ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಇನ್ಫೋಸಿಸ್ ಉದ್ಯೋಗಿ ಸಾವು

ಬೆಂಗಳೂರು: ನಗರದಲ್ಲಿ ಇಂದು ಮಧ್ಯಾಹ್ನ ಸುರಿದ ಧಾರಾಕಾರ ಮಳೆಗೆ ಇನ್ಫೋಸಿಸ್‌ ಕಂಪನಿಯ ಮಹಿಳಾ ಉದ್ಯೋಗಿಯೊಬ್ಬರು ಸಾವಿಗೀಡಾಗಿದ್ದಾರೆ. ಕೆ.ಆರ್.ವೃತ್ತದ ಅಂಡರ್ ಪಾಸ್ ಬಳಿ ಮಳೆ ನೀರಿನಲ್ಲಿ ಮುಳುಗಿ 23 ವರ್ಷದ ಭಾನುರೇಖಾ ಎಂಬುವರು ಮೃತಪಟ್ಟಿರುವುದಾಗಿ ವರದಿಯಾಗಿದೆ. ನೀರಿನಲ್ಲಿ ಕಾರು ಮುಳುಗಿದ್ದು, ಆಂಧ್ರಪ್ರದೇಶದ ವಿಜಯವಾಡದ ಒಂದೇ ಕುಟುಂಬದ ಆರು ಮಂದಿಯನ್ನು ರಕ್ಷಿಸಲಾಗಿದೆ. ಆದರೆ ಕಾರಿನಲ್ಲಿ ನೀರು ತುಂಬಿ ಅಸ್ವಸ್ಥಗೊಂಡಿದ್ದ … Continued

ಸಾಲಗಾರರ ಕಾಟಕ್ಕೆ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆಗೆ ಯತ್ನ: ಓರ್ವ ಮಹಿಳೆ ಸಾವು

ರಾಮನಗರ : ಸಾಲಗಾರರ ಕಾಟಕ್ಕೆ ಹೆದರಿ ಒಂದೇ ಕುಟುಂಬದ ಏಳು ಮಂದಿ ಇಲಿಪಾಷಾಣ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ ಘಟನೆ ತಾಲೂಕಿನ ದೊಡ್ಡಮಣ್ಣುಗುಡ್ಡೆದೊಡ್ಡಿಯಲ್ಲಿ ನಡೆದಿದೆ. ಇವರಲ್ಲಿ ಮಹಿಳೆಯೊಬ್ಬಳು ಮೃತಪಟ್ಟಿದ್ದು, ಆರು ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಮೃತಪಟ್ಟ ಮಹಿಳೆಯನ್ನು ಮಂಗಳಮ್ಮ (28) ಎಂದು ಗುರುತಿಸಲಾಗಿದೆ. ಉಳಿದ ಆರು ಮಂದಿಯನ್ನು ಮಂಡ್ಯದ ವಿಮ್ಸ್‌ಗೆ ದಾಖಲಿಸಿ ತೀವ್ರ ನಿಗಾ … Continued

ಭಟ್ಕಳ: ಪೊಲೀಸ್ ಜೀಪ್ ಡಿಕ್ಕಿ, ಮಹಿಳೆ ಸಾವು

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿಯಲ್ಲಿ ಪೊಲೀಸ್ ಜೀಪ್ ಡಿಕ್ಕಿಯಾಗಿ ಮಹಿಳೆ ಮೃತಪಟ್ಟಿರುವ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರಿಗೆ ಪೈಲಟ್ ಮಾಡುವ ಸಲುವಾಗಿ ಬೆಳಕೆ ಕಡೆಯಿಂದ ಸಾರದಹೊಳೆ ಕಡೆಗೆ ಹೋಗುತ್ತಿರುವಾಗ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಮೃತ ಮಹಿಳೆಯನ್ನು ವೆಂಕಟಾಪುರ   ನಿವಾಸಿ ವಿಜಯಾ ಹೊನ್ನಾವರಕರ … Continued

ಹಾವೇರಿ : ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವು

ಹಾವೇರಿ: ಭಾರೀ ಗಾಳಿ ಮಳೆಗೆ ತಾಲೂಕಿನ ಗುತ್ತಲ ಪಟ್ಟಣದ ಕುಂಬಾರಗೇರಿಯಲ್ಲಿ ಮೇಲ್ಛಾವಣಿ ಕುಸಿದು ಮಹಿಳೆಯೊಬ್ಬಳು ಮೃತಪಟ್ಟ ದುರ್ಘಟನೆ ಮಂಗಳವಾರ ಸಂಜೆ ನಡೆದ ಬಗ್ಗೆ ವರದಿಯಾಗಿದೆ. ಮೃತ ಮಹಿಳೆ ಪಟ್ಟಣದ ಮುಮ್ತಾಜ್ (42) ಎಂದು ಹೇಳಲಾಗಿದೆ. ಮಂಗಳವಾರ ಸಂಜೆ ಏಳು ಗಂಟೆ ಸುಮಾರಿಗೆ ಗುಡುಗು, ಸಿಡಿಲು ಮತ್ತು ಭಾರಿ ಗಾಳಿಯೊಂದಿಗೆ ಮಳೆ ಸುರಿದಿದೆ. ಗಾಳಿಯ ರಭಸಕ್ಕೆ ಮನೆಯ … Continued

ಶಾಸಕರ ಕಾರಿಗೆ ಕಾರು-ಬೈಕ್ ಡಿಕ್ಕಿ: 58 ವರ್ಷದ ಮಹಿಳೆ ಸ್ಥಳದಲ್ಲೇ ಸಾವು, ಮೊಮ್ಮಗನಿಗೆ ಗಾಯ

ಹಾಸನ: ಶಾಸಕರ‌ ಕಾರು ಬೈಕೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ 58 ವರ್ಷದ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವಿಗೀಡಾಗೀಡಾಗಿದ್ದು, ಆಕೆಯ ಮೊಮ್ಮಗ ಕೂಡ ಗಾಯಗೊಂಡ ಘಟನೆ ಹಾಸನ ಜಿಲ್ಲೆಯ ಬೇಲೂರಿನ ಹನುಮಂತನಗರದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಹನುಮಂತನಗರದ ನಿವಾಸಿ ಹೂವಮ್ಮ‌ (58) ಎಂಬವರು ಮೃತಪಟ್ಟವರ ಎಂದು ಗುರುತಿಸಲಾಗಿದೆ. ಈಕೆಯ ಮೊಮ್ಮಗ ಪ್ರೀತಂ ಗಾಯಗೊಂಡಿದ್ದಾರೆ. ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ … Continued