ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ಸಿಗಲ್ಲ : ಸುಪ್ರೀಂ ಕೋರ್ಟ್

ನವದೆಹಲಿ: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಕ್ಕೆ ಸೇರಿದ ವ್ಯಕ್ತಿಗಳು ಮಾತ್ರ ಪರಿಶಿಷ್ಟ ಜಾತಿ (SC) ಸ್ಥಾನಮಾನವನ್ನು ಪಡೆಯಲು ಅರ್ಹರು. ಇತರ ಧರ್ಮಗಳಿಗೆ ಮತಾಂತರಗೊಂಡರೆ ಅವರು ಈ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ.
ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮವನ್ನು ಅನುಸರಿಸುವ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ ಸದಸ್ಯ ಎಂದು ಪರಿಗಣಿಸಲಾಗುವುದಿಲ್ಲ ಎಂದು ಅದು ಹೇಳಿದೆ.
ನ್ಯಾಯಮೂರ್ತಿಗಳಾದ ಪಿ.ಕೆ. ಮಿಶ್ರಾ ಮತ್ತು ಮನ್ಮೋಹನ್ ಅವರನ್ನೊಳಗೊಂಡ ನ್ಯಾಯಪೀಠ, ಪಾಸ್ಟರ್ ಚಿಂತಾಡ ಆನಂದ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ಮಾಡುವ ವೇಳೆ ಈ ತೀರ್ಪು ನೀಡಿತು. ಚಿಂತಾಡ ಆನಂದ ಅಕ್ಕಲ ರಾಮಿರೆಡ್ಡಿ ಸೇರಿದಂತೆ ಕೆಲವರಿಂದ ಜಾತಿ ಆಧಾರಿತ ಅವಹೇಳನ ಮಾಡಿದ್ದಾಗಿ ಆರೋಪಿಸಿದ್ದರು. ಅವರ ದೂರಿನ ಆಧಾರದ ಮೇಲೆ ಪೊಲೀಸರು ಎಸ್‌ಸಿ/ಎಸ್‌ಟಿ (ಅತ್ಯಾಚಾರ ತಡೆ) ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದರು.

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ದಲಿತ ವ್ಯಕ್ತಿಯು, ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ’ಯಡಿ (SC/ST Act) ರಕ್ಷಣೆ ಕೋರಲು ಸಾಧ್ಯವಿಲ್ಲ. ಏಕೆಂದರೆ ಮತಾಂತರದ ನಂತರ ಅವರು ಜಾತಿ ಆಧಾರಿತ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ ಎಂದು ಅದು ಹೇಳಿದೆ.
ಹೈಕೋರ್ಟ್ ತೀರ್ಪು ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಪಿ.ಕೆ. ಮಿಶ್ರಾ ಮತ್ತು ಮನಮೋಹನ ಅವರನ್ನೊಳಗೊಂಡ ಪೀಠವು ಈ ತೀರ್ಪು ನೀಡಿದೆ.
ಚಿಂತಾಡ ಆನಂದ ಎಂಬ ಪಾದ್ರಿ ತನಗೆ ಜಾತಿ ನಿಂದನೆ ಮಾಡಲಾಗಿದೆ ಎಂದು ಅಕ್ಕಲ ರಾಮಿರೆಡ್ಡಿ ಎಂಬುವವರ ವಿರುದ್ಧ ಎಸ್‌ಸಿ/ಎಸ್‌ಟಿ(SC/ST) ಕಾಯ್ದೆಯಡಿ ದೂರು ನೀಡಿದ್ದರು. ಆದರೆ, ಆನಂದ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿರುವುದರಿಂದ ಅವರಿಗೆ ಈ ಕಾಯ್ದೆಯಡಿ ರಕ್ಷಣೆ ಸಿಗುವುದಿಲ್ಲ ಎಂದು ಹೈಕೋರ್ಟ್ ಎಫ್‌ಐಆರ್ (FIR) ರದ್ದುಗೊಳಿಸಿತ್ತು. ಕ್ರೈಸ್ತ ಧರ್ಮದಲ್ಲಿ ಜಾತಿ ವ್ಯವಸ್ಥೆ ಇಲ್ಲದಿರುವುದರಿಂದ, ಮತಾಂತರಗೊಂಡ ವ್ಯಕ್ತಿಯ ಬಳಿ ಪ್ರಮಾಣಪತ್ರವಿದ್ದರೂ ಅದು ಮಾನ್ಯವಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಪ್ರಮುಖ ಸುದ್ದಿ :-   ಕೇವಲ 23ನೇ ವಯಸ್ಸಿಗೆ 19 ಸರ್ಕಾರಿ ಪರೀಕ್ಷೆ ಪಾಸ್ ! ರಾಷ್ಟ್ರಪತಿಯಿಂದ 'ಅಟ್-ಹೋಮ್' ಗೌರವಕ್ಕೆ ಆಯ್ಕೆಯಾದ ಯುವತಿ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement