ಪಶ್ಚಿಮ ಘಟ್ಟದಲ್ಲಿ ನೆಲದಡಿ ವಾಸಿಸುವ ಕಾಲುಗಳಿಲ್ಲದ ಹೊಸ ಉಬಯಚರ ಜೀವಿ ಪತ್ತೆ

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ವಿಜ್ಞಾನಿಗಳು ಹೊಸ ಉಭಯಚರ ಜೀವಿಯೊಂದನ್ನು ಪತ್ತೆಹಚ್ಚಿದ್ದಾರೆ. ನೆಲದಡಿಯಲ್ಲೇ ವಾಸಿಸುವ ಈ ಕಾಲಿಲ್ಲದ ಜೀವಿಯನ್ನು ಸಾಮಾನ್ಯವಾಗಿ ‘ಸಿಸಿಲಿಯನ್’ (Caecilian) ಎಂದು ಕರೆಯಲಾಗುತ್ತದೆ. ಹೊಸದಾಗಿ ಪತ್ತೆಯಾದ ಈ ಪ್ರಭೇದಕ್ಕೆ ‘ಗೆಗೆನಿಯೋಫಿಸ್ ಚಾಂದ್‌ಗಡಿ’ (Gegeneophis chandgadi) ಎಂದು ಹೆಸರಿಡಲಾಗಿದೆ. ಭಾರತೀಯ ಪ್ರಾಣಿಶಾಸ್ತ್ರ ಸಮೀಕ್ಷೆ (ಝೆಡ್‌ಎಸ್‌ಐ), ಪುಣೆ ಮತ್ತು ಗೋವಾದ ವಿವಿಧ ಶಿಕ್ಷಣ ಹಾಗೂ ಸಂಶೋಧನಾ … Continued

ಶಿರಸಿ: ಕಸ್ತೂರಿರಂಗನ್ ವರದಿಯಿಂದ ಉತ್ತರ ಕನ್ನಡ ಜಿಲ್ಲೆಯ 567 ಹಳ್ಳಿಗಳನ್ನು ಕೈಬಿಡಲು ಒತ್ತಾಯಿಸಿ ಸಹಸ್ರಾರು ಆಕ್ಷೇಪಣಾ ಪತ್ರ ಸಲ್ಲಿಕೆ

ಶಿರಸಿ: ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 567 ಹಳ್ಳಿಗಳನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿರುವುದು ಈ ಹಳ್ಳಿಗಳ ಜನಜೀವನಕ್ಕೆ ಮಾರಕವಾಗಲಿದೆ. ಹೀಗಾಗಿ ಈ ವರದಿಯಿಂದ ಜನವಸತಿ ಪ್ರದೇಶಗಳನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂದು ರಾಜ್ಯ ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಆಗ್ರಹಿಸಿದರು. ಕಸ್ತೂರಿರಂಗನ್ ವರದಿ ವಿರೋಧಿಸಿ ಹಮ್ಮಿಕೊಳ್ಳಲಾದ ‘ಒಂದು … Continued

ಕರ್ನಾಟಕದ ಪಶ್ಚಿಮ ಘಟ್ಟದ ಮಂಜಿನ ಮಧ್ಯೆ ಕಿತ್ತಳೆ ಹಾವಿನಂತೆ ಸಾಗಿದ ʼವಂದೇ ಭಾರತʼ ರೈಲು ; ಅದ್ಭುತ ವಿಡಿಯೊಕ್ಕೆ ಭಾರೀ ಮೆಚ್ಚುಗೆ

ಬೆಂಗಳೂರು : ಪಶ್ಚಿಮ ಘಟ್ಟದ ದಟ್ಟ ಹಸಿರು ಕಾಡುಗಳು, ಎತ್ತರದ ಪರ್ವತಗಳು ಹಾಗೂ ಮಳೆಗಾಲದ ಮಂಜಿನ ಹೊದಿಕೆಯ ನಡುವೆ ಕಿತ್ತಳೆ-ಬಿಳಿ ಬಣ್ಣದ ವಂದೇ ಭಾರತ ಎಕ್ಸ್‌ಪ್ರೆಸ್ ರೈಲು ಸಾಗುತ್ತಿರುವ ಮನಮೋಹಕ ವೈಮಾನಿಕ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಸೃಷ್ಟಿಸಿವೆ. ಎಫ್‌ಪಿವಿ (FPV) ಕ್ರಿಯೇಟರ್‌ @hemisphere.fpv ಸೆರೆಹಿಡಿದ ಈ ಸಿನೆಮಾಟಿಕ್ ಡ್ರೋನ್ ವಿಡಿಯೊವನ್ನು ಕೇಂದ್ರ ರೈಲ್ವೆ … Continued

ಪಶ್ಚಿಮ ಘಟ್ಟದ 1449 ಗ್ರಾಮಗಳು ಪರಿಸರ ಸೂಕ್ಷ್ಮ ಪ್ರದೇಶ : ಕೇಂದ್ರದ ಕರಡು ಅಧಿಸೂಚನೆ ತಿರಸ್ಕರಿಸಲು ಕರ್ನಾಟಕ ನಿರ್ಧಾರ

ಬೆಂಗಳೂರು : ಪಶ್ಚಿಮ ಘಟ್ಟ ಪ್ರದೇಶದ 10 ಜಿಲ್ಲೆಗಳ 1,449 ಗ್ರಾಮಗಳನ್ನು ಒಳಗೊಂಡಂತೆ ಒಟ್ಟು 20,668 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (Eco-Sensitive Area—ESA) ಎಂದು ಘೋಷಿಸಲು ಕೇಂದ್ರ ಸರ್ಕಾರ ಹೊರಡಿಸಿರುವ ಇತ್ತೀಚಿನ ಕರಡು ಅಧಿಸೂಚನೆಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಜುಲೈ 27, 2026ರಂದು ಕೇಂದ್ರ ಸರ್ಕಾರ ಹೊರಡಿಸಿರುವ ಏಳನೇ ಕರಡು … Continued

ಸಕಲೇಶಪುರ : ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ ; ಬೆಂಗಳೂರು-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತ

ಹಾಸನ: ಸಕಲೇಶಪುರ ತಾಲ್ಲೂಕಿನ ಯಡಕುಮರಿ ಮತ್ತು ಶಿರಿವಾಗಿಲು ರೈಲು ನಿಲ್ದಾಣಗಳ ನಡುವಿನ ರೈಲ್ವೆ ಹಳಿಯ ಮೇಲೆ ಶನಿವಾರ ರಾತ್ರಿ 8:45ರ ಸುಮಾರಿಗೆ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಆ ಮಾರ್ಗದ ರೈಲು ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಘಟನೆ ಕುರಿತು ಮಾಹಿತಿ ನೀಡಿರುವ ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಕನಮಡಿ, “ಭೂಕುಸಿತ ಸಂಭವಿಸಿದ … Continued

ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ ; ಇದರ ವಿರುದ್ಧದ ಹೋರಾಟದಲ್ಲಿ ಜನಪ್ರತಿನಿಧಿಗಳೇ ಮುಂದೆ ನಿಲ್ಲಬೇಕು : ಸ್ವರ್ಣವಲ್ಲೀ ಶ್ರೀಗಳು

ಶಿರಸಿ: ಪಶ್ಚಿಮ ಘಟ್ಟದ ಸೂಕ್ಷ್ಮ ಪರಿಸರದಲ್ಲಿ ಹರಿಯುವ ಬೇಡ್ತಿ ಮತ್ತು ಅಘನಾಶಿನಿ ನದಿಗಳ ತಿರುವು ಯೋಜನೆ ಸಂಪೂರ್ಣ ಅವೈಜ್ಞಾನಿಕ ಮತ್ತು ಅತಾರ್ಕಿಕವಾಗಿದೆ. ಪಶ್ಚಿಮ ಘಟ್ಟಕ್ಕೆ ಹಾಗೂ ಇಲ್ಲಿನ ಜನಜೀವನಕ್ಕೆ ಶಾಶ್ವತ ಹಾನಿ ಮಾಡುವ ಇಂತಹ ಯೋಜನೆಗಳನ್ನು ಸರ್ಕಾರ ತಕ್ಷಣವೇ ಕೈಬಿಡಬೇಕು. ಈ ಯೋಜನೆ ಸಂಪೂರ್ಣವಿನಾಶಕಾರಿಯಾಗಿದ್ದರಿಂದ ಇದರ ವಿರುದ್ಧದ ಹೋರಾಟದಲ್ಲಿ ಜನಪ್ರತಿನಿಧಿಗಳೇ ಮುಂದೆ ನಿಲ್ಲಬೇಕು ಎಂದು ಸೋಂದಾ … Continued

ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ : ಶಿರಸಿ ಸಮಾವೇಶದ 10 ನಿರ್ಣಯಗಳು…

ಶಿರಸಿ: ಪಶ್ಚಿಮ ಘಟ್ಟದ ಜೀವನಾಡಿಗಳಾದ ಬೇಡ್ತಿ, ಅಘನಾಶಿನಿ ಮತ್ತು ಶರಾವತಿ ಕಣಿವೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿಹತ್ತು ಪ್ರಮುಖ ನಿರ್ಣಯಗಳನ್ನು ಒಮ್ಮತದಿಂದ ಅಂಗೀಕರಿಸಿದೆ. * ಪಶ್ಚಿಮ ಘಟ್ಟದ ಸೂಕ್ಷ್ಮ ಪ್ರದೇಶದಲ್ಲಿ ಬೇಡ್ತಿ-ಅಘನಾಶಿನಿ ನದಿ ತಿರುವು ಹಾಗೂ ಶರಾವತಿ ಪಂಪ್ ಸ್ಟೋರೇಜ್ ಸೇರಿದಂತೆ ಯಾವುದೇ ಬೃಹತ್ ಜಲವಿದ್ಯುತ್ ಯೋಜನೆಗಳನ್ನು ಜಾರಿಗೊಳಿಸಬಾರದು. ಈ ಸಂದರ್ಭದಲ್ಲಿ ಎತ್ತಿನಹೊಳೆ ನದಿ ತಿರುವು ಯೋಜನೆಯ ವಿಫಲತೆಯನ್ನು … Continued

ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ ; ಜನರು ಚುನಾವಣೆ ಬಹಿಷ್ಕರಿಸುವ ಕಾಲವೂ ಬರಬಹುದು- ಸರ್ಕಾರಕ್ಕೆ ಸ್ವರ್ಣವಲ್ಲೀ ಶ್ರೀಗಳ ಎಚ್ಚರಿಕೆ

ಶಿರಸಿ: ನದಿಗಳ ರಕ್ಷಣೆಯ ಈ ಹೋರಾಟದಲ್ಲಿ ಉತ್ತರ ಜಿಲ್ಲೆಯ ಜನರಲ್ಲಿ ಒಗ್ಗಟ್ಟು ಅನಿವಾರ್ಯ. ಸರ್ಕಾರ ಜನರ ಭಾವನೆಗಳಿಗೆ ಸ್ಪಂದಿಸದಿದ್ದರೆ, ಅವೈಜ್ಞಾನಿಕವಾಗಿ ಜಾರಿಗೆ ತರಲು ಉದ್ದೇಶಿಸಿರುವ ಅಘನಾಶಿನಿ ಮತ್ತು ಬೇಡ್ತಿ ನದಿ ತಿರುವು ಯೋಜನೆಯನ್ನು ಕೈಬಿಡದಿದ್ದರೆ ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ. ಒಂದು ವೇಳೆ ರಾಜಕಾರಣಿಗಳು ಪಕ್ಷಾತೀತವಾಗಿ ಸಂಘಟಿತರಾಗದಿದ್ದರೆ, ಮುಂಬರುವ ದಿನಗಳಲ್ಲಿ ಸಾಮೂಹಿಕವಾಗಿ ಚುನಾವಣೆಗಳನ್ನು ಬಹಿಷ್ಕರಿಸುವ ಕಾಲ ಬರಬಹುದು ಎಂದು … Continued

ಪಶ್ಚಿಮ ಘಟ್ಟಗಳ ಧ್ವನಿ, ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ಇನ್ನಿಲ್ಲ

ಪುಣೆ: ಭಾರತದ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನವಿಡೀ ಹೋರಾಡಿದ, ಹಿರಿಯ ಪರಿಸರ ವಿಜ್ಞಾನಿ ಮತ್ತು ಪರಿಸರ ತಜ್ಞ ಮಾಧವ ಗಾಡ್ಗೀಳ್ (83) ಅವರು ಬುಧವಾರ ರಾತ್ರಿ (ಜನವರಿ 7) ಪುಣೆಯಲ್ಲಿ ನಿಧನರಾದರು. ಅವರು ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಗಾಡ್ಗೀಳ್ ಅವರ ಪುತ್ರ ಸಿದ್ಧಾರ್ಥ ಗಾಡ್ಗೀಳ್ ಅವರು ಈ ದುಃಖದ ಸುದ್ದಿಯನ್ನು ಅಧಿಕೃತವಾಗಿ ಹಂಚಿಕೊಂಡಿದ್ದಾರೆ. ಪಶ್ಚಿಮ ಘಟ್ಟಗಳ … Continued

ಕೇಂದ್ರ ಅರಣ್ಯ ಸಲಹಾ ಸಮಿತಿ ಆಕ್ಷೇಪ : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ತಾತ್ಕಾಲಿಕ ತಡೆ

ಪರಿಸರ ಸೂಕ್ಷ್ಮ ಪ್ರದೇಶವಾದ ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದಲ್ಲಿ ಉದ್ದೇಶಿತ 2,000 ಮೆಗಾವ್ಯಾಟ್ ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆಗೆ ಸುಮಾರು 54 ಹೆಕ್ಟೇರ್ ಅರಣ್ಯ ಭೂಮಿಯನ್ನು ಬೇರೆ ಉದ್ದೇಶಕ್ಕೆ ಬಳಸುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರವು ತಾತ್ಕಾಲಿಕ ತಡೆ ನೀಡಿದೆ ಎಂದು ವರದಿಗಳು ತಿಳಿಸಿವೆ. ವರದಿಗಳ ಪ್ರಕಾರ, ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ … Continued