2022ರಲ್ಲಿ ಮಹಿಳೆಯರ ಮೇಲೆ ಆಸಿಡ್ ದಾಳಿ ಪ್ರಕರಣ : ಬೆಂಗಳೂರಿಗೆ ದೇಶದಲ್ಲೇ ಮೊದಲ ಸ್ಥಾನ

  ಬೆಂಗಳೂರು : ಇತ್ತೀಚಿನ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ವರದಿಯ ಪ್ರಕಾರ, 2022 ರಲ್ಲಿ ಬೆಂಗಳೂರಿನಲ್ಲಿ ದೇಶದಲ್ಲೇ ಮಹಿಳೆಯರ ಮೇಲೆ ಅತಿ ಹೆಚ್ಚು ಆಸಿಡ್ ದಾಳಿಗಳು ನಡೆದಿವೆ. ಎನ್‌ಸಿಆರ್‌ಬಿ ಡೇಟಾದಲ್ಲಿ ಸೇರಿಸಲಾದ 19 ಮೆಟ್ರೋಪಾಲಿಟನ್ ನಗರಗಳ ಒಟ್ಟಾರೆ ಪಟ್ಟಿಯಲ್ಲಿ ಬೆಂಗಳೂರು ಅಗ್ರಸ್ಥಾನದಲ್ಲಿದೆ, ಹಿಂದಿನ ವರ್ಷದಲ್ಲಿ ಎಂಟು ಮಹಿಳೆಯರ ಮೇಲೆ ಆಸಿಡ್ ದಾಳಿ ನಡೆದಿರುವುದು … Continued

ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಲು ಅವಕಾಶ : ತಾಯಿಗೆ 40 ವರ್ಷ ಜೈಲು ಶಿಕ್ಷೆ; “ತಾಯ್ತನಕ್ಕೆ ಅವಮಾನʼ ಎಂದ ಕೋರ್ಟ್‌

ತಿರುವನಂತಪುರಂ: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಪ್ರಕರಣದಲ್ಲಿ ಮಹಿಳೆಗೆ ಕೇರಳ ವಿಶೇಷ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸೋಮವಾರ 40 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ₹ 20,000 ದಂಡ ವಿಧಿಸಿದೆ. ಏಳು ವರ್ಷದ ತನ್ನ ಮಗಳ ಮೇಲೆ ತನ್ನ ಪ್ರೇಮಿ ಅತ್ಯಾಚಾರ ಮಾಡಲು ಸಹಾಯ ಮಾಡಿದ್ದಕ್ಕಾಗಿ ಈ ಶಿಕ್ಷೆ ವಿಧಿಸಲಾಗಿದೆ. ತಿರುವನಂತಪುರಂ … Continued

ಮಹಿಳೆಯರ ಕುರಿತು ಹೇಳಿಕೆ: ಕ್ಷಮೆ ಯಾಚಿಸಿದ ಬಿಹಾರ ಸಿಎಂ

ಪಾಟ್ನಾ : ಮಹಿಳೆಯರ ಕುರಿತು ಹೇಳಿಕೆ ಕೊಟ್ಟು ಟೀಕೆಗೆ ಗುರಿಯಾಗಿದ್ದ ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಕ್ಷಮೆ ಯಾಚಿಸಿದ್ದಾರೆ. ತನ್ನ ಹೇಳಿಕೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನ್ನ ಹೇಳಿಕೆಯಲ್ಲಿ ಏನಾದರು ತಪ್ಪಾಗಿದ್ದರೆ, ಯಾರ ಮನಸ್ಸಿಗಾದರು ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಹಾಗೂ ಹೇಳಿಕೆ ಹಿಂಪಡೆಯುತ್ತೇನೆ” ಎಂದು ಹೇಳಿದ್ದಾರೆ. ನನ್ನ ಮಾತುಗಳು ಯಾರನ್ನೂ … Continued

ಮೂರು ವರ್ಷದಲ್ಲಿ 13 ಲಕ್ಷಕ್ಕೂ ಹೆಚ್ಚು ಹುಡುಗಿಯರು, ಮಹಿಳೆಯರು ನಾಪತ್ತೆ : ಸರ್ಕಾರಿ ಅಂಕಿಅಂಶ

ನವದೆಹಲಿ: 2019 ಮತ್ತು 2021 ರ ನಡುವಿನ ಮೂರು ವರ್ಷಗಳಲ್ಲಿ ದೇಶದಲ್ಲಿ 13.13 ಲಕ್ಷಕ್ಕೂ ಹೆಚ್ಚು ಹುಡುಗಿಯರು ಮತ್ತು ಮಹಿಳೆಯರು ನಾಪತ್ತೆಯಾಗಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯದ ಅಂಕಿ ಅಂಶವು ತಿಳಿಸಿದೆ. ಮಧ್ಯಪ್ರದೇಶದಲ್ಲಿ ಸುಮಾರು ಎರಡು ಲಕ್ಷದಷ್ಟು ಹುಡುಗಿಯರು ಮತ್ತು ಮಹಿಳೆಯರು ನಾಪತ್ತೆಗಾಗಿದ್ದು ಪ್ರಥಮ ಸ್ಥಾನದಲ್ಲಿದೆ. ಪಶ್ಚಿಮ ಬಂಗಾಳವು ನಂತರದ ಸ್ಥಾನದಲ್ಲಿದೆ. ಅಂಕಿಅಂಶಗಳನ್ನು ಕಳೆದ ವಾರ … Continued

ಯುವತಿಯಿಂದ ಅತ್ಯಾಚಾರ ಪ್ರಕರಣದ ಬೆದರಿಕೆ: ತೋಟಗಾರಿಕೆ ಅಧಿಕಾರಿಯಿಂದ ದೂರು, ಆತ ನನ್ನ ಗಂಡ ಎಂದ ಯುವತಿ

ಬೆಳಗಾವಿ: ಚನ್ನಪಟ್ಟಣದ ಯುವತಿಯೊಬ್ಬರು ನನಗೆ ಹಾಗೂ ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಒಡ್ಡಿದ್ದಾರೆ. ₹ 50 ಲಕ್ಷ ನೀಡದಿದ್ದರೆ ಅತ್ಯಾಚಾರ ಹಾಗೂ ಸುಲಿಗೆ ಮಾಡಿದ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಕೋರಿ ತೋಟಗಾರಿಕೆ ಇಲಾಖೆಯ ಖಾನಾಪುರ ಸಹಾಯಕ ನಿರ್ದೇಶಕ ಮಂಗಳವಾರ ದೂರು ದಾಖಲಿಸಿದ್ದಾರೆ. ತೋಟಗಾರಿಕೆ ಇಲಾಖೆ ಎ.ಡಿ ರಾಜಕುಮಾರ್ … Continued

ಕೋವಿಡ್ ಲಸಿಕೆಯಲ್ಲಿ ಬಂಜೆತನಕ್ಕೆ ಕಾರಣವಾಗುವ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ: ಆರೋಗ್ಯ ಸಚಿವಾಲಯ ಸ್ಪಷ್ಟನೆ

ನವದೆಹಲಿ: ಕೋವಿಡ್ -19 ವ್ಯಾಕ್ಸಿನೇಷನ್ ಬಗ್ಗೆ ಪುರುಷರು ಮತ್ತು ಮಹಿಳೆಯರಲ್ಲಿ ಬಂಜೆತನಕ್ಕೆ ಕಾರಣವಾದ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಪುನರುಚ್ಚರಿಸಿದೆ ಮತ್ತು ಡೋಸುಗಳು ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ಹೇಳಿದೆ. ಸಂತಾನೋತ್ಪತ್ತಿ ವಯಸ್ಸಿನ ಜನರಲ್ಲಿ ಕೋವಿಡ್ -19 ಲಸಿಕೆ ನೀಡುವುದರಿಂದ ಬಂಜೆತನದ ಬಗ್ಗೆ ಕಳವಳ ವ್ಯಕ್ತಪಡಿಸುವ ಮಾಧ್ಯಮ ವರದಿಗಳೂ ಬಂದಿವೆ … Continued

ರಾಜ್ಯ ಬಜೆಟ್‌: ಮಹಿಳಾ ಉದ್ಯೋಗಿಗಳಿಗೆ ಪ್ರಸೂತಿ ರಜೆ ಜೊತೆ ಮಕ್ಕಳ ಆರೈಕೆ ರಜೆ ಗಿಫ್ಟ್‌

ಬೆಂಗಳೂರು : ರಾಜ್ಯ ಸರ್ಕಾರದ ಮಹಿಳಾ ಉದ್ಯೋಗಿಗಳು ಹಾಲಿ ಜಾರಿಯಲ್ಲಿರುವ ಪ್ರಸೂತಿ ರಜೆಯೊಂದಿಗೆ ಒಟ್ಟು ಸೇವಾವಧಿಯಲ್ಲಿ ಆರು ತಿಂಗಳ ವರೆಗೆ ಮಕ್ಕಳ ಆರೈಕೆ ರಜೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರಕಟಿಸಿದ್ದಾರೆ. ಈ ಮೂಲಕ ವಿಶ್ವ ಮಹಿಳಾ ದಿನಾಚರಣೆಯಂದೇ ಯಡಿಯೂರಪ್ಪ ಮಹಿಳೆಯರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. 2021-22ನೇ ರಾಜ್ಯ ಬಜೆಟ್ ಮಂಡಿಸಿ ಮಾತನಾಡಿದ ಅವರು, ನಿರ್ಭಯಾ … Continued

ದೇಗುಲ ಮಂಡಳಿಯಲ್ಲಿ ಮಹಿಳೆಯರಿಗೆ ಇನ್ನೂ ದೊರಕದ ಸೂಕ್ತ ಪ್ರಾತಿನಿಧ್ಯ

ಕಳೆದ ವರ್ಷ ಒಂದು ಮಹತ್ವದ ಕ್ರಮದಲ್ಲಿ, 45 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ, ಸಪ್ತಶ್ರಂಗ್ ಗಡ್ ಟ್ರಸ್ಟ್ ಮಹಾರಾಷ್ಟ್ರದ ಶ್ರೀ ಸಪ್ತಶ್ರಂಗ್ ನಿವಾಸಿನಿ ದೇವಿ ದೇವಸ್ಥಾನದ ಮಂಡಳಿಯಲ್ಲಿ ಮಹಿಳಾ ಟ್ರಸ್ಟಿಯನ್ನು ನೇಮಿಸಿತು. ಐದು ವರ್ಷಗಳ ಹಿಂದೆ ಶನಿ ಶಿಂಗ್ನಾಪುರ ದೇವಾಲಯದ ಟ್ರಸ್ಟ್ ಬೋರ್ಡ್ ತನ್ನ ಮೊದಲ ಮಹಿಳಾ ಅಧ್ಯಕ್ಷರನ್ನು ನೇಮಿಸಿತು. ಆದರೆ ಭಾರತದ ಬಹುಪಾಲು ದೇವಾಲಯಗಳ … Continued

ಕೊರೋನಾ ಲಸಿಕೆ ಪಡೆದವರಲ್ಲಿ ಕರ್ನಾಟಕದಲ್ಲಿ ಮಹಿಳೆಯರೇ ಹೆಚ್ಚು

ಬೆಂಗಳೂರು: ರಾಜ್ಯದಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಮೊದಲ ಹಂತದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿನ ಸಿಬ್ಬಂದಿಗೆ ಲಸಿಕೆ ಹಾಕಲಾಗಿದ್ದು, ಈವರೆಗೆ ೨,೮೯,೭೮೭ ಮಹಿಳೆಯರು ಲಸಿಕೆ ಪಡೆದರೆ ೧,೭೪,೫೪೫ ಪುರುಷರು ಲಸಿಕೆ ಹಾಕಿಸಿಕೊಂಡಿದ್ದಾರೆ. ಆಶಾ ಕಾರ್ಯಕರ್ತೆಯರು, ಎಎನ್‌ಎಂ ಶುಶ್ರೂಷಕಿಯರ ಸಂಖ್ಯೆ ಹೆಚ್ಚಾಗಿದ್ದರಿಂದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದುಕೊಂಡಿದ್ದಾರೆ. ಪುರುಷರು ಲಸಿಕೆ ಪಡೆದುಕೊಳ್ಳಲು ಆಸಕ್ತಿ … Continued