ಬೆಳಗಾವಿ | ಎಸ್‌ಡಿಆರ್‌ಎಫ್‌ ಸಿಪಿಐ ಆತ್ಮಹತ್ಯೆ

ಬೆಳಗಾವಿ: ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್)ಯ ಸಿಪಿಐ ಶ್ರೀಶೈಲ ಚೌಗಲಾ (37) ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಚನ್ನಮ್ಮ ನಗರದಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ.
ಚೌಗಲೆ ಅವರು ಮನೆಯ ಕೊಠಡಿಯ ಬಾಗಿಲು ಹಾಕಿಕೊಂಡಿದ್ದ ವೇಳೆ ಅನುಮಾನಗೊಂಡ ಪತ್ನಿ ತಕ್ಷಣವೇ ಎಸ್‌ಡಿಆರ್‌ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಕೊಠಡಿ ಬಾಗಿಲು ಮುರಿದು ಅವರನ್ನು ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದರು. ಆದರೆ ಅಷ್ಟರಲ್ಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement