ಮಹಾಕುಂಭ 2025 : ಈವರೆಗೆ 62 ಕೋಟಿ ಭಕ್ತರ ಆಗಮನ

ಆಗ್ರಾ : ಮಹಾಕುಂಭ ಮೇಳ 2025 ಮುಕ್ತಾಯಗೊಳ್ಳುವ ಮೂರು ದಿನಗಳ ಮೊದಲು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮಹಾಕುಂಭಕ್ಕೆ ಈವರೆಗೆ 62 ಕೋಟಿ ಭಕ್ತರು ಆಗಮಿಸಿದ್ದಾರೆ ಎಂದು ಭಾನುವಾರ ತಿಳಿಸಿದ್ದಾರೆ. ಮತ್ತು ನಿರ್ದಿಷ್ಟ ಅವಧಿಯಲ್ಲಿ ಇಷ್ಟು ದೊಡ್ಡ ಸಂಖ್ಯೆಯ ಜನರು ಸೇರಿದ್ದು “ಶತಮಾನದ ಅಪರೂಪದ ಘಟನೆಗಳಲ್ಲಿ ಒಂದಾಗಿದೆ” ಎಂದು ಹೇಳಿದ್ದಾರೆ. ಆಗ್ರಾದಲ್ಲಿ ನಡೆದ … Continued

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥಗೆ ಕೊಲೆ ಬೆದರಿಕೆ ; ಬಾಂಗ್ಲಾದೇಶದ ವಲಸಿಗನ ಬಂಧನ

ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಶಿರಚ್ಛೇದ ಮಾಡುವುದಾಗಿ ವೀಡಿಯೊ ಮೂಲಕ ಬಹಿರಂಗವಾಗಿ ಬೆದರಿಕೆ ಹಾಕಿದ ಬಾಂಗ್ಲಾದೇಶದ ವಲಸಿಗ ಶೇಖ್ ಅತಾಲ್ ಎಂಬಾತನನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ. ಆತನಿಂದ ಆಯುಧವನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಆರೋಪಿಯು ಯೋಗಿ ಆದಿತ್ಯನಾಥ ಅವರನ್ನು ಕೊಲ್ಲುವ ಬಗ್ಗೆ ಮಾತನಾಡುತ್ತಿರುವುದು ಮತ್ತು ಉದ್ರೇಕಕಾರಿ ಹೇಳಿಕೆಗಳನ್ನು ನೀಡಿರುವುದು … Continued

ರಝಾಕಾರರು ಹಚ್ಚಿದ ಬೆಂಕಿಯಿಂದ ನಿಮ್ಮ ಕುಟುಂಬ ಸುಟ್ಟು ಹೋಗಿದ್ದನ್ನು ಮರೆಯಬೇಡಿ ; ಮಲ್ಲಿಕಾರ್ಜುನ ಖರ್ಗೆಗೆ ನೆನಪಿಸಿದ ಯೋಗಿ

ಮುಂಬೈ: ಕಾಂಗ್ರೆಸ್‌ನ ಓಲೈಕೆ ರಾಜಕಾರಣದ ಮಾಡುತ್ತಿದೆ ಎಂದು ಆರೋಪಿಸಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮತ ಓಲೈಕೆಗಾಗಿ ತಮ್ಮ ಕುಟುಂಬದ ತ್ಯಾಗವನ್ನು ಕಾಂಗ್ರೆಸ್ ಅಧ್ಯಕ್ಷರು ಮರೆತಿದ್ದಾರೆ ಎಂದು ಮಂಗಳವಾರ ಹೇಳಿದ್ದಾರೆ. ಖರ್ಗೆಯವರ ಬಾಲ್ಯದ ದುರಂತದ ಬಗ್ಗೆ ಪ್ರಸ್ತಾಪಿಸಿದ ಯೋಗಿ ಆದಿತ್ಯನಾಥ, 1948 ರಲ್ಲಿ … Continued

ಸಿಎಂ ಯೋಗಿ ಆದಿತ್ಯನಾಥಗೆ ಕೊಲೆ ಬೆದರಿಕೆ ; ಥಾಣೆಯ ಐಟಿ ಪದವಿ ಪಡೆದ ಯುವತಿ ಬಂಧನ…

ಮುಂಬೈ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಜೀವ ಬೆದರಿಕೆ ಸಂದೇಶ ರವಾನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 24 ವರ್ಷದ ಯುವತಿಯೊಬ್ಬರನ್ನು ಬಂಧಿಸಲಾಗಿದೆ. ಮುಂಬೈ ಪೊಲೀಸರು ಫಾತಿಮಾ ಖಾನ್ ಎಂಬವರ ಮೊಬೈಲ್‌ ನಂಬರ್‌ನಿಂದ ಸಂದೇಶ ಕಳುಹಿಸಿರುವುದು ತನಿಖೆಯಿಂದ ಬೆಳಕಿಗೆ ಬಂದ ನಂತರ ಅವರನ್ನು ಬಂಧಿಸಿದ್ದಾರೆ. 10 ದಿನಗಳೊಳಗೆ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯದಿದ್ದರೆ ‘ಬಾಬಾ ಸಿದ್ದಿಕಿ ಅವರಂತೆ … Continued

ರಾಜೀನಾಮೆ ನೀಡಿ ಇಲ್ಲವೇ ಬಾಬಾ ಸಿದ್ದಿಕಿಯಂತೆ ಕೊಲ್ಲುತ್ತೇನೆ ; ಯೋಗಿ ಆದಿತ್ಯನಾಥಗೆ ಜೀವ ಬೆದರಿಕೆ

ಮುಂಬೈ : ಮುಂಬೈ ಪೊಲೀಸರಿಗೆ ಶನಿವಾರ ಸಂಜೆ ಬೆದರಿಕೆ ಸಂದೇಶವೊಂದು ಬಂದಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು 10 ದಿನಗಳಲ್ಲಿ ರಾಜೀನಾಮೆ ನೀಡದಿದ್ದರೆ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಅವರಂತೆಯೇ ಕೊಲ್ಲಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ. ಮುಂಬೈ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ಸೆಲ್‌ಗೆ ಶನಿವಾರ ಸಂಜೆ ಅಪರಿಚಿತ ಸಂಖ್ಯೆಯಿಂದ ಸಂದೇಶ ಬಂದಿದೆ. ಸಂದೇಶವನ್ನು … Continued

ಪ್ರಧಾನಿ ಮೋದಿ, ಸಿಎಂ ಯೋಗಿ ಆದಿತ್ಯನಾಥ ಹೊಗಳಿದ್ದಕ್ಕೆ ಪತ್ನಿಯ ಮೈ ಸುಟ್ಟು ತ್ರಿವಳಿ ತಲಾಖ್ ನೀಡಿದ ಗಂಡ..!

ಅಯೋಧ್ಯೆ : ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಹೊಗಳಿದ್ದಕ್ಕೆ ಮುಸ್ಲಿಂ ಮಹಿಳೆಯೊಬ್ಬರು ಪತಿಯಿಂದ ಭೀಕರ ಶಿಕ್ಷೆಗೆ ಗುರಿಯಾಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ ಪತಿ ಮೊದಲು ಪತ್ನಿಗೆ ಬೆಂಕಿ ಹಚ್ಚಿದ ಗಂಡ ನಂತರ ತ್ರಿವಳಿ ತಲಾಖ್ ನೀಡಿ ವಿಚ್ಛೇದನ ನೀಡಿದ್ದಾನೆ. ಬಹ್ರೈಚ್ ಮೂಲದ … Continued

ಉತ್ತರಪ್ರದೇಶ ವಿಧಾನಸಭೆಯಲ್ಲಿ ಕಟ್ಟುನಿಟ್ಟಾದ ‘ಲವ್ ಜಿಹಾದ್’ ಮಸೂದೆ ಅಂಗೀಕಾರ ; ಅಪರಾಧಿಗೆ ಜೀವಾವಧಿ ಶಿಕ್ಷೆಯ ಪ್ರಸ್ತಾಪ

ಲಕ್ನೋ : ‘ಉತ್ತರ ಪ್ರದೇಶ ಕಾನೂನುಬಾಹಿರ ಧಾರ್ಮಿಕ ಮತಾಂತರ (ತಿದ್ದುಪಡಿ) ಮಸೂದೆ-2024’ ಅನ್ನು ಉತ್ತರ ಪ್ರದೇಶ ವಿಧಾನಸಭೆ ಮಂಗಳವಾರ ಅಂಗೀಕರಿಸಿದೆ. ಸಂಸದೀಯ ವ್ಯವಹಾರಗಳ ಸಚಿವ ಸುರೇಶ ಖನ್ನಾ ಅವರು ಈ ತಿದ್ದುಪಡಿ ಮಸೂದೆಯನ್ನು ಸದನದಲ್ಲಿ ಸೋಮವಾರ ಮಂಡಿಸಿದ್ದರು. ಮಂಗಳವಾರ ಮಸೂದೆ ಅಂಗೀಕಾರಗೊಂಡಿದೆ. ವಂಚನೆ ಅಥವಾ ಬಲವಂತದಿಂದ ಮತಾಂತರ ಮಾಡುವ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಗರಿಷ್ಠ ಜೀವಾವಧಿ ಶಿಕ್ಷೆ … Continued

ಪೊಲೀಸರ ಕಂಡು ಪೊಲೀಸರೇ ಪರಾರಿ…! ಪೊಲೀಸರಿಂದ ಪೊಲೀಸರ ಬಂಧನ…!!

ವಾರಾಣಸಿ : ಬಿಹಾರದ ಗಡಿಯಲ್ಲಿ ಟ್ರಕ್ ಚಾಲಕರಿಂದ ಅಕ್ರಮವಾಗಿ ಹಣ ಸುಲಿಗೆ ವಿರುದ್ಧದ ಬೃಹತ್ ಕಾರ್ಯಾಚರಣೆಯಲ್ಲಿ, ಉತ್ತರ ಪ್ರದೇಶ ಸರ್ಕಾರ ಗುರುವಾರ ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ 18 ಜನರನ್ನು ಬಂಧಿಸಿದ್ದು, ಮೂವರು ಪೊಲೀಸರು ಸ್ಥಳದಿಂದ ಪರಾರಿಯಾಗಿದ್ದಾರೆ. ಎಡಿಜಿ ವಾರಾಣಸಿ ಮತ್ತು ಡಿಐಜಿ ಅಜಂಗಢ್ ನೇತೃತ್ವದ ಜಂಟಿ ತಂಡಗಳು ಬಲ್ಲಿಯಾದಲ್ಲಿನ ನರ್ಹಿ ಪೊಲೀಸ್ ಠಾಣೆ ವ್ಯಾಪ್ತಿಯ … Continued

ಚಲಿಸುವ ರೈಲಿನಲ್ಲೇ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ವ್ಯಕ್ತಿ ; ಪತ್ನಿಗೆ ಥಳಿಸಿ ಪರಾರಿ…!

ಆಘಾತಕಾರಿ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ಚಲಿಸುವ ರೈಲಿನಲ್ಲಿಯೇ ತನ್ನ ಹೆಂಡತಿಗೆ ತ್ರಿವಳಿ ತಲಾಖ್ ನೀಡಿ ನಂತರ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಏಪ್ರಿಲ್ 29 ರಂದು ಮೊಹಮ್ಮದ್ ಅರ್ಷದ್ (28) ಎಂಬಾತ ತನ್ನ ಪತ್ನಿ ಅಫ್ಸಾನಾ (26) ಅವರೊಂದಿಗೆ ಪ್ರಯಾಣಿಸುತ್ತಿದ್ದಾಗ ಝಾನ್ಸಿ ಜಂಕ್ಷನ್‌ಗೆ ಸ್ವಲ್ಪ ಮೊದಲು ಈ ಘಟನೆ ಸಂಭವಿಸಿದೆ. ರೈಲು ಝಾನ್ಸಿ ನಿಲ್ದಾಣಕ್ಕೆ ಬರುತ್ತಿದ್ದಂತೆಯೇ ಅರ್ಷದ್ … Continued

ಜ್ಞಾನವಾಪಿಯಲ್ಲಿ ಪೂಜೆ ಸಲ್ಲಿಸಿದ ಸಿಎಂ ಯೋಗಿ ಆದಿತ್ಯನಾಥ

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮಂಗಳವಾರ ಜ್ಞಾನವಾಪಿ ಆವರಣಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ವಾರಾಣಸಿಯ ನ್ಯಾಯಾಲಯವು ಹಿಂದೂ ಭಕ್ತರಿಗೆ ಜ್ಞಾನವಾಪಿ ಮಸೀದಿಯ ಮೊಹರು ಮಾಡಿದ ನೆಲಮಾಳಿಗೆಯಲ್ಲಿ ಪೂಜೆ ಮಾಡಲು ಅನುಮತಿ ನೀಡಿದ ಕೆಲವು ದಿನಗಳ ನಂತರ ಆವರು ಆಗಮಿಸಿ ಅಲ್ಲಿ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ … Continued