ಯಲ್ಲಾಪುರ | ಪತ್ರಕರ್ತ ನರಸಿಂಹ ಸಾತೊಡ್ಡಿ, ಸುಬ್ರಾಯ ಬಿದ್ರೆಮನೆಗೆ ಸಂಕಲ್ಪ ಪ್ರಶಸ್ತಿ ಪ್ರದಾನ

ಯಲ್ಲಾಪುರ: ಕಲಾರಾಧನೆ ಮಾಡುತ್ತ ಸಂಕಲ್ಪ ಸಂಸ್ಥೆ ಬೆಳೆದು ಬಂದಿದೆ,ಉತ್ಸವವೂ ನಿರಂತರವಾಗಿರುತ್ತದೆ ಎಂದು ಶಿರಳಗಿ ಶ್ರೀ ಬ್ರಹ್ಮಾನಂದ ಭಾರತೀ ಸ್ವಾಮೀಜಿ ನುಡಿದರು. ಅವರು ಭಾನುವಾರ ರಾತ್ರಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಗಾಂಧಿ ಕುಟೀರದಲ್ಲಿ 39 ನೇ ಸಂಕಲ್ಪ ಉತ್ಸವದಲ್ಲಿ ಸಾಧಕರಿಗೆ ಸಂಕಲ್ಪ ಪ್ರಶಸ್ತಿ ಪ್ರದಾನ ಮಾಡಿ‌ ಮಾತನಾಡಿದರು. ಸಂಕಲ್ಪ ಜ್ಞಾನ ಯಜ್ಞದ ಮೂಲಕ ಭಗವಂತನನ್ನು … Continued

ಯಲ್ಲಾಪುರ : ಕಿರವತ್ತಿ ಬಳಿ ಮರಬಿದ್ದು ಗರ್ಭಿಣಿ ಮಹಿಳೆ ಸಾವು, ನಾಲ್ವರು ಮಕ್ಕಳಿಗೆ ಗಾಯ

ಯಲ್ಲಾಪುರ : ಅಂಗನವಾಡಿ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಬೃಹತ್ ಮರವೊಂದು ಬಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿಯ ಡೋಮಗೆರೆಯಲ್ಲಿ ಸೋಮವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಮಹಿಳೆ … Continued

ಯಲ್ಲಾಪುರ | ಅರಬೈಲ್ ಘಟ್ಟದಲ್ಲಿ ಭೀಕರ ಅಪಘಾತ ; ಒಂದೇ ಕುಟುಂಬದ ಮೂವರು ಸಾವು

ಕಾರವಾರ : ಭೀಕರ ಅಪಘಾತದಲ್ಲಿ (Accident) ಒಂದೇ ಕುಟುಂಬದ ಮೂವರು ಸಾವಿಗೀಡಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ (Uttara Kannada) ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಓವರ್​ಟೇಕ್ ಮಾಡುವ ಭರದಲ್ಲಿ ವೇಗದಲ್ಲಿ ಬಂದ ಲಾರಿ ಕಾರಿಗೆ ಗುದ್ದಿದೆ ಎಂದು ಹೇಳಲಾಗಿದೆ. ಲಾರಿ ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿ ಹೋಗಿದೆ.  ಕಾರಿನಲ್ಲಿದ್ದ ಮೂವರು … Continued

ಯಲ್ಲಾಪುರ : ಬೈಕ್‌ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು ; ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರಿಗೆ ಗಂಭೀರ ಗಾಯ

ಯಲ್ಲಾಪುರ : ಶನಿವಾರ ಬೆಳಿಗ್ಗೆ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಚಂದ್ಗುಳಿ ವ್ಯಾಪ್ತಿಯ ಉಪಳೇಶ್ವರ ಹುತ್ಕಂಡ ಭಾಗದಲ್ಲಿ ನಡೆದಿದೆ. ಈ ಭಾಗದಲ್ಲಿ ಮೂರು ಕರಡಿಗಳು ಸಂಚರಿಸುತ್ತಿದ್ದು ಶನಿವಾರ ಬೆಳಿಗ್ಗೆ ಏಳು ಗಂಟೆ ಹೊತ್ತಿಗೆ ಕಾರ್ಯನಿರ್ಮಿತ್ತ ದ್ವಿಚಕ್ರವಾಹನದಲ್ಲಿ ಚಂದ್ಗುಳಿ ಪಂಚಾಯತದ ಸದಸ್ಯ ಹಾಗೂ ಪಿ.ಎಲ್.ಡಿ ಬ್ಯಾಂಕ್ … Continued

ಯಲ್ಲಾಪುರ : ಮದುವೆಯಾಗಲು ಹೆಣ್ಣು ಸಿಗಲಿಲ್ಲವೆಂದು ಮನನೊಂದು ಸಾವಿಗೆ ಶರಣಾದ ಯುವಕ

ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ತೇಲಂಗಾರ ಗ್ರಾಮದ ಹೊರವಲಯದಲ್ಲಿ ಯುವಕನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮೃತ ವ್ಯಕ್ತಿಯನ್ನು ನಾಗರಾಜ ಗಣಪತಿ ಗಾಂವ್ಕರ (35) ಎಂದು ಗುರುತಿಸಲಾಗಿದೆ. ಈತ ತೇಲಂಗಾರದ ಕಿರಗಾರಿಮನೆಯ ನಿವಾಸಿ. ಮನೆಯ ಸಮೀಪದ ಗುಡ್ಡದಲ್ಲಿ ಮರಕ್ಕೆ … Continued

ಯಲ್ಲಾಪುರ: ಲಾರಿ ಕಂದಕಕ್ಕೆ ಉರುಳಿ ಸ್ಥಳದಲ್ಲೇ ಇಬ್ಬರ ಸಾವು

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ರ ಅರಬೈಲ್ ಘಾಟ್’ನ ಯು ಟರ್ನ್ ಬಳಿ ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದು ಭೀಕರ ಅಪಘಾತ ಸಂಭವಿಸಿದ್ದು ಲಾರಿ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇದು ಆಂಧ್ರಪ್ರದೇಶದ ಲಾರಿಯಾಗಿದ್ದು ಗ್ರಾನೈಟ್ ತುಂಬಿಕೊಂಡು ಯಲ್ಲಾಪುರ-ಅಂಕೋಲಾ ಮಾರ್ಗವಾಗಿ ಮಂಗಳೂರಿಗೆ ಹೋಗುತ್ತಿತ್ತು ಎಂದು ಹೇಳಲಾಗಿದೆ. ಈ … Continued