ಸುರಪುರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಅವರು ಬೆಂಗಲೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೀವ್ರ ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾಜಾ ವೆಂಕಟಪ್ಪ ನಾಯಕ ಅವರು ಇಬ್ಬರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಕೆಲವು ದಿನಗಳ … Continued

ಕೆಎಸ್‌ಆರ್‌ಟಿಸಿ-ಕಾರಿನ ನಡುವೆ ಡಿಕ್ಕಿ : ಮೂವರು ಸಾವು

ಯಾದಗಿರಿ: ಕೆಎಸ್ಆರ್‌ಟಿಸಿ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಮೃತಪಟ್ಟ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಮೃತರನ್ನು ಸುರಪುರ ತಾಲೂಕಿನ ರಂಗಂಪೇಟೆ ನಿವಾಸಿಗಳಾದ ನಾಗರಾಜು ಸಜ್ಜನ್(59), ಮಹಾದೇವಿ(50), ರೇಣುಕಾ(45) ಎಂದು ಗುರುತಿಸಲಾಗಿದೆ. ಮೃತ ನಾಗರಾಜು ಸಜ್ಜನ್ ಕೃಷಿ ಇಲಾಖೆಯಲ್ಲಿ ಅಧಿಕಾರಿಯಾಗಿದ್ದರು. … Continued

ಸೈದಾಪುರ; ಅಗ್ನಿ ದುರಂತ, ದಂಪತಿ ಸಜೀವ ದಹನ

ಯಾದಗಿರಿ: ವಿದ್ಯುತ್‌ ಅವಘಡದಿಂದ ಬಟ್ಟೆ ಅಂಗಡಿಯೊಂದು ಹೊತ್ತಿ ಉರಿದು ದಂಪತಿ ಸಜೀವ ದಹನವಾಗಿರುವ ಘಟನೆ ಯಾದಗಿರಿ ತಾಲೂಕಿನ ಸೈದಾಪುರದಲ್ಲಿ ನಡೆದ ವರದಿಯಾಗಿದೆ. ಇಂದು, ಸೋಮವಾರ ತಡರಾತ್ರಿ ಸಂಭವಿಸಿದ ಬೆಂಕಿ ಆಕಸ್ಮಿಕದಲ್ಲಿ ರಾಗಯ್ಯ (39) ಹಾಗೂ ಅವರ ಪತ್ನಿ ಶಿಲ್ಪ (35) ಮೃತಪಟ್ಟಿದ್ದಾರೆ. ಮೂರು ಅಂತಸ್ತಿನ ಕಟ್ಟಡದಲ್ಲಿ ಎರಡು ಅಂಗಡಿಯಲ್ಲಿ ಬಟ್ಟೆ ಅಂಗಡಿಯಿತ್ತು. ಮತ್ತೊಂದರಲ್ಲಿ ದಂಪತಿ ಹಾಗೂ … Continued

ನಾವು ವೋಟ್​ ಬ್ಯಾಂಕ್ ರಾಜಕಾರಣ ಮಾಡಲ್ಲ, ಮನೆಮನೆಗೆ ನೀರು ಕೊಡ್ತೇವೆ, ಅಭಿವೃದ್ಧಿ ರಾಜಕಾರಣ ಮಾಡ್ತೇವೆ : ಪ್ರಧಾನಿ ಮೋದಿ

ಯಾದಗಿರಿ: ನಾವು ವೋಟ್​ಬ್ಯಾಂಕ್ ರಾಜಕಾರಣ ಮಾಡುವುದಿಲ್ಲ. ನಾವು ಅಭಿವೃದ್ಧಿ ರಾಜಕಾರಣ ಮಾಡುತ್ತೇವೆ. ಯಾದರಿಗಿ ಸೇರಿದಂತೆ ದೇಶದ ಇಂಥ ಅನೇಕ ಜಿಲ್ಲೆಗಳಲ್ಲಿ ಆಕಾಂಕ್ಷಿ ಜಿಲ್ಲೆ ಎನ್ನುವ ಹೊಸ ಕಾರ್ಯಕ್ರಮ ಆರಂಭಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಗುರುವಾರ ಜಲಜೀವನ್ ಮಿಷನ್ ಯೋಜನೆಯಡಿ ಯಾದಗಿರಿ ಜಿಲ್ಲೆಯ 710 ಗ್ರಾಮೀಣ ವಸತಿ ಪ್ರದೇಶಗಳಿಗೆ ಕುಡಿಯುವ ನೀರಿನ ಸೌಕರ್ಯ ನೀಡುವ … Continued

ಹಿರಿಯ ಪತ್ರಕರ್ತ ಅನಿಲ ದೇಶಪಾಂಡೆ ನಿಧನ

ಯಾದಗಿರಿ: ಯಾದಗಿರಿ ಜಿಲ್ಲೆಯ ಹಿರಿಯ ಪತ್ರಕರ್ತ ಅನೀಲ ದೇಶಪಾಂಡೆ ಗುರುವಾರ ರಾತ್ರಿ ನಿಧನ ಹೊಂದಿದ್ದಾರೆ . ಕೆಲ ಕಾಲದಿಂದ ಅವರು ಅನಾರೊಗ್ಯಕ್ಕೆ ಒಳಗಾಗಿದ್ದರು. . ಅನೀಲ ದೇಶಪಾಂಡೆ ಹೊಸ ದಿಗಂತ ಪತ್ರಿಕೆಯ ಯಾಗದಿರಿ ಜಿಲ್ಲಾ ವರದಿಗಾರಾಗಿ ಕಾರ್ಯನಿರ್ವಹಿಸುತ್ತಿದ್ದರು. ಯಾದಗಿರಿ ಜಿಲ್ಲೆಯ ಕ್ರಿಯಾಶೀಲ ವರದಿಗಾರರಾಗಿದ್ದ ಅನಿಲ ದೇಶಪಾಂಡೆ ಅನೇಕ ಜನಪರ ವರದಿಗಳ ಮೂಲಕ ಗುರುತಿಸಿಕೊಂಡಿದ್ದರು. ಸಂಯುಕ್ತ ಕರ್ನಾಟಕ … Continued

ಯಾದಗಿರಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಆರು ಮಂದಿ ಸಾವು

ಯಾದಗಿರಿ: ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ 1 ವರ್ಷದ ಹೆಣ್ಣುಮಗು ಸೇರಿ 6 ಜನ ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯ ಗುರಮಿಠಕಲ್ ತಾಲೂಕಿನ ಅರಕೇರಾ(ಕೆ) ಬಳಿ ನಿನ್ನೆ ತಡರಾತ್ರಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ ಮೂರು ಜನ ಮೃತಪಟ್ಟರೆ ಹಾಗೂ ಮತ್ತೆ ಮೂವರು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಗಂಭೀರ ಗಾಯಗೊಂಡ ಬಾಲಕನನ್ನು ಕಲಬುರಗಿಯ … Continued

ಜಗಳ ಬಗೆಹರಿಸಲು ಬಂದ ಪತ್ನಿ ಸಂಬಂಧಿಕರನ್ನು ಮನೆಯಲ್ಲಿ ಕೂಡಿ ಹಾಕಿ ಬೆಂಕಿ ಹಚ್ಚಿದ ಪತಿ: ಒಬ್ಬರು ಸಾವು, ಮೂವರಿಗೆ ಗಾಯ

ಯಾದಗಿರಿ : ದಂಪತಿ ಜಗಳ ಸರಿಮಾಡಲು ಹೋಗಿದ್ದ ಪತ್ನಿಯ ಸಂಬಂಧಿಕರನ್ನೇ ಮನೆಯಲ್ಲಿ ಕೂಡಿಹಾಕಿ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ್ದು, ಈ ಘಟನೆಯಲ್ಲಿ ಒಬ್ಬರು ಸಾವಿಗೀಡಾಗಿ, ಇತರ ಮೂವರು ಗಾಯಗೊಂಡ ಘಟನೆ ನಾರಾಯಣಪುರದ ಛಾಯಾ ಕಾಲೊನಿಯಲ್ಲಿ ಬುಧವಾರ ನಡೆದಿದೆ‌. ಆರೋಪಿ ಶರಣಪ್ಪ  ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಲಿಂಗಸೂಗೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ … Continued

ಯಾದಗಿರಿ: ಆಟೋ ಹತ್ತಿದ ಯುವತಿಯನ್ನು ಬೇರೆಡೆ ಕರೆದೊಯ್ದು ರೇಪ್​-ವೀಡಿಯೋ ಚಿತ್ರೀಕರಿಸಿ ಯುವತಿಗೆ ಬೆದರಿಕೆ:ದೂರು ದಾಖಲು

ಯಾದಗಿರಿ: ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ಹಾಡಹಗಲೇ ಆಟೋ ಚಾಲಕ ಮತ್ತು ಆತನ ಸ್ನೇಹಿತ ಅತ್ಯಾಚಾರವೆಸಗಿ ಅದನ್ನು ವೀಡಿಯೋ ಚಿತ್ರೀಕರಿಸಿ ಹೆದರಿಸಿದ ಪೈಶಾಚಿಕ ಕೃತ್ಯ ಯಾದಗಿರಿ ತಾಲೂಕಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಈ ಕುರಿತು ಸಂತ್ರಸ್ತೆ ಚಿಕ್ಕಪ್ಪ ದೂರು ದಾಖಲಿಸಿದ್ದಾರೆ. ಮನೆ ಕೆಲಸ ಮಾಡಿಕೊಂಡಿದ್ದ ಯಾದಗಿರಿ ತಾಲೂಕಿನ ಹಳ್ಳಿಯೊಂದರ ಯುವತಿಯೊಬ್ಬಳು ಏ.26ರಂದು ಯಾದಗಿರಿ ನಗರಕ್ಕೆ ತೆರಳಲೆಂದು … Continued

ಕೆರೆಯಲ್ಲಿ ಮೀನು ಹಿಡಿಯಲು ಹೋದ ಬಾಲಕರಿಬ್ಬರು ನೀರುಪಾಲು

ಯಾದಗಿರಿ: ಕೆರೆಯಲ್ಲಿ ಮೀನು ಹಿಡಿಯಲು ಹೋದ ವಿದ್ಯಾರ್ಥಿಗಳಿಬ್ಬರು ನೀರು ಪಾಲಾದ ಘಟನೆ ಯಾದಗಿರಿ ನಗರದಲ್ಲಿ ಮಂಗಳವಾರ ನಡೆದ ಬಗ್ಗೆ ವರದಿಯಾಗಿದೆ. ಮೃತ ಬಾಲಕರನ್ನು ನಕುಲ್(12) ಮತ್ತು ನಿಹಾಲ್ ಸಿಂಗ್​(12) ಎಂದು ಗುರುತಿಸಲಾಗಿದೆ. ಯಾದಗಿರಿ ನಗರದ ಅಮರ್ ಲೇಔಟ್​ನಲ್ಲಿ ನಾಲ್ವರು ಬಾಲಕರು ಕಟ್ಟೆ ಬಳಿ ತೆರಳಿದ್ದರು. ಈ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಈ ವೇಳೆ ನಕುಲ್​ … Continued

ರಾಜ್ಯದಲ್ಲಿಯೂ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ: ಪರೋಕ್ಷವಾಗಿ ಸಿಎಂ ಬೊಮ್ಮಾಯಿ ಸಮರ್ಥನೆ

ಯಾದಗಿರಿ: ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಕೆ ಮಾಡುವುದರಿಂದ ಮಕ್ಕಳಲ್ಲಿ ನೈತಿಕತೆ ಪ್ರಜ್ಞೆ ಹೆಚ್ಚುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಹ್ಯಾಲಿಪ್ಯಾಡ್ ನಲ್ಲಿ ಶನಿವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಗುಜರಾತ್ ನಲ್ಲಿ ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸಿರುವ ಬಗ್ಗೆ ನಮ್ಮ ಸಚಿವರು ಈಗಾಗಲೇ ಪ್ರಸ್ತಾಪ ಮಾಡಿದ್ದಾರೆ. ಇದು ಮಕ್ಕಳಲ್ಲಿ … Continued