ಯಕ್ಷಗಾನ ಶಾಸ್ತ್ರೀಯ ಕಲೆ ಎಂದು ಪರಿಗಣಿತವಾಗುವ ನಿಟ್ಟಿನಲ್ಲಿ ನಮ್ಮ ಪ್ರಯತ್ನವಾಗಬೇಕಿದೆ ; ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ

ಶಿರಸಿ : ನೂರಾರು ವರ್ಷಗಳಿಂದ ಜನರೇ ಬೆಳೆಸಿಕೊಂಡು ಬರುತ್ತಿರುವ ಕಲೆ ದೇಶದಲ್ಲಿ ಯಾವುದಾದರೂ ಇದ್ದರೆ ಅದು ಯಕ್ಷಗಾನ ಕಲೆ ಎಂದು ಖ್ಯಾತ ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಅಭಿಪ್ರಾಯಪಟ್ಟರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ನೆಮ್ಮದಿ ರಂಗಧಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಶೋಕ ಹಾಸ್ಯಗಾರ ಅವರು ಬರೆದ ಯಕ್ಷಗಾನ ಸಂಶೋಧನಾ ಗ್ರಂಥ ದಶರೂಪಕಗಳ ದಶಾವತಾರ ಕೃತಿಯನ್ನು ಬಿಡುಗಡೆಗೊಳಿಸಿ … Continued

ಯಕ್ಷಗಾನದ ಪುನರ್‌ ವ್ಯಾಖ್ಯಾನ ಆಗಬೇಕು ; ಯಕ್ಷಗಾನ ಶಾಸ್ತ್ರೀಯ ಕಲೆ ಹೇಗೆ-ಯಾಕೆ ಎಂಬುದು ನನ್ನ ʼದಶರೂಪಕಗಳ ದಶಾವತಾರʼ ಪುಸ್ತಕದಲ್ಲಿದೆ : ಸಂದರ್ಶನದಲ್ಲಿ ಅಶೋಕ ಹಾಸ್ಯಗಾರ

ರಘುಪತಿ ಯಾಜಿ ಯಕ್ಷಗಾನದ ಪುನರ್‌ವ್ಯಾಖ್ಯಾನವಾಗಬೇಕು. ಯಕ್ಷಗಾನ ಜನಪದ ಕಲೆ ಅಲ್ಲ, ಅದು ಶಾಸ್ತ್ರೀಯ ಕಲೆ ಎಂದು ಈಗ ಅನೇಕ ವಿದ್ವಾಂಸರು ಹೇಳುತ್ತಿದ್ದಾರೆ. ಯಕ್ಷಗಾನ  ಜನಪದ ಅಲ್ಲ ಎಂದರೆ ಅದು ಹೇಗೆ ಮತ್ತು ಯಾಕೆ..? ಅದು ಶಾಸ್ತ್ರೀಯ ಎಂದಾದರೆ ಅದು ಹೇಗೆ ಮತ್ತು ಯಾಕೆ ಎಂಬುದರ ಕುರಿತು ಯಕ್ಷಗಾನ ಬಯಲಾಟದ ಪುನರ್‌ವ್ಯಾಖ್ಯಾನ ಆಗಬೇಕು. ಯಕ್ಷಗಾನ ಬಯಲಾಟವು ಶಾಸ್ತ್ರೀಯ … Continued

ಶಿರಸಿ | ಜನವರಿ 21ರಂದು ‘ದಶರೂಪಕಗಳ ದಶಾವತಾರ’ ಯಕ್ಷಗಾನ ಸಂಶೋಧನಾ ಗ್ರಂಥ ಬಿಡುಗಡೆ

ಶಿರಸಿ : ಭರತನ ನಾಟ್ಯಶಾಸ್ತ್ರದ ಬೆಳಕಿನಲ್ಲಿ ಯಕ್ಷಗಾನದ ಪುನರ್ವ್ಯಾಖ್ಯಾನದ ಅವಶ್ಯಕತೆಯ ಹಿನ್ನೆಲೆಯಲ್ಲಿ ಹನ್ನೆರಡು ವರ್ಷಗಳಿಂದ ಅಧ್ಯಯನ ನಡೆಸಿದ ನಿವೃತ್ತ ಸಂಪಾದಕರು ಹಾಗೂ ಸಾಹಿತಿ ಅಶೋಕ ಹಾಸ್ಯಗಾರ ಅವರ ‘ದಶರೂಪಕಗಳ ದಶಾವತಾರ’ ಎಂಬ ಸಂಶೋಧನಾ ಗ್ರಂಥದ ಲೋಕಾರ್ಪಣೆ ಸಮಾರಂಭ ಜನವರಿ 21ರ ಮಂಗಳವಾರ ಸಂಜೆ 4 ಗಂಟೆಗೆ ನಗರದ ರಂಗಧಾಮ(ನೆಮ್ಮದಿ ಆವರಣ)ದಲ್ಲಿ ನಡೆಯಲಿದೆ. ಹೆಸರಾಂತ ವಿಮರ್ಶಕರು, ಮೀಮಾಂಸಕಾರರಾಗಿರುವ … Continued

ಯಕ್ಷಗಾನ ಕಲಾವಿದ ಅರುಣಕುಮಾರ ಜಾರ್ಕಳಗೆ ಕುಂದೇಶ್ವರ ಸಮ್ಮಾನ

ಮಂಗಳೂರು: ಕಾರ್ಕಳ ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ ಪ್ರಶಸ್ತಿಗೆ ಯಕ್ಷಗಾನ ಕಲಾವಿದ ಅರುಣಕುಮಾರ ಜಾರ್ಕಳ ಅವರು ಆಯ್ಕೆಯಾಗಿದ್ದಾರೆ. ಜನವರಿ 23ರಂದು ನಡೆಯುವ ಶ್ರೀ ಕುಂದೇಶ್ವರ ಜಾತ್ರೆಯ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಾಂಸ್ಕೃತಿಕ ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ. ಹಾಸ್ಯ ಚಕ್ರವರ್ತಿ: ಅರುಣಕುಮಾರ ಜಾರ್ಕಳ‌ ಮಾತೃಭಾಷೆ ತೆಲುಗು. … Continued

ವೀಡಿಯೊ…| ಹೊನ್ನಾವರ : ಯಕ್ಷಗಾನದಲ್ಲಿ ಮಂಥರೆಯಾಗಿ ಮಿಂಚಿದ ನಟಿ ಉಮಾಶ್ರೀ…!

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಶುಕ್ರವಾರ(ಜ. 17) ರಾತ್ರಿ ನಡೆದ ಯಕ್ಷಗಾನ ಆಖ್ಯಾನ ಶ್ರೀರಾಮ ಪಟ್ಟಾಭಿಷೇಕದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟಿ, ಮಾಜಿ ಸಚಿವೆ ಉಮಾಶ್ರೀ ಮಂಥರೆ ಪಾತ್ರದಲ್ಲಿ ಅಭಿನಯಿಸಿ ಪ್ರೇಕ್ಷಕರನ್ನು ರಂಜಿಸಿದರು. ಹೊನ್ನಾವರದ ಸೇಂಟ್‌ ಅಂಥೋನಿ ಮೈದಾನದಲ್ಲಿ ಪೆರ್ಡೂರು ಶ್ರೀ ಅನಂತಪದ್ಮನಾಭ ಯಕ್ಷಗಾನ ಮಂಡಳಿ ಆಯೋಜಿಸಿರುವ ಶ್ರೀರಾಮ ಪಟ್ಟಾಭಿಷೇಕ ಪ್ರಸಂಗದಲ್ಲಿ ಮಂಥರೆಯ ಪಾತ್ರ … Continued

ಶಿರಸಿ : ಯಕ್ಷಗಾನ ಭಾಗವತ ತ್ರ್ಯಂಬಕ ಹೆಗಡೆ ಇಡವಾಣಿಗೆ ಎಂ. ರಮೇಶ ಪ್ರಶಸ್ತಿ ಪ್ರದಾನ

ಶಿರಸಿ :  ಸರ್ಕಾರಗಳು ಯಾವುದೇ ಬರಲಿ ಅದು ಅದರ ನೆಲೆಯಲ್ಲಿ ಕೆಲಸ ಮಾಡಲಿ. ಆದರೆ ಸಮಾಜ ಕಲಾವಿದರನ್ನ ಯಾವತ್ತಿಗೂ ಕೈ ಬಿಡಬಾರದು. ಇದೇವೇಳೆ ಪ್ರೇಕ್ಷಕರ ಅಭಿರುಚಿಯನ್ನು ಉಳಿಸುವ ಹಾಗೂ ಅವರಲ್ಲಿ ಉತ್ತಮ ಅಭಿರುಚಿ ಬೆಳೆಸುವ ಜವಾಬ್ದಾರಿ ಕಲಾವಿದರಾದ ನಮ್ಮ ಮೇಲಿದೆ ಎಂಬುದನ್ನೂ ಅರಿಯಬೇಕು ಎಂದು ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿಯ ಸಂಚಾಲಕರಾದ ಶಿವಾನಂದ ಕೆರೆಮನೆ … Continued

ಯಕ್ಷಗಾನದ ಮೊದಲ ವೃತ್ತಿಪರ ಮಹಿಳಾ ಭಾಗವತ ಲೀಲಾವತಿ ಬೈಪಾಡಿತ್ತಾಯ ನಿಧನ

ಮಂಗಳೂರು: ಯಕ್ಷಗಾನ ರಂಗದ ಮೊದಲ ಮಹಿಳಾ ವೃತ್ತಿಪರ ಭಾಗವತರಾಗಿ ಗುರುತಿಸಿಕೊಂಡಿದ್ದ ಲೀಲಾವತಿ ಬೈಪಡಿತ್ತಾಯ (77) ನಿಧನರಾಗಿದ್ದಾರೆ. ಅವರು ಹಿರಿಯ ಹಿಮ್ಮೇಳವಾದಕ ಹರಿನಾರಾಯಣ ಬೈಪಡಿತ್ತಾಯ ಅವರ ಪತ್ನಿ. ಲೀಲಾವತಿ ಬೈಪಾಡಿತ್ತಾಯ ಅವರು ಸುಮಾರು ನಾಲ್ಕು ದಶಕಗಳ ಕಾಲ ತೆಂಕುತಿಟ್ಟಿನ ಭಾಗವತರಾಗಿ ಮನೆಮಾತಾಗಿದ್ದರು. ಪಿಟೀಲು ವಾದಕ ಪದ್ಮನಾಭ ಸರಳಾಯರ ಬಳಿ ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಕಲಿತಿದ್ದರು. ಲೀಲಾವತಿ ಬೈಪಡಿತ್ತಾಯ … Continued

ವೇದಿಕೆಯಲ್ಲಿ ಭಾಗವತಿಕೆ ಮಾಡುತ್ತಿದ್ದಾಗಲೇ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಕುಕ್ಕೆಹಳ್ಳಿ ವಿಠ್ಠಲ ಪ್ರಭು

ಉಡುಪಿ : ಯಕ್ಷಗಾನ ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು ಬಂದು ಕಲಾವಿದರೋರ್ವರು ಸಾವಿಗೀಡಾದ ಘಟನೆ ಮುಂಬೈಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕುಕ್ಕೆಹಳ್ಳಿ ವಿಟ್ಠಲ ಪ್ರಭು ತೀವ್ರ ಹೃದಯಾಘಾತದಿಂದ ನಿಧನರಾದ ಕಲಾವಿದರಾಗಿದ್ದಾರೆ. . ಶನಿವಾರ ಕುಕ್ಕೆಹಳ್ಳಿ ವಿಠ್ಠಲ ಪ್ರಭು ಅವರ ನಿರ್ದೇಶನದಲ್ಲಿ ಮುಂಬೈಯಲ್ಲಿ ಯಕ್ಷಗಾನ ನಡೆಯುತ್ತಿತ್ತು. ಭಾಗವತಿಕೆ ನಡೆಸುತ್ತಿದ್ದ ವೇಳೆ ಅವರಿಗೆ ತೀವ್ರವಾದ ಎದೆ ನೋವು ಬಂದ ಕಾರಣ … Continued

ಯಕ್ಷಗಾನಕ್ಕೆ ವಿಶ್ವಸಂಸ್ಥೆ ಗೌರವ : ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆಗೆ ಯುನೆಸ್ಕೊ (UNESCO) ಮಾನ್ಯತೆ

ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗುಣವಂತೆಯ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ಸಂಸ್ಥೆಗೆ ವಿಶ್ವಸಂಸ್ಥೆಯ ಮಾನ್ಯತೆ, ಗೌರವ ದೊರೆತಿದೆ ಎಂದು ಮಂಡಳಿಯ ನಿರ್ದೇಶಕ ಕೆರೆಮನೆ ಶಿವಾನಂದ ಹೆಗಡೆ ತಿಳಿಸಿದ್ದಾರೆ. ಈ ಕುರಿತು ಪ್ರಕಟನೆ ನೀಡಿರುವ ಅವರು, ಯುನೆಸ್ಕೊದಿಂದ ಮಾನ್ಯತೆ ಪಡೆದ ಮೊದಲ ಯಕ್ಷಗಾನ ಸಂಸ್ಥೆಯಾಗಿದೆ. ಜೂನ್ 11 ಹಾಗೂ … Continued

ಹೊನ್ನಾವರ : ಪ್ರಸಿದ್ಧ ಯಕ್ಷಗಾನ ವೇಷಧಾರಿ ಕಪ್ಪೆಕೆರೆ ಮಹಾದೇವ ಹೆಗಡೆ ನಿಧನ

ಹೊನ್ನಾವರ : ಬಡಗು ತಿಟ್ಟಿನ ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಪ್ಪೆಕೆರೆ ಮಹಾದೇವ ಹೆಗಡೆ(74) ಮಂಗಳವಾರ ರಾತ್ರಿ (ಜುಲೈ 9) ಹೊನ್ನಾವರದಲ್ಲಿ ನಿಧನರಾದರು. ಮೃತರು ಪತ್ನಿ, ನಾಲ್ವರು ಪುತ್ರರನ್ನು ಅಗಲಿದ್ದಾರೆ. ಪ್ರಸಿದ್ಧ ಭಾಗವತರಾದ ಅಣ್ಣ ಕಪ್ಪೆಕೆರೆ ಸುಬ್ರಾಯ ಹೆಗಡೆ ಅವರಿಂದ ಯಕ್ಷಗಾನ ಕಲಿತು, ನಂತರ ಯಕ್ಷಗಾನದ ದಿಗ್ಗಜ ಕೆರೆಮನೆ ಮಹಾಬಲ … Continued