ಯಾದಗಿರಿ: ಆಟೋ ಹತ್ತಿದ ಯುವತಿಯನ್ನು ಬೇರೆಡೆ ಕರೆದೊಯ್ದು ರೇಪ್​-ವೀಡಿಯೋ ಚಿತ್ರೀಕರಿಸಿ ಯುವತಿಗೆ ಬೆದರಿಕೆ:ದೂರು ದಾಖಲು

ಯಾದಗಿರಿ: ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ಹಾಡಹಗಲೇ ಆಟೋ ಚಾಲಕ ಮತ್ತು ಆತನ ಸ್ನೇಹಿತ ಅತ್ಯಾಚಾರವೆಸಗಿ ಅದನ್ನು ವೀಡಿಯೋ ಚಿತ್ರೀಕರಿಸಿ ಹೆದರಿಸಿದ ಪೈಶಾಚಿಕ ಕೃತ್ಯ ಯಾದಗಿರಿ ತಾಲೂಕಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಈ ಕುರಿತು ಸಂತ್ರಸ್ತೆ ಚಿಕ್ಕಪ್ಪ ದೂರು ದಾಖಲಿಸಿದ್ದಾರೆ. ಮನೆ ಕೆಲಸ ಮಾಡಿಕೊಂಡಿದ್ದ ಯಾದಗಿರಿ ತಾಲೂಕಿನ ಹಳ್ಳಿಯೊಂದರ ಯುವತಿಯೊಬ್ಬಳು ಏ.26ರಂದು ಯಾದಗಿರಿ ನಗರಕ್ಕೆ ತೆರಳಲೆಂದು … Continued

ಕೆರೆಯಲ್ಲಿ ಮೀನು ಹಿಡಿಯಲು ಹೋದ ಬಾಲಕರಿಬ್ಬರು ನೀರುಪಾಲು

ಯಾದಗಿರಿ: ಕೆರೆಯಲ್ಲಿ ಮೀನು ಹಿಡಿಯಲು ಹೋದ ವಿದ್ಯಾರ್ಥಿಗಳಿಬ್ಬರು ನೀರು ಪಾಲಾದ ಘಟನೆ ಯಾದಗಿರಿ ನಗರದಲ್ಲಿ ಮಂಗಳವಾರ ನಡೆದ ಬಗ್ಗೆ ವರದಿಯಾಗಿದೆ. ಮೃತ ಬಾಲಕರನ್ನು ನಕುಲ್(12) ಮತ್ತು ನಿಹಾಲ್ ಸಿಂಗ್​(12) ಎಂದು ಗುರುತಿಸಲಾಗಿದೆ. ಯಾದಗಿರಿ ನಗರದ ಅಮರ್ ಲೇಔಟ್​ನಲ್ಲಿ ನಾಲ್ವರು ಬಾಲಕರು ಕಟ್ಟೆ ಬಳಿ ತೆರಳಿದ್ದರು. ಈ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಈ ವೇಳೆ ನಕುಲ್​ … Continued

ರಾಜ್ಯದಲ್ಲಿಯೂ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ: ಪರೋಕ್ಷವಾಗಿ ಸಿಎಂ ಬೊಮ್ಮಾಯಿ ಸಮರ್ಥನೆ

ಯಾದಗಿರಿ: ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಕೆ ಮಾಡುವುದರಿಂದ ಮಕ್ಕಳಲ್ಲಿ ನೈತಿಕತೆ ಪ್ರಜ್ಞೆ ಹೆಚ್ಚುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಹ್ಯಾಲಿಪ್ಯಾಡ್ ನಲ್ಲಿ ಶನಿವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಗುಜರಾತ್ ನಲ್ಲಿ ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸಿರುವ ಬಗ್ಗೆ ನಮ್ಮ ಸಚಿವರು ಈಗಾಗಲೇ ಪ್ರಸ್ತಾಪ ಮಾಡಿದ್ದಾರೆ. ಇದು ಮಕ್ಕಳಲ್ಲಿ … Continued

ಭಾರತದ ಪ್ರಕೃತಿ ಕೃಷಿಗೆ ಪೂರಕವಾಗಿದ್ದು ಅದಕ್ಕೇ ಆದ್ಯತೆ ನೀಡಬೇಕಿದೆ: ಗೋವಿಂದಾಚಾರ್ಯ

ಯಾದಗಿರಿ: ಭಾರತ ಸಂಪನ್ಮೂಲ ಭರಿತ ದೇಶವಾಗಿದ್ದು, ಅದನ್ನು ಸದ್ಬಳಕೆ ಮಾಡಬೇಕಾಗಿದೆ ಎಂದು ಖ್ಯಾತ ಚಿಂತಕ ಹಾಗೂ ಭಾರತ ವಿಕಾಸ ಸಂಗಮದ ಸಂಸ್ಥಾಪಕ ಕೆ.ಎನ್. ಗೋವಿಂದಾಚಾರ್ಯ ಹೇಳಿದರು. ಲಕ್ಷೀ ನಗರದ ಶ್ರೀ ಲಕ್ಷೀ ಮಾರುತಿ ದೇವಸ್ಥಾನದಲ್ಲಿ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸಂಚಾಲಿತ ವಿಕಾಸ ಅಕಾಡೆಮಿ ವತಿಯಿಂದ ಹಮ್ಮಿಕೊಂಡ ಪ್ರಕೃತಿ ಕೇಂದ್ರಿತ ವಿಕಾಸ ಚಿಂತನಾ … Continued

ಯಾದಗಿರಿ : ನೇತ್ರದಾನಕ್ಕೆ ಮುಂದಾದ 39 ಯುವಕರು..!.

ಯಾದಗಿರಿ : ಜಿಲ್ಲೆಯ ಗುರುಮಟಕಲ್ ಕ್ಷೇತ್ರದ 39 ತಯವಕರು ತಮ್ಮ ನೇತ್ರಗಳನ್ನು ದಾನ ಮಾಡಲು ನಿರ್ಧರಿಸಿದ್ದಾರೆ. ಪುನೀತ ರಾಜಕುಮಾರ ಮರಣದ ನಂತರ ತಮ್ಮ ನೇತ್ರಗಳನ್ನು ದಾನ ಮಾಡಿದ ಪ್ರೇರಣೆಗೆ ಒಳಗಾದ 39 ಯುವಕರು ಜೆಡಿಎಸ್ ಯುವ ನಯಕ ಶರಣಗೌಡರ ಜನ್ಮದಿನದ ನೆನಪಿಗಾಗಿ ಕಲಬುರಗಿಯ ಹೆಚ್‌ಕೆಇ ಸೊಸಾಯಿಟಿಯ ಐ ಬ್ಯಾಂಕ್‌ಗೆ 39 ಜನ ನೇತ್ರದಾನ ಮಾಡುವುದಾಗಿ ಒಪ್ಪಿಗೆ … Continued

ಆಯುಧ ಪೂಜೆ ಕಾರ್ಯಕ್ರಮಕ್ಕೆ ನಗರಸಭೆ ಸದಸ್ಯೆಗೆ ಆಹ್ವಾನವಿಲ್ಲವೆಂದು ಮಾರಾಮಾರಿ; ಹಲವರಿಗೆ ಗಾಯ..!

ಯಾದಗಿರಿ: ನಗರಸಭೆ ಸದಸ್ಯೆಯೊಬ್ಬರನ್ನು ಆಯುಧ ಪೂಜೆ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂಬ ಕಾರಣಕ್ಕೆ ಮಾರಾಮಾರಿ ನಡೆದು ಒಂಭತ್ತು ಮಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಗುರುವಾರ ರಾತ್ರಿ ಯಾದಗಿರಿ ನಗರದ ಲಾಡಿಜ್ಗಲ್ಲಿ ಬಡಾವಣೆಯ ಭವಾನಿ ಮಂದಿರ ಬಳಿ ಈ ಘಟನೆ ನಡೆದಿದೆ. ಆಯುಧ ಪೂಜೆ ಹಿನ್ನೆಲೆಯಲ್ಲಿ ಹಿಂದೂ ಸೇವಾ ಸಮಿತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ನಗರಸಭೆ ಸದಸ್ಯೆ … Continued

ಭಾರತೀಯ ಜೈನ್ ಸಂಘಟನೆಯಿಂದ ಕೋವಿಡ್ ಮುಕ್ತ ಗ್ರಾಮ ಕಾರ್ಯಕ್ರಮಕ್ಕೆ ಚಾಲನೆ

ಯಾದಗಿರಿ: ಕೊರೊನಾ ಸಾಂಕ್ರಾಮಿಕ ರೋಗವನ್ನು ಸಂಪೂರ್ಣವಾಗಿ ಮುಕ್ತಗೊಳಿಸಲು ಭಾರತೀಯ ಜೈನ್ ಸಂಘಟನೆಯು ಜಿಲ್ಲಾಡಳಿತ ಜೊತೆ ಕೈ ಜೋಡಿಸಿ ಕೊರೊನಾ ಮುಕ್ತ ಗ್ರಾಮ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಕೊರೊನಾ ವಿರುದ್ಧ ಹೋರಾಡಲು ಇನ್ನಷ್ಟು ಆತ್ಮವಿಶ್ವಾಸ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅಭಿಪ್ರಾಯಪಟ್ಟರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಭಾರತೀಯ ಜೈನ್ ಸಂಘಟನೆಯ ವತಿಯಿಂದ ನಡೆದ … Continued

ಭಾರತೀಯ ಜೈನ್ ಸಂಘಟನೆಯಿಂದ ಸೆ. 23ರಂದು ಕೋವಿಡ್ ಫ್ರೀ ವಿಲೇಜ್ ಕಾರ್ಯಕ್ರಮಕ್ಕೆ ಚಾಲನೆ: ಕರ್ನಾಟಕದಲ್ಲಿ 30 ಸಾವಿರ ಗ್ರಾಮಗಳ ಆಯ್ಕೆ

ಯಾದಗಿರಿ : ದೇಶದಲ್ಲಿ ವ್ಯಾಪಿಸಿರುವ ಮಹಾಮಾರಿ ಕೊರೊನಾ ರೋಗವನ್ನು ಸಂಪೂರ್ಣವಾಗಿ ಮುಕ್ತಗೊಳಿಸುವ ಉದ್ದೇಶದಿಂದ ಕರ್ನಾಟಕದ ಗ್ರಾಮೀಣ ಭಾಗದಲ್ಲಿ ‘ಕೋವಿಡ್ ಫ್ರೀ ವಿಲೇಜ್’ ಕಾರ್ಯಕ್ರಮವನ್ನು ಭಾರತೀಯ ಜೈನ್ ಸಂಘವು ಸಂಘಟಿಸಿದೆ ಎಂದು ಜಿಲ್ಲಾ ಸಂಚಾಲಕ ರಾಜೇಶ್ ಜೈನ್ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೋವಿಡ್ ಕುರಿತಾಗಿ ಜಾಗೃತಿ ಮತ್ತು ಪರಿಣಾಮಕಾರಿ ಕಾರ್ಯಾಚರಣೆ ಸಂಕಲ್ಪದಿಂದ ರಾಜ್ಯಾದ್ಯಂತ … Continued

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣ :ನಾಲ್ವರು ಆರೋಪಿಗಳು ವಶಕ್ಕೆ

ಯಾದಗಿ: ಶಹಾಪುರ ನಗರ ಹೊರವಲಯದಲ್ಲಿ ಮಹಿಳೆಯೊಬ್ಬರನ್ನು ನಗ್ನಗೊಳಿಸಿ ಹಲ್ಲೆ ನಡೆಸಿರುವ ಅಮಾನೀಯ ಕೃತ್ಯವೊಂದು ತಡವಾಗಿ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಶಂಕಿತ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ 8-9 ತಿಂಗಳ ಹಿಂದೆ ಶಹಾಪುರ ನಗರ ಹೊರವಲಯದಲ್ಲಿ ನಡೆದಿದೆ ಎನ್ನಲಾದ ಈ ಕೃತ್ಯದ ವಿಡಿಯೊ ತುಣುಕೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ … Continued

ಕೇಂದ್ರ ಸಚಿವರಿಗೆ ಗಾಳಿಯಲ್ಲಿ ಗುಂಡು ಹಾರಿಸಿ ಸ್ವಾಗತ: ಕೋವಿಡ್‌ ನಿಯಮ ಗಾಳಿಗೆ ತೂರಿದ ಬಿಜೆಪಿ ..!

ಯಾದಗಿರಿ: ಕೊರೋನಾ ನಿಯಮಗಳನ್ನು ಗಾಳಿಗೆ ತೂರಿದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಕೇಂದ್ರ ಸಚಿವರ ಸ್ವಾಗತಕ್ಕೆ ಮುಗಿಬಿದ್ದಿದ್ದಲ್ಲದೆ ಅವರ ಸ್ವಾಗತಕ್ಕೆ ಬಂದೂಕಿನಿಂದ ಗುಂಡು ಹಾರಿಸಿ ಅತಿರೇಕದ ವರ್ತನೆ ತೋರಿದ ಘಟನೆ ಯಾದಗಿರಿ ಜಿಲ್ಲೆಯ ಗ್ರಾಮವೊಂದರಲ್ಲಿ ವರದಿಯಾಗಿದೆ. ಸಚಿವರ ಸ್ವಾಗತಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿರುವ ಕಾರಣ ಇದೀಗ ಎಫ್​ಐಆರ್ ದಾಖಲಿಸಲಾಗಿದೆ. ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … Continued