ಯಲ್ಲಾಪುರ : ಕಿರವತ್ತಿ ಬಳಿ ಮರಬಿದ್ದು ಗರ್ಭಿಣಿ ಮಹಿಳೆ ಸಾವು, ನಾಲ್ವರು ಮಕ್ಕಳಿಗೆ ಗಾಯ

ಯಲ್ಲಾಪುರ : ಅಂಗನವಾಡಿ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಬೃಹತ್ ಮರವೊಂದು ಬಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿಯ ಡೋಮಗೆರೆಯಲ್ಲಿ ಸೋಮವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಮಹಿಳೆ … Continued

ನ್ಯಾ. ಯಶವಂತ ವರ್ಮಾ ಹಗರಣದ ತನಿಖಾ ಸಮಿತಿಗೆ ಕಾರ್ಯದರ್ಶಿಯಾಗಿ ಉತ್ತರ ಕನ್ನಡ ಮೂಲದ ಗಣಪತಿ ಭಟ್ ನೇಮಕ

ಬೆಂಗಳೂರು : ಮಾಜಿ ಐಆರ್‌ಎಸ್ ಅಧಿಕಾರಿ ಗಣಪತಿ ಭಟ್ ಅವರನ್ನು, ದೋಷಾರೋಪಣೆ ಎದುರಿಸುತ್ತಿರುವ ನ್ಯಾಯಮೂರ್ತಿ ಯಶವಂತ ವರ್ಮಾ ವಿರುದ್ಧದ ಆರೋಪಗಳ ತನಿಖೆಗಾಗಿ ನ್ಯಾಯಾಧೀಶರ (ವಿಚಾರಣಾ) ಕಾಯ್ದೆಯಡಿ ರಚಿಸಲಾದ ಮೂವರು ಸದಸ್ಯರ ಸಮಿತಿಗೆ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಮೂಲದ 1989 ರ ಬ್ಯಾಚ್‌ನ ಐಆರ್‌ಎಸ್ ಅಧಿಕಾರಿ ಭಟ್ ಅವರನ್ನು ಸ್ಪೀಕರ್ ಓಂ ಬಿರ್ಲಾ … Continued

ಯಲ್ಲಾಪುರ | ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ ; ಸ್ಥಳದಲ್ಲೇ ಮೂವರು ಸಾವು, 7 ಜನರಿಗೆ ಗಂಭೀರ ಗಾಯ

ಯಲ್ಲಾಪುರ : ನಿಂತಿದ್ದ ಲಾರಿಗೆ ಕೆಎಸ್​​ಆರ್​​ಟಿಸಿ ಬಸ್ (KSRTC bus) ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವಿಗೀಡಾಗಿ, 7 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್​ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶುಕ್ರವಾರ (ಆ.15) ಮಧ್ಯರಾತ್ರಿ ಈ ಅಪಘಾತ ನಡೆದಿದೆ ಎನ್ನಲಾಗಿದ್ದು, ಓವರ್​ಟೇಕ್​ ಮಾಡುವ ಸಂದರ್ಭದಲ್ಲಿ ಬಸ್ … Continued

ಯಲ್ಲಾಪುರ: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಕಲಾವಿದ ಚಂದ್ರಶೇಖರ ಸಿದ್ದಿ ಆತ್ಮಹತ್ಯೆ

ಕಾರವಾರ : ಜನಪ್ರಿಯ ರಿಯಾಲಿಟಿ ಶೋ ‘ಕಾಮಿಡಿ ಕಿಲಾಡಿಗಳು’ ಮೂಲಕ ರಾಜ್ಯಕ್ಕೆ ಪರಿಚಿತರಾಗಿದ್ದ ಕಲಾವಿದ ಚಂದ್ರಶೇಖರ ಸಿದ್ದಿ (31) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಚಿಮ್ಮಳ್ಳಿ ಗ್ರಾಮದ ಸಿದ್ದಿ ಸಮುದಾಯಕ್ಕೆ ಸೇರಿದ ಚಂದ್ರಶೇಖರ, ‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಾಜ್ಯಾದ್ಯಂತ ಹೆಸರು ಮಾಡಿದ್ದರು. ನಿನಾಸಂನಲ್ಲಿ ನಾಟಕ … Continued

ಭಾರಿ ಮಳೆ : ಉತ್ತರ ಕನ್ನಡ ಜಿಲ್ಲೆ 4 ತಾಲೂಕುಗಳ ಶಾಲೆಗಳಿಗೆ ನಾಳೆ (ಜುಲೈ 4)ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ನಾಲ್ಕು ತಾಲೂಕುಗಳ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಶುಕ್ರವಾರ ಜುಲೈ 4ರಂದು ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 3ರಿಂದ 4ರ ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ರೆಡ್‌ ಅಲರ್ಟ್‌ ನೀಡಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ … Continued

ಯಲ್ಲಾಪುರ | ಅರೆಬೈಲ್‌ ಘಟ್ಟದ ಪ್ರಪಾತದ ಬಳಿ ಖಾಸಗಿ ಬಸ್ ಪಲ್ಟಿ

ಯಲ್ಲಾಪುರ : ಪ್ರಪಾತದ ಬಳಿ ಖಾಸಗಿ ಬಸ್ಸೊಂದು ಲಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ ಘಟ್ಟದಲ್ಲಿ ಬುಧವಾರ  ಬೆಳಿಗ್ಗೆ  ನಡೆದಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್‌ ಬಸ್ಸಿನಲ್ಲಿದ್ದ 25 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಲಾರಿಗೆ ಡಿಕ್ಕಿಯಾಗಿ ಅಪಘಾತಕ್ಕೀಡಾಗಿದೆ. … Continued

ಭಾರಿ ಮಳೆ ; ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳ ಶಾಲೆಗಳಿಗೆ ಇಂದು (ಜೂ.25) ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಯಲ್ಲಾಪುರ, ಹಳಿಯಾಳ, ಜೊಯಿಡಾ ಹಾಗೂ ದಾಂಡೇಲಿ ಈ ನಾಲ್ಕು ತಾಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಿಗೆ ಜೂನ್ 25ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹವಾಮಾನ ಇಲಾಖೆಯು ಭಾರಿ ಮಳೆ … Continued

ಯಲ್ಲಾಪುರ : ಕಣ್ಣಿಗೇರಿ ಬಳಿ ಬಸ್ ಪಲ್ಟಿಯಾಗಿ 17 ಪ್ರಯಾಣಿಕರಿಗೆ ಗಾಯ

ಯಲ್ಲಾಪುರ : ಚಾಲಕನ ನಿಯಂತ್ರಣ ತಪ್ಪಿ ರಾಜ್ಯ ಸಾರಿಗೆ ಸಂಸ್ಥೆ (KSRTC) ಬಸ್ ಪಲ್ಟಿಯಾಗಿ 17 ಕ್ಕೂ ಹೆಚ್ಚು ಜನ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಶಿರಸಿಯಿಂದ ಬೆಳಗಾವಿಗೆ ಹೋಗುತ್ತಿದ್ದ ಈ ಬಸ್ ಯಲ್ಲಾಪುರದಿಂದ ಬೆಳಿಗ್ಗೆ 8ರ ಸುಮಾರಿಗೆ ಹೊರಟಿತ್ತು … Continued

ಯಲ್ಲಾಪುರ | ಅಪಘಾತದಲ್ಲಿ 11 ಮಂದಿ ಸಾವಿಗೆ ಪ್ರಧಾನಿ ಮೋದಿ ಸಂತಾಪ ; ಕೇಂದ್ರದಿಂದ 2 ಲಕ್ಷ ಪರಿಹಾರ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ 11 ಮಂದಿ ಮೃತಪಟ್ಟಿರುವುದಕ್ಕೆ (accident) ಪ್ರಧಾನಿ ನರೇಂದ್ರ ಮೋದಿ ಅಲ್ಲದೇ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬದವರಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಪ್ರಕಟಿಸಿದ್ದಾರೆ. ಈ ಘಟನೆ ಬಗ್ಗೆ ಪ್ರಧಾನಿ ಮೋದಿ ಅವರು … Continued

ಯಲ್ಲಾಪುರ | ಲಾರಿ ಅಪಘಾತದಲ್ಲಿ ಮೃತರ ಕುಟುಂಬದವರಿಗೆ ತಲಾ 3 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಹಾಗೂ ರಾಯಚೂರಿನ ಸಿಂಧನೂರಿನಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ 3 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಅಲ್ಲದೆ, ಗಾಯಾಳುಗಳ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿಗಳ ಅಧಿಕೃತ ಟ್ವಿಟರ್ … Continued