ಹುಬ್ಬಳ್ಳಿ-ಅಂಕೋಲಾ ರೈಲು: ವನ್ಯಜೀವಿ ಮಂಡಳಿಯಿಂದ ಹೈಕೋರ್ಟ್ ಸಾಧಕ-ಬಾಧಕದ ವರದಿ ಕೇಳಿದ್ದು ಸಕಾರಾತ್ಮಕ ಬೆಳವಣಿಗೆ

ಯಲ್ಲಾಪುರ: ಹುಬ್ಬಳ್ಳಿ- ಅಂಕೋಲಾ ರೈಲು ಮಾರ್ಗಕ್ಕೆ ಈಗಾಗಲೇ ಅರಣ್ಯ ಇಲಾಖೆಯಿಂದ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಆದರೆ, ಕೆಲವು ಸರ್ಕಾರೇತರ ಸಂಘ ಸಂಸ್ಥೆಗಳು ಮತ್ತು ಪರಿಸರವಾದಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರಿಂದ ಅದಕ್ಕೆ ಹಿನ್ನಡೆಯಾಗಿತ್ತು ಎಂದು ಅರಣ್ಯ ಮತ್ತು ಪರಿಸರ, ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಉಮೇಶ್ ಕತ್ತಿ ಹೇಳಿದರು. ಪಟ್ಟಣಕ್ಕೆ ಗುರುವಾರ ಸಂಜೆ ತಮ್ಮ ಕುಟುಂಬದೊಂದಿಗೆ … Continued

ಯಲ್ಲಾಪುರ: ತುಡುಗುಣಿಯಲ್ಲಿ ಚಾಕುವಿನಿಂದ ಇರಿದು ಮಹಿಳೆ ಕೊಲೆ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ತುಡುಗುಣಿಯಲ್ಲಿ ಮಹಿಳೆಯೊಬ್ಬಳನ್ನು ಗುರುವಾರ ರಾತ್ರಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಕೊಲೆಯಾದವರನ್ನು ಸರೋಜಾ ಅಶೋಕ ನಾಯರ್ (೪೫) ಎಂದು ಗುರುತಿಸಲಾಗಿದೆ. ಶಿರಸಿ ಕೆರೆಕೊಪ್ಪದ ಹಾಲಿ ಗೋವಾ ಮಾಪ್ಸಾದ ನಿವಾಸಿ ಕೃಷ್ಣ  ನಾಯ್ಕ (೪೬) ಕೊಲೆಗೈದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಸರೋಜಾ ನಾಯರ್ ಅಂಗನವಾಡಿ … Continued

ಯಲ್ಲಾಪುರದಲ್ಲಿ ಒಂದೇ ಶಾಲೆಯ 21 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು..!

ಯಲ್ಲಾಪುರ:ಇಲ್ಲಿನ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯ ಕನ್ನಡ ಮಾಧ್ಯಮ ಪ್ರೌಢಶಾಲೆಯ 21 ವಿದ್ಯಾರ್ಥಿಗಳು ಹಾಗೂ ಇಬ್ಬರು ಶಿಕ್ಷಕರಿಗೆ ಸೋಮವಾರ ಕೊರೊನಾ ಸೋಂಕು ದೃಢಪಟ್ಟಿದೆ. ಕೆಲವು ದಿನಗಳ ಹಿಂದೆ 10ನೇ ತರಗತಿಯ ಒಬ್ಬ ವಿದ್ಯಾರ್ಥಿನಿಗೆ ಈ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿದಂತೆ 123 ಜನರ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ … Continued