ಬೆಂಗಳೂರು: ಮನೆಯಲ್ಲೇ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನ ಭವಾನಿನಗರದಲ್ಲಿ 19 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ತನ್ನ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ವಿದ್ಯಾರ್ಥಿಯನ್ನು ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ವಿಶು ಉತ್ತಪ್ಪ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕಂಪನಿಯೊಂದರಲ್ಲಿ ಭದ್ರತಾ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ತಮ್ಮಯ್ಯ ಅವರ ಪುತ್ರ ವಿಶು ಉತ್ತಪ್ಪ ಮನೆಯಲ್ಲಿ ಯಾರೂ ಇಲ್ಲದ ವೇಳೆ ಡಬಲ್ ಬ್ಯಾರಲ್ ಗನ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ತಮ್ಮಯ್ಯ ಕೊಡಗು ಜಿಲ್ಲೆಯವರಾಗಿದ್ದು, ಕಳೆದ 15 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ತನ್ನ ತಂದೆಯ ಬಂದೂಕಿನಿಂದ ಗುಂಡು ಹಾರಿಸುವ ಮೊದಲು ಅವನು ತನ್ನ ಹೆತ್ತವರಿಗೆ ಕರೆ ಮಾಡಿದ್ದ.

ನಾನು ನನ್ನ ಹೆಂಡತಿಯೊಂದಿಗೆ ಪಡಿತರ ಖರೀದಿಸಲು ಹೊರಗೆ ಹೋದಾಗ ನನ್ನ ಮಗ ನನಗೆ ಕರೆ ಮಾಡಿದ್ದ. ಆತ ಮೊಬೈಲ್‌ ಕರೆಯಲ್ಲಿ ತಾಯಿಗೆ ಕ್ಷಮಿಸಿ ಎಂದು ಹೇಳಿದ್ದಾನೆ ಮತ್ತು ಸಂಪರ್ಕ ಕಡಿತಗೊಳಿಸಿದ್ದಾನೆ. ನಾವು ಮನೆಗೆ ಮರಳಿದಾಗ ಆತ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ವಿಶು ಅವರ ತಂದೆ ತಮ್ಮಯ್ಯ ಸುದ್ದಿವಾಹಿನಿಯೊಂದಕ್ಕೆ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೋಷಕರ ಹೇಳಿಕೆ ಪ್ರಕಾರ ಆತ ಓದಲು ಸ್ವಲ್ಪಕಷ್ಟಪಡುತ್ತಿದ್ದ.
“ಬುಧವಾರ ಸಂಜೆ 7 ಗಂಟೆ ಸುಮಾರಿಗೆ 19 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ತನ್ನ ತಂದೆಯ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮಲ್ಲಿಕಾರ್ಜುನ ಬಾಲದಂಡಿ ಹೇಳಿದರು.
ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಮತ್ತು ಬ್ಯಾಲಿಸ್ಟಿಕ್ ತಂಡ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ವಿದ್ಯಾರ್ಥಿ ತಾನೇ ಗುಂಡು ಹಾರಿಸಿಕೊಂಡ ಡಬಲ್ ಬ್ಯಾರೆಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪ್ರಕರಣ : ಮಾಜಿ ಶಾಸಕ ಪ್ರೀತಂಗೌಡ ಆಪ್ತರನ್ನು ವಶಕ್ಕೆ ಪಡೆದ ಎಸ್ಐಟಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement