ಮುಡಾ ಪ್ರಕರಣ: ಮಾಜಿ ಆಯುಕ್ತ ದಿನೇಶಕುಮಾರ ಇ.ಡಿ. ವಶಕ್ಕೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (Muda) ಹಗರಣ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ವಿಚಾರಣೆ ಆಗಮಿಸಿದ್ದ ಮುಡಾ ಮಾಜಿ ಆಯುಕ್ತ ಜಿ.ಟಿ ದಿನೇಶಕುಮಾರ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಮುಡಾ ಹಗರಣ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಇಡಿ ಜಿ.ಟಿ ದಿನೇಶಕುಮಾರ ಅವರಿಗೆ ನೋಟಿಸ್ ನೀಡಿತ್ತು. ಮಂಗಳವಾರ ದಿನೇಶಕುಮಾರ ಬೆಂಗಳೂರಿನ ಶಾಂತಿನಗರದಲ್ಲಿ ಇಡಿ ಕಚೇರಿಗೆ ಆಗಮಿಸಿದ್ದರು. ಈ ವೇಳೆ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ ನಂತರ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯ ಸರ್ಕಾರ ಮುಡಾ ಅಕ್ರಮ ಪ್ರಕರಣದಲ್ಲಿ ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್ ವಿರುದ್ಧ ತನಿಖೆ ನಡೆಸಲು ಹಸಿರು ನಿಶಾನೆ ನೀಡಿತ್ತು. ಇದರ ಬೆನ್ನಲ್ಲೇ ಅವರನ್ನು ಇ.ಡಿ.ವಶಕ್ಕೆ ಪಡೆದಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement