ಯಲ್ಲಾಪುರ : ಕ್ರೂಸರ್-ಲಾರಿ ಮುಖಾಮುಖಿ ಡಿಕ್ಕಿ, 6 ಮಂದಿ ಸಾವು

ಕಾರವಾರ : ಭೀಕರ ರಸ್ತೆ ಅಪಘಾತ ಸ್ಥಳದಲ್ಲೇ ಆರು ಮಂದಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದ ಬಳಗಾರ ಸಮೀಪ ಅಂಕೋಲಾ–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಗುರುವಾರ ಬೆಳಗಿನ ಜಾವ ಸಂಭವಿಸಿದೆ ಎಂದು ವರದಿಯಾಗಿದೆ. ಪ್ರವಾಸಿಗರಿದ್ದ ತೂಫಾನ್ ಕ್ರೂಸರ್ ಮತ್ತು ಲಾರಿಯ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಆರು ಮಂದಿ … Continued

ಭಾರಿ ಮಳೆ ಮುನ್ಸೂಚನೆ : ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳಿಗೆ ಜುಲೈ 7ರಂದು ರಜೆ ಘೋಷಣೆ

ಶಿರಸಿ: ಭಾರಿ ಮಳೆ ಮುನ್ಸೂಚನೆ ಇರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜುಲೈ 7 (ಮಂಗಳವಾರ)ರಂದು ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಮಂಗಳವಾರ ಹವಾಮಾನ ಇಲಾಖೆಯು ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ರೆಡ್‌ ಅಲರ್ಟ್‌ ಘೋಷಿಸಿದೆ. … Continued

ಯಲ್ಲಾಪುರ : ಮದುವೆಯಿಂದ ವಾಪಸ್‌ ಬರುವಾಗ ಮಿನಿ ಬಸ್‌ ಅಪಘಾತ ; ಹಲವರಿಗೆ ಗಾಯ

ಕಾರವಾರ: ಮದುವೆ ಮುಗಿಸಿ ವಾಪಸ್ಸಾಗುತ್ತಿದ್ದಾಗ ಮಿನಿ ಬಸ್‌ ಅಪಘಾತಕ್ಕೀಡಾಗಿ 10ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಳಗಾವಿಯಲ್ಲಿ ನಡೆದ ತಮ್ಮ ಸಂಬಂಧಿಕರ ಮದುವೆ ಮುಗಿಸಿ ವಾಪಸ್‌ ಆಗುವಾಗ ರಾಷ್ಟ್ರೀಯ ಹೆದ್ದಾರಿ 52ರ ಅರಬೈಲ್ ಘಟ್ಟದ ತಿರುವುಗಳಲ್ಲಿ ಅವರಿದ್ದ … Continued

ಯಲ್ಲಾಪುರ : ಅರೆಬೈಲ್ ಘಟ್ಟದಲ್ಲಿ ಚಾಲಕನ ಸಮೇತ ಕಾರು ಸುಟ್ಟುಹೋದ ಪ್ರಕರಣ ; ಮೂವರ ಬಂಧನ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಕಾರಿನ ಸಮೇತ ಚಾಲಕ ಸುಟ್ಟುಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ವ್ಯಕ್ತಿಯನ್ನು ಕೊಲೆ ಮಾಡಿ, ನಂತರ ಕೃತ್ಯವನ್ನು ಮುಚ್ಚಿಹಾಕಲು ಅರೆಬೈಲ್‌ ಘಟ್ಟದಲ್ಲಿ ಕಾರು ಸಮೇತ ವ್ಯಕ್ತಿಯನ್ನು ಸುಟ್ಟು ಹಾಕಿ ಇದನ್ನು ರಸ್ತೆ ಅಪಘಾತ ಎಂದು ಬಿಂಬಿಸಲು … Continued

ಯಲ್ಲಾಪುರ : ಅರೆಬೈಲ್‌ ಘಟ್ಟದಲ್ಲಿ ಕಾರಿನಲ್ಲಿ ಸಜೀವ ದಹನವಾದ ಚಾಲಕ

ಕಾರವಾರ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರಿನೊಳಗಿದ್ದ ಚಾಲಕ ಸುಟ್ಟು ಕರಕಲಾದ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದ ರಾಷ್ಟ್ರೀ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ ಎಂದು ವರದಿಯಾಗಿದೆ. ಹುಬ್ಬಳ್ಳಿ ಕಡೆಯಿಂದ ಅಂಕೋಲಾಕ್ಕೆ ಬರುತ್ತಿದ್ದ ವೋಕ್ಸ್‌ ವ್ಯಾಗನ್‌ (Volkswagen) ಕಾರಿನಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿ ತೀವ್ರವಾಗಿದ್ದರಿಂದ ಕಾರಿನಲ್ಲಿದ್ದ ಚಾಲಕನಿಗೆ … Continued

ಯಲ್ಲಾಪುರ : ಶಿರಸಿ ಮಾರಿಜಾತ್ರೆಯಲ್ಲಿ ಕಳ್ಳತನಕ್ಕೆ ಯೋಜಿಸಿದ್ದ ಅಂತಾರಾಜ್ಯ ಕಳ್ಳರ ಬಂಧನ

ಯಲ್ಲಾಪುರ : ಇಲ್ಲಿ ದರೋಡೆ ನಡೆಸಿ ಮುಂದೆ ಶಿರಸಿ ಮಾರಿಕಾಂಬಾ ದೇವಿ ಜಾತ್ರೆಯಲ್ಲಿ ದರೋಡೆ ಮಾಡಲು ಯೋಜಿಸಿದ್ದ ಎಂಟು ಜನ ಅಂತಾರಾಜ್ಯ ದರೋಡೆಕೋರರನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ರಾಷ್ಟ್ರೀಯ ಹೆದ್ದಾರಿ ಬಳಿಯ  ಕೆ ಮಿಲನ್ ಹೋಟೆಲ್ ಹತ್ತಿರ ಬುಧವಾರ ಬೆಳಗಿನ ಜಾವ ಪೋಲಿಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.  ಪಿಎಸ್ಐ ಸಿದ್ದಪ್ಪ ಗುಡಿ ತಮ್ಮ ತಂಡದೊಂದಿಗೆ … Continued

ಯಲ್ಲಾಪುರ : ಚಾಕುವಿನಿಂದ ಇರಿದು ಮಹಿಳೆಯ ಕೊಲೆ

ಯಲ್ಲಾಪುರ: ವಿವಾಹಿತ ಮಹಿಳೆಯೊಬ್ಬರಿಗೆ ಚಾಕು ಇರಿದು ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ  ಪಟ್ಟಣದ ಕಾಳಮ್ಮ ನಗರದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ ಎಂದು ವರದಿಯಾಗಿದೆ. ಹತ್ಯೆಯಾದ ಮಹಿಳೆಯನ್ನು ರಂಜಿತಾ ಮಲ್ಲಪ್ಪ ಬನ್ಸೋಡೆ (30) ಎಂದು ಗುರುತಿಸಲಾಗಿದ್ದು, ಆರೋಪಿ ರಫಿಕ್ ಎಂಬಾತ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಸುಮಾರು ಹತ್ತು ವರ್ಷಗಳ ಹಿಂದೆ ರಂಜಿತಾಳಿಗೆ … Continued

ಯಲ್ಲಾಪುರ | ಪತ್ರಕರ್ತ ನರಸಿಂಹ ಸಾತೊಡ್ಡಿ, ಸುಬ್ರಾಯ ಬಿದ್ರೆಮನೆಗೆ ಸಂಕಲ್ಪ ಪ್ರಶಸ್ತಿ ಪ್ರದಾನ

ಯಲ್ಲಾಪುರ: ಕಲಾರಾಧನೆ ಮಾಡುತ್ತ ಸಂಕಲ್ಪ ಸಂಸ್ಥೆ ಬೆಳೆದು ಬಂದಿದೆ,ಉತ್ಸವವೂ ನಿರಂತರವಾಗಿರುತ್ತದೆ ಎಂದು ಶಿರಳಗಿ ಶ್ರೀ ಬ್ರಹ್ಮಾನಂದ ಭಾರತೀ ಸ್ವಾಮೀಜಿ ನುಡಿದರು. ಅವರು ಭಾನುವಾರ ರಾತ್ರಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಗಾಂಧಿ ಕುಟೀರದಲ್ಲಿ 39 ನೇ ಸಂಕಲ್ಪ ಉತ್ಸವದಲ್ಲಿ ಸಾಧಕರಿಗೆ ಸಂಕಲ್ಪ ಪ್ರಶಸ್ತಿ ಪ್ರದಾನ ಮಾಡಿ‌ ಮಾತನಾಡಿದರು. ಸಂಕಲ್ಪ ಜ್ಞಾನ ಯಜ್ಞದ ಮೂಲಕ ಭಗವಂತನನ್ನು … Continued

ಯಲ್ಲಾಪುರ : ಕಾನೂರು ಜಲಪಾತದಲ್ಲಿ ವಿದ್ಯಾರ್ಥಿ ನಾಪತ್ತೆ

ಯಲ್ಲಾಪುರ : ಜಲಪಾತ ನೋಡಲು ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಾನೂರು ಜಪಾತದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಧಾರವಾಡ ಮೂಲದ ಸುಹೇಲ್ ಸೈಯದ್ ಅಲಿ ಶೇಖ್ (21) ಎಂಬಾತ ನಾಪತ್ತೆಯಾದ ವಿದ್ಯಾರ್ಥಿ ಎಂದು ಹೇಳಲಾಗಿದೆ. ಹಳಿಯಾಳ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಸೋಹೇಲ್ ಸೇರಿ … Continued

ಯಲ್ಲಾಪುರ : ಕಿರವತ್ತಿ ಬಳಿ ಮರಬಿದ್ದು ಗರ್ಭಿಣಿ ಮಹಿಳೆ ಸಾವು, ನಾಲ್ವರು ಮಕ್ಕಳಿಗೆ ಗಾಯ

ಯಲ್ಲಾಪುರ : ಅಂಗನವಾಡಿ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಬೃಹತ್ ಮರವೊಂದು ಬಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿಯ ಡೋಮಗೆರೆಯಲ್ಲಿ ಸೋಮವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಮಹಿಳೆ … Continued