ದೇಶಕ್ಕೆ ಅವಮಾನ : ಎಐ ಸಮ್ಮಿಟ್‌ನಲ್ಲಿ ಯುವ ಕಾಂಗ್ರೆಸ್ ‘ಶರ್ಟ್‌ಲೆಸ್’ ಪ್ರತಿಭಟನೆಗೆ ವಿಪಕ್ಷಗಳಿಂದಲೇ ಅಸಮಾಧಾನ

ನವದೆಹಲಿ/ಝಾನ್ಸಿ: ಭಾರತ ಮಂಟಪದಲ್ಲಿ ನಡೆದ ‘ಎಐ (AI) ಇಂಪ್ಯಾಕ್ಟ್ ಸಮ್ಮಿಟ್’ನಲ್ಲಿ ಭಾರತೀಯ ಯೂತ್ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ  ಶರ್ಟ್‌ಲೆಸ್‌  ಪ್ರತಿಭಟನೆಯನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ ಇಂಡಿಯಾ (INDIA) ಮೈತ್ರಿಕೂಟದ ಮಿತ್ರ ಪಕ್ಷದ ನಾಯಕ ಅಖಿಲೇಶ ಯಾದವ್ ತೀವ್ರವಾಗಿ ಟೀಕಿಸಿದ್ದಾರೆ. ಈ ಘಟನೆಯು ದೇಶಕ್ಕೆ “ಅವಮಾನ” ತಂದಿದೆ ಎಂದು ಅವರು ಶನಿವಾರ ಹೇಳಿದ್ದಾರೆ. ಝಾನ್ಸಿಯಲ್ಲಿ ಸುದ್ದಿಗಾರರೊಂದಿಗೆ … Continued

ವೀಡಿಯೊ..| ವಿದ್ಯಾರ್ಥಿಗೆ ಮನಸೋ ಇಚ್ಛೆ ಥಳಿಸಿದ ಕೋಚಿಂಗ್ ಸೆಂಟರ್ ಸಂಸ್ಥಾಪಕ ; ವ್ಯಾಪಕ ಆಕ್ರೋಶ

ಆಂಧ್ರಪ್ರದೇಶದಲ್ಲಿ ಖಾಸಗಿ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನ ಸಂಸ್ಥಾಪಕರೊಬ್ಬರು ವಿದ್ಯಾರ್ಥಿಯೊಬ್ಬನಿಗೆ ಥಳಿಸಿದ ಕೆಲ ತಿಂಗಳ ಹಿಂದಿನ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಕೋಚಿಂಗ್ ಇನ್‌ಸ್ಟಿಟ್ಯೂಟ್ ‘ಇಂಡಿಯನ್ ಆರ್ಮಿ ಕಾಲಿಂಗ್’ ಸಂಸ್ಥಾಪಕ ಬಸವ ವೆಂಕಟ ರಮಣ ಎಂದು ಗುರುತಿಸಲಾದ ವ್ಯಕ್ತಿಯೊಬ್ಬ ವಿದ್ಯಾರ್ಥಿಗೆ ಬೆಲ್ಟ್‌ನಿಂದ ಥಳಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ವಿದ್ಯಾರ್ಥಿಯು ಅಳುವುದು ಮತ್ತು ತನ್ನನ್ನು ತಾನು ರಕ್ಷಿಸಿಕೊಳ್ಳಲು ಒದ್ದಾಡುತ್ತಿರುವುದನ್ನು … Continued

ತಿರುಪತಿ ಲಡ್ಡು ತಯಾರಿಸಲು ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢ ಎಂದ ಟಿಡಿಪಿ…!

ಅಮರಾವತಿ : ಆಂಧ್ರಪ್ರದೇಶದ ತಿರುಪತಿ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡುವ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಇದೆ ಎಂದು ಲ್ಯಾಬ್ ವರದಿ ದೃಢಪಡಿಸಿದೆ. ಹಿಂದಿನ ವೈಎಸ್‌ಆರ್ ಕಾಂಗ್ರೆಸ್ (ವೈಎಸ್‌ಆರ್‌ಸಿಪಿ) ಸರ್ಕಾರ ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಗುಣಮಟ್ಟವಿಲ್ಲದ ಪದಾರ್ಥಗಳನ್ನು ಬಳಸಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಆರೋಪಿಸಿದ್ದರು. … Continued

ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ಮತ ಎಣಿಕೆ: ಭರ್ಜರಿ ಗೆಲುವಿನತ್ತ ಟಿಡಿಪಿ

ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ಮತಗಳ ಎಣಿಕೆ ಪ್ರಗತಿಯಲ್ಲಿದೆ, ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (ಟಿಡಿಪಿ) ಪ್ರಚಂಡ ವಿಜಯದತ್ತ ಸಾಗುತ್ತಿದೆ. ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಕುಪ್ಪಂ ಕ್ಷೇತ್ರದಲ್ಲಿ 893 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದರೆ, ಜೆಎಸ್‌ಪಿ ಮುಖ್ಯಸ್ಥ ಪವನ ಕಲ್ಯಾಣ ಪಿಠಾಪುರಂ ವಿಧಾನಸಭೆಯಿಂದ 7,997 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಆಂಧ್ರಪ್ರದೇಶದಲ್ಲಿ ಒಟ್ಟು … Continued

ವೀಡಿಯೊ..| ಆಂಧ್ರದಲ್ಲೀಗ ‘ಕಾಂಡೋಮ್ ರಾಜಕೀಯ’..! ಪಕ್ಷದ ಚಿಹ್ನೆಯುಳ್ಳ ಕಾಂಡೋಮ್‌ ಪ್ಯಾಕೆಟ್‌ ಹಂಚಲು ವೈಎಸ್‌ಆರ್‌ ಕಾಂಗ್ರೆಸ್‌-ಟಿಡಿಪಿ ಪೈಪೋಟಿ..!!

ಹೈದರಾಬಾದ್‌ : ಆಂಧ್ರಪ್ರದೇಶ ರಾಜಕೀಯ ಪಾತಾಳಕ್ಕೆ ಕುಸಿದಿದ್ದು, ಈಗ ‘ನಿರೋಧ’ ರಾಜಕೀಯದ ವರೆಗೆ ಬಂದುನಿಂತಿದೆ ಎಂದು ಹೇಳಬಹುದಾಗಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ, ರಾಜಕೀಯ ಪಕ್ಷಗಳು ಮತದಾರರನ್ನು ಒಲಿಸಿಕೊಳ್ಳಲು ಮತ್ತು ವಿರೋಧ ಪಕ್ಷಗಳನ್ನು ದೂಷಿಸಲು ವಿನೂತನ ರಣತಂತ್ರವನ್ನು ಮಾಡುತ್ತಿವೆ. ಈಗ ಆಂಧ್ರಪ್ರದೇಶದ ರಾಜಕೀಯ ಪಕ್ಷಗಳು ಕಾಂಡೋಮ್ ಪ್ಯಾಕೆಟ್‌ಗಳ ತಮ್ಮ ಲೋಗೋ ಮುದ್ರಿಸಿ ಸಾರ್ವಜನಿಕರಿಗೆ ಹಂಚುತ್ತಿವೆ ಎಂದು ಆರೋಪಿಸಲಾಗಿದೆ. ಈ … Continued

ಸೇರಿದ 10 ದಿನಕ್ಕೇ ಜಗನ್ ರೆಡ್ಡಿ ವೈಎಸ್‌ಆರ್‌ಸಿಪಿ ಪಕ್ಷ ತೊರೆದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು

ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷಕ್ಕೆ (ವೈಎಸ್‌ಆರ್‌ಸಿಪಿ) ಸೇರಿದ ಕೇವಲ ಎಂಟು ದಿನಗಳ ನಂತರ ಕ್ರಿಕೆಟಿಗ ಅಂಬಟಿ ರಾಯುಡು ಅವರು ಶನಿವಾರ ಪಕ್ಷ ತೊರೆಯುವ ನಿರ್ಧಾರ ಪ್ರಕಟಿಸಿದ್ದಾರೆ. ರಾಯುಡು ಜೂನ್ 2023 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು ಮತ್ತು ರಾಜಕೀಯಕ್ಕೆ ಸೇರುವ ಆಸಕ್ತಿಯನ್ನು ವ್ಯಕ್ತಪಡಿಸಿದರು. ರಾಯುಡು ತಮ್ಮ ಎಕ್ಸ್ ಪೋಸ್ಟ್‌ನಲ್ಲಿ, “ನಾನು ವೈಎಸ್‌ಆರ್‌ಸಿಪಿ ಪಕ್ಷವನ್ನು … Continued