ಸೆಲ್ಫಿ ತೆಗೆಯಲು ಹೋಗಿ ಕಾಡಾನೆಯಿಂದ ಸಾವಿಗೀಡಾದ ಯುವಕ…!

ಮುಂಬೈ : ಗುರುವಾರ (ಅಕ್ಟೋಬರ್ 24) ನಡೆದ ಅಹಿತಕರ ಘಟನೆಯಲ್ಲಿ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಮುಟ್ನೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ 24 ವರ್ಷದ ವ್ಯಕ್ತಿಯೊಬ್ಬರು ಆನೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಡಾನೆ ದಾಳಿಯಿಂದ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ವ್ಯಕ್ತಿ ಸಮೀಪ ಹೋಗಿ ಆನೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಆನೆ ಆತನ ಮೇಲೆ ದಾಳಿ … Continued

ಮೈ ಜುಂ ಎನ್ನುವ ವೀಡಿಯೊ..| ಚಾಮರಾಜನಗರ : ಆನೆ ದಾಳಿಯಿಂದ ಕೂದಲೆಳೆ ಅಂತರದಿಂದ ಪಾರಾದ ಬೈಕ್‌ ಸವಾರ

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಿಂದ ಹಾದು ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಗಳ ದಾಳಿಯಿಂದ ದ್ವಿಚಕ್ರವಾಹನ ಸವಾರ ಸ್ವಲ್ಪದರಲ್ಲೇ ಪಾರಾಗಿರುವ ಘಟನೆ ನಡೆದಿದೆ. ಇಡೀ ಘಟನೆಯನ್ನು ಕಾರಿನಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಮೈಸೂರು -ಊಟಿ ರಾಷ್ಟ್ರೀಯ ಹೆದ್ದಾರಿಯು ಬಂಡೀಪುರ ಅರಣ್ಯದ ನಡುವೆ ಹಾದುಹೋಗಿದೆ. ಹೆದ್ದಾರಿಯಲ್ಲಿ ಶುಕ್ರವಾರದಂದು ಊಟಿ ಕಡೆಯಿಂದ ಮೈಸೂರಿನತ್ತ ಬರುತ್ತಿದ್ದ ಬೈಕ್​ … Continued

ಕಾಡಾನೆ ದಾಳಿಗೆ ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ಸಾವು

ಜಶ್ಪುರ: ಛತ್ತೀಸ್‌ಗಢದ ಜಶ್ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಕಾಡಾನೆ ದಾಳಿಗೆ ಒಂದೇ ಕುಟುಂಬದ ಮೂವರು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ ಆನೆ ದಾಳಿಗೆ ಈವರೆಗೆ ಒಂಬತ್ತು ಮಂದಿ ಸಾವಿಗೀಡಾಗಿದ್ದಾರೆ. ಬಾಗೀಚಾ ನಗರ ಪಂಚಾಯತ್‌ನ ಗಮ್ಹ್ರಿಯಾ ಪ್ರದೇಶದಲ್ಲಿ ಶನಿವಾರ ತಡರಾತ್ರಿ 1 ಗಂಟೆ ಸುಮಾರಿಗೆ ಅವರು … Continued

ಮೈ ಜುಂ ಎನ್ನುವ ವೀಡಿಯೊ…| ಕಾಡಿನ ರಸ್ತೆಯಲ್ಲಿ ಫೋಟೋ ಕ್ಲಿಕ್ಕಿಸಲು ಕಾರಿಂದ ಇಳಿದ ಪ್ರಯಾಣಿಕರ ಮೇಲೆ ಕಾಡಾನೆ ದಾಳಿ : ಕೂದಲೆಳೆ ಅಂತರದಲ್ಲಿ ಸಾವಿನದವಡೆಯಿಂದ ಪಾರು..

ಚಾಮರಾಜನಗರ: ಕಾಡಿನ ರಸ್ತೆಯಲ್ಲಿ ಪ್ರಯಾಣಿಕರು ತಮ್ಮ ಹುಚ್ಚಾಟಕ್ಕೆ ಸಾವಿನ ಸಮೀಪ ಹೋಗಿಬಂದಿದ್ದಾರೆ. ಕಾಡಾನೆ (Wild Elephant) ಫೋಟೋ ಕ್ಲಿಕ್ಕಿಸಲು ಕಾರಿನಿಂದ ಕೆಳಗಿಳಿದ ಇಬ್ಬರು ಪ್ರಯಾಣಿಕರನ್ನು ಕಾಡಾನೆ ಅಟ್ಟಿಸಿಕೊಂಡು ಬಂದಿದೆ. ಅವರು ಅಕ್ಷರಶಃ ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದರು. ಇದು ಅವರಿಗೆ ಮರುಜನ್ಮ ಎಂಬ ರೀತಿಯಲ್ಲಿ ಅವರು ಆನೆ ದಾಳಿಯಿಂದ ಪಾರಾಗಿದ್ದಾರೆ. ಚಾಮರಾಜನಗರ (Chamarajanagara) ಜಿಲ್ಲೆ ಗಡಿ … Continued

ಸೆರೆ ಕಾರ್ಯಾಚರಣೆ ವೇಳೆ ಕಾಡಾನೆ ಜೊತೆ ಕಾದಾಟದಲ್ಲಿ 8 ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು

ಹಾಸನ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ (63 ವರ್ಷ) ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ವೇಳೆ ಸಾವಿಗೀಡಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆಯಲ್ಲಿ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ವೇಳೆ ಅರ್ಜುನನ ಮೇಲೆ ಒಂಟಿಸಲಗ … Continued

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆ ಸಾವು

ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವ್ಯಾಪ್ತಿಯ ಹೆಡದಾಳು ಗ್ರಾಮದಲ್ಲಿ ಬುಧವಾರ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಸಾವಿಗೀಡಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಮಹಿಳೆಯನ್ನು 45 ವರ್ಷದ ಮೀನಾ ಎಂದು ಗುರುತಿಸಲಾಗಿದೆ. ಮಹಿಳೆ ಮತ್ತು ಇತರರು ತಮ್ಮ ಮನೆಯಿಂದ ಜಮೀನಿನ ಕಡೆಗೆ ಹೋಗುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಹೆಡದಾಳು ಗ್ರಾಮದ ಬಳಿ ಸಾಗುತ್ತಿದ್ದಾಗ … Continued

ನಡೆದುಕೊಂಡು ಹೋಗುತ್ತಿದ್ದಾಗ ಕಾಡಾನೆ ದಾಳಿ: ವ್ಯಕ್ತಿ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ತಾಲೂಕಿನ ಆಲ್ದೂರು ಅರಣ್ಯ ವಲಯದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿ ವ್ಯಾಪ್ತಿಯ ಕಂಚುಕಲ್ಲು ದುರ್ಗಾ ಗ್ರಾಮದ ಕಿನ್ನಿ (60) ಎಂಬವರು ಕಾಡಾನೆ ದಾಳಿಯಿಂದ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅರೆನೂರು-ಕಂಚುಕಲ್ ದುರ್ಗಾ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ. ಹಳ್ಳಿಯ ಕಾಲು ದಾರಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ … Continued

ಕನಕಪುರ :ಕಾಡಾನೆ ದಾಳಿಗೆ ಅಕ್ಕ ಸ್ಥಳದಲ್ಲೇ ಸಾವು, ತಂಗಿಗೆ ಗಂಭೀರ ಗಾಯ

ರಾಮನಗರ: ಅಕ್ಕ-ತಂಗಿ ಜಮೀನಿಗೆ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದ್ದು, ಪರಿಣಾಮ ಅಕ್ಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಹಾಗೂ ತಂಗಿ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ. ಕನಕಪುರ ತಾಲೂಕಿನ ಅಚ್ಚಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಕ್ಕ ಜಯಮ್ಮ (೫೦)ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ತಂಗಿ ವೆಂಕಟಲಕ್ಷ್ಮಮ್ಮ ಅವರು ಗಂಭೀರವಾಗಿ ಗಾಯಗೊಂಡಿದ್ದು ಕನಕಪುರ … Continued

ಕಡಬ: ಕಾಡಾನೆ ದಾಳಿಗೆ ಯುವತಿ ಸೇರಿ ಇಬ್ಬರು ಸಾವು

ಮಂಗಳೂರು: ಇಂದು, ಸೋಮವಾರ ಬೆಳ್ಳಂಬೆಳಗ್ಗೆ ಕಾಡಾನೆ ದಾಳಿಯಿಂದ ಯುವತಿ ಸೇರಿ ಇಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ರೆಂಜಿಲಾಡಿ ಗ್ರಾಮದ ಬಳಿ ನೈಲ ಎಂಬಲ್ಲಿ ನಡೆದ ವರದಿಯಾಗಿದೆ. ಇಂದು, ಸೋಮವಾರ ಬೆಳಿಗ್ಗೆ 6:30ರ ಸುಮಾರಿಗೆ ಕಾಡಾನೆ ದಾಳಿ ನಡೆಸಿದೆ. ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ ರಂಜಿತಾ(21) ಎಂಬವರು ಸೋಮವಾರ ಮನೆಯಿಂದ ಹಾಲು ಡೈರಿಗೆ … Continued