ಕಾಂಗ್ರೆಸ್ಸಿನಲ್ಲಿ ಮುಗಿಯದ ಸಿಎಂ ಆಯ್ಕೆ ಕಗ್ಗಂಟು : ನಾಳೆ ಬೆಳಿಗ್ಗೆ ಹೈಕಮಾಂಡ್ ಮತ್ತೊಂದು ಸಭೆ, ನಂತರ ಸಿಎಂ ಹೆಸರು ಘೋಷಣೆ ಸಾಧ್ಯತೆ

ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಮುಂದಿನ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ದೆಹಲಿಯಲ್ಲಿ ನಿನ್ನೆಯಿಂದ ಸಾಲು ಸಾಲು ಸಭೆಗಳು ನಡೆಯುತ್ತಿದ್ದರೂ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂದು ಇನ್ನೂ ಅಂತಿಮಗೊಳಿಸಲು ಸಾಧ್ಯವಾಗಿಲ್ಲ. ನಾಳೆ, ಬುಧವಾರ ದೆಹಲಿಯಲ್ಲಿ ಬೆಳಿಗ್ಗೆ 11ಕ್ಕೆ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಂತಿಮ ಸಭೆ ನಡೆಯಲಿದ್ದು, ಬಳಿಕ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರೆಂಬುದನ್ನು ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.
ಮುಖ್ಯಮಂತ್ರಿ ಆಯ್ಕೆ ಬಗ್ಗೆ ದೆಹಲಿಯಲ್ಲಿ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆಗಳನ್ನು ನಡೆಸಲಾಯಿತು. ಮೊದಲು ರಾಹುಲ್ ಗಾಂಧಿ ಸಮ್ಮುಖದಲ್ಲಿ ಕೆ.ಸಿ ವೇಣುಗೋಪಾಲ, ರಣದೀಪ್‌ ಸುರ್ಜೇವಾಲಾ ಸೇರಿದಂತೆ ಕೆಲವರು ಭಾಗಿಯಾಗಿದ್ದರು. ಆ ಬಳಿಕ ಮುಖ್ಯಮಂತ್ರಿ ಹುದ್ದೆಯ ಸ್ಪರ್ಧೆಯಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ. ಶಿವಕುಮಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಖರ್ಗೆ ಜೊತೆ ಪ್ರತ್ಯೇಕ ಪ್ರತ್ಯೇಕವಾಗಿ ಚರ್ಚಿಸಿದರು.
ಶಿವಕುಮಾರ ಹಾಗೂ ಸಿದ್ದರಾಮಯ್ಯ ಇಬ್ಬರು ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ ಪಟ್ಟು ಸಡಿಲಿಸಿಲ್ಲ ಎಂದು ಹೇಳಲಾಗಿದೆ. ಅವರು ತಮ್ಮ ಪಟ್ಟಿ ಬಿಡದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಸರು ಘೋಷಣೆಯಾಗುವುದು ಮತ್ತೊಂದು ದಿನ ಮುಂದಕ್ಕೆ ಹೋಗಿದೆ ಎನ್ನಲಾಗಿದೆ.
ಖರ್ಗೆ ಭೇಟಿಯಾದ ವೇಳೆ ಕೊಟ್ಟರೆ ತಮಗೆ ಮುಖ್ಯಮಂತ್ರಿ ಹುದ್ದೆ ಕೊಡಿ, ಇಲ್ಲದಿದ್ದರೆ ಯಾವುದೇ ಹುದ್ದೆ ಬೇಡ ಎಂದು ಹೇಳಿದ್ದಾರೆ ಎನ್ನಲಾಗಿದೆ. ಸಿದ್ಧರಾಮಯ್ಯ ಕೂಡ ಮುಖ್ಯಮಂತ್ರಿ ಹುದ್ದೆ ಪಟ್ಟಿ ಸಡಿಲಿಸಿಲ್ಲ ಎನ್ನಲಾಗಿದೆ. ಈ ಕಾರಣದಿಂದ ಹೈಕಮಾಂಡಿಗೆ ಹೆಸರು ಅಂತಿಮಗೊಳಿಸಲು ಸಾಧ್ಯವಾಗುತ್ತಿಲ್ಲ.
ಹೀಗಾಗಿ ನಾಳೆ ಬೆಳಿಗ್ಗೆ 11ಕ್ಕೆ ಮತ್ತೊಂದು ಸಭೆ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಹಾಗೂ ಸಿದ್ಧರಾಮಯ್ಯ ಅವರಿಬ್ಬರ ಜೊತೆ ಒಟ್ಟಾಗಿ ಚರ್ಚಿಸಿ ಅಂತಿಮಗೊಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ ಬುಧವಾರದ ಸಭೆ ತೀವ್ರ ಕುತೂಹಲ ಕೆರಳಿಸಿದೆ.

ಪ್ರಮುಖ ಸುದ್ದಿ :-   ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ- ದೃಶ್ಯ ಪ್ರಕಟಿಸದಂತೆ ತಡೆಯಾಜ್ಞೆ ತಂದ ಈಶ್ವರಪ್ಪ ಪುತ್ರ ಕಾಂತೇಶ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement