ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳ: ಕರ್ನಾಟಕ ಸೇರಿ 4 ರಾಜ್ಯಗಳ ಮೇಲೆ ಕೇಂದ್ರದ ನಿಗಾ

ನವದೆಹಲಿ: ಕೊರೊನಾ ವೈರಸ್ ಸೋಂಕು ಪ್ರಕರಣಗಳು ದೇಶಾದ್ಯಂತ ದಿನೇ ದಿನೇ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು ಕರ್ನಾಟಕ, ಮಹಾರಾಷ್ಟ್ರ, ಕೇರಳ ಹಾಗೂ ದೆಹಲಿ ರಾಜ್ಯಗಳ ಮೇಲೆ ನಿಗಾ ವಹಿಸಿದೆ.
ನಾಲ್ಕೂ ರಾಜ್ಯಗಳಲ್ಲಿ 5 ಹಂತದ ಕೊರೊನಾ ವೈರಸ್ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಪರೀಕ್ಷೆ ಹೆಚ್ಚಳ ಮಾಡುವಂತೆ ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯಗಳಿಗೆ ಸೂಚಿಸಿದೆ.
ಕರ್ನಾಟಕ ಸೇರಿದಂತೆ 4 ರಾಜ್ಯಗಳು ಕೋವಿಡ್ ಸೋಂಕು ಪ್ರಕರಣಗಳ ನಿರ್ವಹಣೆಗಾಗಿ ಕ್ಲಸ್ಟರ್‌ಗಳನ್ನು ರಚನೆ ಮಾಡಿಕೊಂಡು ನಿಗಾ ವಹಿಸಬೇಕು ಹಾಗೂ ಕೋವಿಡ್ ಮಾರ್ಗಸೂಚಿಗಳ ಕಡ್ಡಾಯ ಪಾಲನೆಗೆ ಕ್ರಮ ವಹಿಸಬೇಕು ಎಂದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ.

ಕರ್ನಾಟಕ, ಕೇರಳ, ಮಹಾರಾಷ್ಟ್ರ, ತೆಲಂಗಾಣ ಹಾಗೂ ತಮಿಳುನಾಡು ರಾಜ್ಯಗಳಿಗೆ ಇತ್ತೀಚೆಗೆ ಪತ್ರ ಬರೆದಿದ್ದ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್, ಹೊಸ ಕ್ಲಸ್ಟರ್‌ಗಳು ಸೃಷ್ಟಿ ಆಗದಂತೆ ಕಟ್ಟೆಚ್ಚರ ವಹಿಸಿ ಎಂದು ಸೂಚಿಸಿದ್ದರು. ಕೋವಿಡ್ ಪರೀಕ್ಷಾ ಪ್ರಮಾಣ ಹೆಚ್ಚಳ ಮಾಡುವಂತೆಯೂ ರಾಜ್ಯಗಳಿಗೆ ಸೂಚನೆ ನೀಡಿದೆ.
ಕಳೆದ 24 ಗಂಟೆಗಳಲ್ಲಿ 7,240 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಗುರುವಾರದ ತಿಳಿಸಿದೆ.
ಬುಧವಾರ ಕೂಡಾ ದೇಶದಲ್ಲಿ 5,233 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದವು. ಮಹಾರಾಷ್ಟ್ರದಲ್ಲಿ ಬುಧವಾರ ಒಂದೇ ದಿನ 2,701 ಹೊಸ ಕೋವಿಡ್ ಕೇಸ್‌ಗಳು ದೃಢಪಟ್ಟಿದ್ದವು.

ಪ್ರಮುಖ ಸುದ್ದಿ :-   ಸಿಇಟಿ ಫಲಿತಾಂಶ ಫಲಿತಾಂಶ ಪ್ರಕಟ: ಎಂಜಿನಿಯರಿಂಗ್ ವಿಭಾಗದಲ್ಲಿ ಭವೇಶ ರಾಜ್ಯಕ್ಕೆ ಪ್ರಥಮ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement