ಪಂಜಾಬ್ ಗೆಲುವಿನ ನಂತರ ಈಗ ಪಶ್ಚಿಮ ಬಂಗಾಳದ ಮೇಲೆ ಆಮ್‌ ಆದ್ಮಿ ಪಾರ್ಟಿ ಕಣ್ಣು: 2023ರ ಪಂಚಾಯತ ಚುನಾವಣೆಯಲ್ಲಿ ಸ್ಪರ್ಧೆ ಘೋಷಣೆ

ನವದೆಹಲಿ: ಪಂಜಾಬ್ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ನಂತರ, ಆಮ್ ಆದ್ಮಿ ಪಕ್ಷವು ಪಶ್ಚಿಮ ಬಂಗಾಳದಲ್ಲಿ 2023 ರ ಪಂಚಾಯತ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧವಾಗಿದೆ.
ಎಎಪಿಯ ಬಂಗಾಳ ಉಸ್ತುವಾರಿ ಸಂಜೋಯ್ ಬಸು ಸೋಮವಾರ, “ಆಮ್ ಆದ್ಮಿ ಪಕ್ಷವು ಪಶ್ಚಿಮ ಬಂಗಾಳದಲ್ಲಿ 2023 ರ ಪಂಚಾಯತ ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ಪಕ್ಷದ ಹೈಕಮಾಂಡ್ ಸೂಚನೆ ಮೇರೆಗೆ ಸ್ಥಳೀಯ ಘಟಕ ಈಗಾಗಲೇ ಪ್ರಚಾರ ಆರಂಭಿಸಿದೆ. ಎಎಪಿ ಮಾರ್ಚ್ 13 ರಂದು ಕೋಲ್ಕತ್ತಾದಲ್ಲಿ ರ್ಯಾಲಿಯನ್ನು ನಡೆಸಿದೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಪಂಚಾಯತ ಚುನಾವಣೆಗೆ ಕೇವಲ ಒಂದು ವರ್ಷ ಬಾಕಿ ಇರುವಾಗ ಆಮ್ ಆದ್ಮಿ ಪಕ್ಷವು ತೃಣಮೂಲ ಕಾಂಗ್ರೆಸ್ ಭದ್ರಕೋಟೆಯಲ್ಲಿ ತನ್ನ ನೆಲೆ ಸ್ಥಾಪಿಸಲು ಪಂಚಾಯತ ಚುನಾವಣೆಗಳ ಮೇಲೆ ಕಣ್ಣಿಟ್ಟಿದೆ.
ಇದಲ್ಲದೇ ಪಕ್ಷವು ಗುಜರಾತ್, ಹಿಮಾಚಲ ಪ್ರದೇಶ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಯಲ್ಲೂ ಸ್ಪರ್ಧಿಸಲು ನಿರ್ಧರಿಸಿದೆ. ಇಂದು, ಸೋಮವಾರ ಹರಿಯಾಣದ 15 ಮಾಜಿ ಶಾಸಕರು, ಸಚಿವರು ಮತ್ತು ಸಾಮಾಜಿಕ ಕಾರ್ಯಕರ್ತರು ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಸೇರಿದರು.

ಪ್ರಮುಖ ಸುದ್ದಿ :-   ಇಂದು ಕರ್ನಾಟಕದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ; ಯಲ್ಲೋ ಅಲರ್ಟ್‌

ಈ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಂಡ ನಂತರ, ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರು ಈ ವರ್ಷದ ಕೊನೆಯಲ್ಲಿ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಸ್ಪರ್ಧಿಸಲಿದೆ. ಹರ್ಯಾಣದಲ್ಲಿ ಪಕ್ಷವು ಸರ್ಕಾರ ರಚಿಸುವ ವಿಶ್ವಾಸವಿದೆ ಎಂದು ಜೈನ್ ಹೇಳಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ತನ್ನ ಪ್ರಚಂಡ ವಿಜಯದ ನಂತರ ಎಎಪಿ ಈಗ ರಾಷ್ಟ್ರೀಯವಾಗಿ ವಿಸ್ತರಿಸಲು ಯೋಜನೆ ರೂಪಿಸುತ್ತಿದೆ. ಎಎಪಿ ಪಕ್ಷವು ಈಗ ಕಾಂಗ್ರೆಸ್‌ಗೆ ಪರ್ಯಾಯ ಎಂದು ಆ ಪಕ್ಷದ ನಾಯಕರು ನಿರಂತರವಾಗಿ ಹೇಳುತ್ತಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement