ಕರ್ನಾಟಕದಲ್ಲಿ ವರುಣನ ಆರ್ಭಟಕ್ಕೆ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ, ಏಳು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಬೆಂಗಳೂರು: ಮಳೆಯ ಆರ್ಭಟಕ್ಕೆ ಕರ್ನಾಟಕದ ಕರಾವಳಿ ಮಲೆನಾಡು, ಹಾಗೂ ಮಹಾರಾಷ್ಟ್ರದಲ್ಲಿ ಸುಇದ ಮಳೆಗೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳು ಸಂಪೂರ್ಣ ಜಲಾವೃತವಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಶನಿವಾರ ಮತ್ತು ಭಾನುವಾರ ರೆಡ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ಸಾಗರ ಹಾಗೂ ಉತ್ತರ ಕನ್ನಡದ ಸಿದ್ಧಾಪುರ, ಶಿರಸಿ, ಕುಮಟಾ, ಯಲ್ಲಾಪುರ, ಅಂಕೋಲಾದಲ್ಲಿ ಕಳೆದ ಎರಡು ದಿನಗಳಲ್ಲಿ ದಾಖಲೆಯ ಮಳೆಯಾಗಿದೆ.
ಕಳೆದ ವರ್ಷಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಈ ಬಾರಿ ದಾಖಲೆಯ ಪ್ರಮಾಣದ ಮಳೆಯಾಗುತ್ತಿದೆ. ಅನಿರೀಕ್ಷಿತವಾಗಿ ಸುರಿಯಲಾರಂಭಿಸಿದ ಮಳೆಯ ಅಬ್ಬರಕ್ಕೆ ಕರ್ನಾಟಕದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನಲ್ಲಿ ಮಳೆಯಿಂದ 12 ವರ್ಷದ ಬಾಲಕಿ ಪ್ರವಾಹದಲ್ಲಿ ಕೊಚ್ಚಿಹೋಗಿರುವ ಘಟನೆ ವರದಿಯಾಗಿದೆ. ಬೆಳಗಾವಿಯ ಯದುರವಡಿ ಗ್ರಾಮದ 300 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನ ಕೆಲವು ಹಳ್ಳಿಗಳು ಅಕ್ಷರಶಃ ದ್ವೀಪದಂತಾಗಿವೆ. ಕರ್ನಾಟಕದಲ್ಲಿ ಜುಲೈ 27ರವರೆಗೆ ವ್ಯಾಪಕ ಮಳೆಯಾಗಲಿದ್ದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಪ್ರವಾಹ, ಭೂಕುಸಿತದ ಭೀತಿ ಎದುರಾಗಿದೆ..
ರಾಜ್ಯದಲ್ಲಿ ಮಳೆಯಿಂದ ಈವರೆಗೆ 9 ಜನ ಮೃತಪಟ್ಟ ವರದಿಯಾಗಿದೆ. ಅಲ್ಲದೆ, 830 ಮನೆಗಳು ಕುಸಿದಿವೆ, 15 ಶಾಲಾ ಕಟ್ಟಡಗಳು ನೆಲಸಮವಾಗಿವೆ. ಕರ್ನಾಟಕದಾದ್ಯಂತ 8,733 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಹಾಗೂ ರಾಜ್ಯದಲ್ಲಿ ಒಟ್ಟು 80 ಸ್ಥಳಗಳಲ್ಲಿ ಪರಿಹಾರ ಕೇಂದ್ರಗಳನ್ನು ತೆರೆದಿದೆ. 12 ಜಿಲ್ಲೆಗಳಿಗೂ ಎನ್​ಡಿಆರ್​ಎಫ್​ ತಂಡಗಳನ್ನು ಕಳುಹಿಸಲಾಗಿದೆ.
ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮಳೆಯ ಅಬ್ಬರ ಶನಿವಾರ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement