ಮುಖ್ಯಮಂತ್ರಿ ಆಯ್ಕೆ ಇನ್ನೂ ಅಂತಿಮವಾಗಿಲ್ಲ, ಚರ್ಚೆ ನಡೆಯುತ್ತಿದೆ: ಸುರ್ಜೇವಾಲಾ ಸ್ಪಷ್ಟನೆ

ನವದೆಹಲಿ : ಮುಖ್ಯಮಂತ್ರಿ ಹುದ್ದೆಗೆ ಯಾರು ಎಂಬುದು ಇನ್ನೂ ಅಂತಿಮವಾಗಿಲ್ಲ. ಯಾವುದೇ ಊಹಾಪೋಹಗಳಿಗೆ ಕಿವಿಕೊಡಬೇಡಿ. ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ನಿವಾಸದ ಬಳಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಾರು ಎಂಬದುರ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರೇ ತೀರ್ಮಾನ ಮಾಡುತ್ತಾರೆ. ಅವರ ನೇತೃತ್ವದಲ್ಲಿಯೇ ಸಮಾಲೋಚನೆ ನಡೆಯುತ್ತಿದೆ. ಮುಖ್ಯಮಂತ್ರಿ ಆಯ್ಕೆ ಬಗ್ಗೆ ತಪ್ಪು ಮಾಹಿತಿ ಹರಡಲಾಗುತ್ತಿದೆ. ಅಲ್ಲಿಯವರೆಗೆ ಯಾವುದೇ ಊಹಾಪೋಹಗಳಿಗೆ ಕಿವಿಕೊಡಬೇಡಿ. ಇಂದು ಅಥವಾ ನಾಳೆ ಅಂತಿಮಗೊಳಿಸಲಾಗುತ್ತದೆ ಎಂದರು.
ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಎಂಬ ವದಂತಿಗಳು ಹರಡಿದ್ದು, ರಾಜ್ಯದ ಹಲವೆಡೆ ಸಿದ್ದರಾಮಯ್ಯ ಬೆಂಬಲಿಗರಿಂದ ಹಲವೆಡೆ ಸಂಭ್ರಮಾಚರಣೆ ಆರಂಭವಾಗಿತ್ತು. ಇದರ ಬೆನ್ನಲ್ಲೇ ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ.
ಸಿದ್ಧರಾಮಯ್ಯ ಹಾಗೂ ಡಿಕೆ ಶಿವಕುಮಾರ ಇಬ್ಬರೂ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದರು. ನಂತರ ಖರ್ಗೆ ಅವರು ಈ ಬಗ್ಗೆ ಚರ್ಚಿಸುತ್ತಿದ್ದಾರೆ. ಮುಖ್ಯಮಂತ್ರಿಗೆ ಹುದ್ದೆಗೆ ಯಾರು ಎಂಬ ಬಗ್ಗೆ ಈವರೆಗೆ ಅಂತಿಮ ನಿರ್ಧಾರವಾಗಿಲ್ಲ. ಅವಿರೋಧವಾಗಿ ಆಯ್ಕೆ ಮಾಡಲು ಪ್ರಯತ್ನಿಸಲಾಗುತ್ತಿದೆ. ಒಂದೆರಡು ದಿನಗಳಲ್ಲಿ ತೀರ್ಮಾನವಾಗುತ್ತದೆ. ಹಾಗೂ ನೂತನ ಸಂಪುಟ ರಚಿಸಲಾಗುತ್ತದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಮಹಿಳೆ ಅಪಹರಣ ಪ್ರಕರಣ ; ಎಚ್‌.ಡಿ. ರೇವಣ್ಣ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನದ ಭೀತಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement