನೋಪಾಯಕ್ಕೆ ಧಕ್ಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರ್ಕಾರ ಹಾಗೂ ಈ ಭಾಗದ ಜನತೆ ವಿರೋಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಅವರು ಶನಿವಾರ ಪಶ್ಚಿಮ ಘಟ್ಟದ ಕಸ್ತೂರಿ ರಂಗನ್ ವರದಿ ಜಾರಿ … Continued