ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಬೆಂಗಳೂರು: ಬಡಗು ತಿಟ್ಟು ಯಕ್ಷಗಾನದ ಖ್ಯಾತ ಭಾಗವತ, ಅಪಾರ ಅಭಿಮಾನಿಗಳನ್ನು ಹೊಂದಿರುವ ಸುಬ್ರಹ್ಮಣ್ಯ ಧಾರೇಶ್ವರ 67ನೇ ವಯಸ್ಸಿನಲ್ಲಿ ಬೆಂಗಳೂರಿನಲ್ಲಿ ಗುರುವಾರ (ಏ.25) ಬೆಳಗ್ಗೆ ನಿಧನರಾಗಿದ್ದಾರೆ. ಬೆಂಗಳೂರಿನ ತಮ್ಮ ಪುತ್ರನ ಮನೆಯಲ್ಲಿದ್ದ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಬೆಳಗ್ಗೆ 4:30ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಅವರು, ಪತ್ನಿ, ಪುತ್ರ ಹವ್ಯಾಸಿ ಕಲಾವಿದ ಕಾರ್ತಿಕ್ ಹಾಗೂ ಪುತ್ರಿಯನ್ನು ಅಗಲಿದ್ದಾರೆ. … Continued

ಖ್ಯಾತ ಕನ್ನಡ-ತುಳು ಸಾಹಿತಿ, ಜಾನಪದ-ಯಕ್ಷಗಾನ ವಿದ್ವಾಂಸ ಪ್ರೊ. ‌ಅಮೃತ ಸೋಮೇಶ್ವರ ಇನ್ನಿಲ್ಲ

ಮಂಗಳೂರು : ಕನ್ನಡದ ಖ್ಯಾತ ಸಾಹಿತಿ, ಜಾನಪದ ವಿದ್ವಾಂಸ ಹಾಗೂ ಯಕ್ಷಗಾನ ಪ್ರಸಂಗ ಕರ್ತೃ ಪ್ರೊ.ಅಮೃತ ಸೋಮೇಶ್ವರ (89) ಅವರು ಶನಿವಾರ (ಜನವರಿ 6) ಬೆಳಿಗ್ಗೆ ನಿಧನರಾದರು. ಅವರು ವಯೋಸಹಜವಾಗಿ ಶನಿವಾರ ಬೆಳಿಗ್ಗೆ ತಮ್ಮ ಸ್ವಗೃಹ ಸೋಮೇಶ್ವರದ ‘ಒಲುಮೆ’ಯಲ್ಲಿ ನಿಧನರಾದರು. ಅಮೃತ ಸೋಮೇಶ್ವರ ಅವರಿಗೆ ಪತ್ನಿ ನರ್ಮದಾ, ಮಕ್ಕಳಾದ ಚೇತನ ಸೋಮೇಶ್ವರ, ಜೀವನ ಸೋಮೇಶ್ವರ ಇದ್ದಾರೆ. … Continued

ಸಿದ್ದಾಪುರ: ಯಕ್ಷಗಾನದ ಭಾಗವತ ಕೆ.ಪಿ.ಹೆಗಡೆಗೆ ‘ಅನಂತ ಶ್ರೀ’ ಪ್ರಶಸ್ತಿ ಪ್ರದಾನ

ಸಿದ್ದಾಪುರ: ಓರ್ವ ನಿಗರ್ವಿ ಕಲಾವಿದ‌ನ ಹೆಸರಿನಲ್ಲಿ ನೀಡುವ, ಒಡನಾಡಿ ಹೆಸರಿನ ಪ್ರಶಸ್ತಿ ಸಿಕ್ಕಿದ್ದನ್ನು ಅನಂತ ಪ್ರೀತಿಯಿಂದ ಸ್ವೀಕರಿಸಿದ್ದೇನೆ ಎಂದು ಪ್ರಸಿದ್ಧ ಯಕ್ಷಗಾನ ಭಾಗವತ ಹಾಗೂ ಪ್ರಾಚಾರ್ಯ ಕೆ.ಪಿ.ಹೆಗಡೆ ಗೋಳಗೋಡ ಹೇಳಿದ್ದಾರೆ. ಅವರು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೇರೂರಿನ ದೇವಸ್ಥಾನದಲ್ಲಿ ಭಾನುವಾರ ಆಯೋಜಿಸಿದ್ದ ಹಿರಿಯ ಯಕ್ಷಗಾನ ಕಲಾವಿದ ಕೊಳಗಿ ಅನಂತ ಹೆಗಡೆ ಅವರ ಹೆಸರಿನಲ್ಲಿ … Continued

ಕೇಶವ ಹೆಗಡೆ ಕೊಳಗಿಗೆ ನೆಬ್ಬೂರು ನಾರಾಯಣ ಭಾಗವತ ಪ್ರಶಸ್ತಿ : ಜನವರಿ 29ರಂದು ಪ್ರದಾನ

ಶಿರಸಿ: ನೆಬ್ಬೂರು ನಾರಾಯಣ ಭಾಗವತ ಪ್ರತಿಷ್ಠಾನದಿಂದ ಯಕ್ಷಗಾನದ ಬಡಗುತಿಟ್ಟಿನ ಖ್ಯಾತ ಭಾಗವತರಾಗಿದ್ದ ದಿ.ನಾರಾಯಣ ಭಾಗವತರ ಹೆಸರಿನಲ್ಲಿ ಕೊಡಮಾಡುವ ಪ್ರಥಮ ಪ್ರಶಸ್ತಿಯನ್ನು ಪ್ರಸಿದ್ಧ ಭಾಗವತ ಕೇಶವ ಹೆಗಡೆ ಕೊಳಗಿ ಅವರಿಗೆ ಪ್ರಕಟಿಸಲಾಗಿದೆ. ಸುಮಾರು 40 ವರ್ಷಗಳಿಂದ ಯಕ್ಷಗಾನದ ಭಾಗವತರಾಗಿರುವ ಕೇಶವ ಹೆಗಡೆ ಕೊಳಗಿ ಅವರಿಗೆ ಪ್ರಶಸ್ತಿ ಪ್ರಕಟಿಸಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಜಿ.ಎನ್.ಹೆಗಡೆ ಹಾವಳಿಮನೆ ತಿಳಿಸಿದ್ದಾರೆ. ಪ್ರಶಸ್ತಿಯನ್ನು … Continued