ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು

ಚಿತ್ರದುರ್ಗ:  ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ದಂಪತಿ, ಇಬ್ಬರು ಪುತ್ರರು ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಗ್ರಾಮದ ಬಳಿ ನಡೆದ ಬಗ್ಗೆ ವರದಿಯಾಗಿದೆ.
ಮೃತರನ್ನು ಹೊಳಲ್ಕೆರೆ ತಾಲ್ಲೂಕಿನ ಬಿ.ದುರ್ಗಾ ಗ್ರಾಮದ ನಾಗರಾಜ (43), ಪತ್ನಿ ಶೈಲಜಾ (38), ಪುತ್ರ ವೀರೇಶ (15), ಸಂತೋಷ (13) ಎಂದು ಗುರುತಿಸಲಾಗಿದೆ.

ನಾಗರಾಜ ಅವರು ಕುಟುಂಬ ಸಮೇತ ದಾವಣಗೆರೆ‌ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೆಬ್ಬಳಗೆರೆ ಗ್ರಾಮದ ಜಾತ್ರೆಗೆ ತೆರಳಿದ್ದರು. ಬುಧವಾರ ತಡರಾತ್ರಿ ಸ್ವಗ್ರಾಮಕ್ಕೆ ಒಂದೇ ದ್ವಿಚಕ್ರ ವಾಹನದಲ್ಲಿ ನಾಲ್ವರು ಮರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಹೊಳಲ್ಕೆರೆ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಅತಿ ವೇಗವಾಗಿ ಬಂದ ಖಾಸಗಿ ಬಸ್ ಬಲಬದಿಗೆ ನುಗ್ಗಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಹೀಗಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಅಪಘಾತದ ಬಳಿಕ ಬಸ್ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement