ಇಬ್ಬರು ಪುಟಾಣಿ ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಂದ ತಂದೆ, ಪತ್ನಿ ಮೇಲೂ ಹಲ್ಲೆ

ಮಂಡ್ಯ : ತಂದೆಯೇ ತನ್ನ ಇಬ್ಬರು ಪುಟ್ಟ ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ತಂದೆಯಿಂದಲೇ ಸಾವಿಗೀಡಾದ ಮಕ್ಕಳನ್ನು ಆದಿತ್ಯ(3) ಹಾಗೂ ಅಮೂಲ್ಯ(4) ಎಂದು ಗುರುತಿಸಲಾಗಿದೆ. ಮಕ್ಕಳನ್ನು ಕೊಂದ ಆರೋಪಿಯನ್ನು ಶ್ರೀಕಾಂತ ಹೇಳಲಾಗಿದೆ. ಈತ ತನ್ನ ಪತ್ನಿ ಲಕ್ಷ್ಮೀ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದಾನೆ.
ಕಲಬುರಗಿ ಜಿಲ್ಲೆ ಜೇವರ್ಗಿಯವರಾದ ಈ ಕುಟುಂಬ ಮರಳಗಾಲದ ಆಲೆಮನೆಯಲ್ಲಿ ಕೆಲಸ ಮಾಡುತ್ತಿತ್ತು. ಇಂದು, ಗುರುವಾರ ಮುಂಜಾನೆ 4 ಗಂಟೆಯ ವೇಳೆ ಮಕ್ಕಳನ್ನು ಕೊಂದು ಪತ್ನಿ ಮೇಲೆ ಹಲ್ಲೆ ನಡೆಸಿ ಶ್ರೀಕಾಂತ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ. ಗಂಭೀರ ಗಾಯಗೊಂಡ ಲಕ್ಷ್ಮೀಯನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಘಟನೆಗೆ ಕೌಟುಂಬಿಕ ಕಲಹವೇ ಕಾರಣ ಎಂದು ಶಂಕಿಸಲಾಗಿದ್ದು, ಮೊದಲು ಪತ್ನಿಗೆ ಸುತ್ತಿಗೆಯಿಂದ ಹೊಡೆದಿದ್ದು, ಅವಳು ನೆಲಕ್ಕೆ ಕುಸಿದು ಬಿದ್ದ ನಂತರ ಮಕ್ಕಳಿಗೆ ಸುತ್ತಿಗೆಯಿಂದ ಹೊಡೆದಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement